ಮನೆ ಕಟ್ಟುವವರಿಗೆ ಸಿಹಿ ಸುದ್ದಿ: ಸಿಮೆಂಟ್ ದರ ಶೇಕಡ 10 ರಷ್ಟು ಕಡಿಮೆಯಾಗಲಿದೆ.

 

 

ವದೆಹಲಿ: ಜಿ.ಎಸ್‌.ಟಿ. ಮಂಡಳಿ ಸಭೆ ಫೆಬ್ರವರಿ 18 ರಂದು ನಡೆಯಲಿದ್ದು, ಸಿಮೆಂಟ್ ಮೇಲಿನ ಜಿಎಸ್‌ಟಿ ದರ ಇಳಿಕೆ ಮಾಡುವ ಸಾಧ್ಯತೆ ಇದೆ.

ಮಂಡಳಿಯ ಸಭೆಯಲ್ಲಿ ದರ ಇಳಿಕೆ ಬಗ್ಗೆ ನಿರ್ಧಾರ ಕೈಗೊಂಡಲ್ಲಿ ಸಿಮೆಂಟ್ ದರ ಶೇಕಡ 10 ರಷ್ಟು ಕಡಿಮೆಯಾಗಲಿದೆ.

ಪ್ರತಿ ಚೀಲಕ್ಕೆ 35 ರಿಂದ 40 ರೂಪಾಯಿ ಕಡಿಮೆ ಆಗಬಹುದು ಎಂದು ಹೇಳಲಾಗಿದೆ.

ಅತ್ಯಂತ ಗರಿಷ್ಠ ಜಿ.ಎಸ್.ಟಿ. ತೆರಿಗೆ ಸ್ಲ್ಯಾಬ್ ಶೇಕಡ 28ರ ದರದ ಸರಕುಗಳ ಪಟ್ಟಿಯಲ್ಲಿ ಸಿಮೆಂಟ್ ಇದೆ. ಇದನ್ನು ಕಡಿಮೆ ಮಾಡಬೇಕೆಂಬ ಬೇಡಿಕೆ ಇದ್ದು, ಸಿಮೆಂಟ್ ಮೇಲಿನ ತೆರಿಗೆ ಕಡಿಮೆ ಮಾಡಬೇಕು ಎನ್ನುವ ಉದ್ಯಮದ ಬೇಡಕೆಯನ್ನು ಪರಿಗಣಿಸುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇತ್ತೀಚೆಗೆ ಹೇಳಿದ್ದರು. ಜಿಎಸ್‌ಟಿ ಮಂಡಳಿ ಸಭೆಯಲ್ಲಿ ಸಿಮೆಂಟ್ ಮೇಲಿನ ತೆರಿಗೆ ತಗ್ಗಿಸುವ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಘಂಟಸಾಲ ಚಲನಚಿತ್ರರಂಗದ ಮಹಾನ್ ಗಾಯಕರು.

Sat Feb 11 , 2023
  ಹಿಂದಿನ ಪೀಳಿಗೆಯವರಲ್ಲಿ ಘಂಟಸಾಲ ಅವರ ಹಾಡುಗಳನ್ನು ಕೇಳದವರೇ ವಿರಳ. ಅಂದಿನ ದಿನಗಳಲ್ಲಿ ಚಿತ್ರಮಂದಿರಗಳಲ್ಲಿ ಪ್ರದರ್ಶನ ಪ್ರಾರಂಭ ಆಗುತ್ತಿದ್ದುದೇ ಘಂಟಸಾಲ ಅವರು ಹಾಡಿದ ಭಕ್ತಿಗೀತೆ “ನಮೋ ವೆಂಕಟೇಶ ನಮೋ ತಿರುಮಲೇಶ” ಎಂಬ ಹಾಡಿನಿಂದ. ಯಾವುದೇ ಗಣೇಶನ ಹಬ್ಬ ಬಂದರೆ ಘಂಟಸಾಲ ಹಾಡಿರುವ ಹಂಸಧ್ವನಿ ರಾಗದ “ವಾತಾಪಿ ಗಣಪತಿಂ ಭಜೇಹಂ” ಇರಲೇಬೇಕು. ತಿರುಪತಿಗೆ ಹೋದರೆ ಏಳೇಳು ಬೆಟ್ಟಗಳಲ್ಲೂ ಹೋದ ಹೋದೆಡೆಗಳಲ್ಲೆಲ್ಲಾ ಘಂಟಸಾಲ ಧ್ವನಿಯೇ ಮಾರ್ದನಿಸುತ್ತಿರುತ್ತದೆ.ಘಂಟಸಾಲ 1922ರ ಡಿಸೆಂಬರ್ 4ರಂದು ಆಂಧ್ರಪ್ರದೇಶದ ಕೃಷ್ಣಾಜಿಲ್ಲೆಯ […]

Advertisement

Wordpress Social Share Plugin powered by Ultimatelysocial