ಮಹಾರಾಷ್ಟ್ರ ಸಚಿವ ಧನಂಜಯ್ ಮುಂಡೆ ಅವರಿಂದ 5 ಕೋಟಿ ರೂಪಾಯಿ ಸುಲಿಗೆಗೆ ಯತ್ನಿಸಿದ ಆರೋಪದ

 

ಮುಂಬೈ, ಏ.21- ಮಹಾರಾಷ್ಟ್ರ ಸಚಿವ ಧನಂಜಯ್ ಮುಂಡೆ ಅವರಿಂದ 5 ಕೋಟಿ ರೂಪಾಯಿ ಸುಲಿಗೆಗೆ ಯತ್ನಿಸಿದ ಆರೋಪದ ಮೇಲೆ ಮಹಿಳೆಯೊಬ್ಬರ ವಿರುದ್ಧ ಪ್ರಥಮ ಮಾಹಿತಿ ವರದಿ (ಎಫ್‍ಐಆರ್) ದಾಖಲಿಸಲಾಗಿದೆ. ಮಲಬಾರ್ ಹಿಲ್ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಿಸಿದ ನಂತರ, ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಮುಂಬೈ ಪೊಲೀಸರ ಅಪರಾಧ ವಿಭಾಗಕ್ಕೆ ವರ್ಗಾಯಿಸಲಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.

ಮಲಬಾರ್ ಹಿಲ್ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಿಸಿದ ನಂತರ, ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಮುಂಬೈ ಪೊಲೀಸರ ಅಪರಾಧ ವಿಭಾಗಕ್ಕೆ ವರ್ಗಾಯಿಸಲಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.

ದೂರಿನ ಪ್ರಕಾರ ಎನ್‍ಸಿಪಿ ನಾಯಕರೂ ಆಗಿರುವ ಸಾಮಾಜಿಕ ನ್ಯಾಯ ಸಚಿವ ಮುಂಡೆ ಅವರಿಗೆ ಮಹಿಳೆ ಪರಿಚಯವಿದೆ. ಈ ವರ್ಷದ ಫೆಬ್ರವರಿ ಮತ್ತು ಮಾರ್ಚ್‍ನಲ್ಲಿ ಮಹಳೆ ಸಚಿವರಿಗೆ ಅಂತರರಾಷ್ಟ್ರೀಯ ಮೊಬೈಲ್ ಸಂಖ್ಯೆಗಳಿಂದ ಕರೆ ಮಾಡಿದ್ದಾರೆ. ಶಾಪಿಂಗ್ ಮತ್ತು ದುಬಾರಿ ಮೊಬೈಲ್ ಫೋನ್ ಕೊಡಿಸುವಂತೆ ಬೇಡಿಕೆಯಿಟ್ಟಿದ್ದಾಳೆ.

ತನ್ನ ಬೇಡಿಕೆಗಳನ್ನು ಈಡೇರಿಸದಿದ್ದರೆ ಸಾಮಾಜಿಕ ಮಾಧ್ಯಮದಲ್ಲಿ ಮಾನಹಾನಿ ಫೋಸ್ಟ್ ಹಾಕುವುದಾಗಿ ಬೆದರಿಕೆ ಹಾಕಿದ್ದಾಳೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಪ್ರಕರಣದಲ್ಲಿ ಈವರೆಗೆ ಯಾವುದೇ ಬಂಧನವಾಗಿಲ್ಲ ಎಂದು ಅವರು ತಿಳಿಸಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರಾಜ್ಯದಲ್ಲಿ ಅಜಾನ್ ವಿರುದ್ಧ ತಿರುಗಿ ಬಿದ್ದಿರುವ ಹಿಂದೂಪರ ಸಂಘಟನೆಗಳು!

Thu Apr 21 , 2022
  ಬೆಂಗಳೂರು, ಏ.21- ರಾಜ್ಯದಲ್ಲಿ ಅಜಾನ್ ವಿರುದ್ಧ ತಿರುಗಿ ಬಿದ್ದಿರುವ ಹಿಂದೂಪರ ಸಂಘಟನೆಗಳು ಮೇ 9ರಂದು ದೇವಾಲಯಗಳು ಹಾಗೂ ಮಠಗಳಲ್ಲಿ ಮೈಕ್ ಹಾಕಿ ಭಜನೆ, ಶ್ಲೋಕ ಹೇಳುವಂತೆ ಕರೆ ನೀಡಿವೆ. ಮೇ 9ರಂದು ಬೆಳಗ್ಗೆ 5 ಗಂಟೆಗೆ ದೇವಾಲಯ, ಮಠಗಳಲ್ಲಿ ಮೈಕ್ ಮೂಲಕ ಭಜನೆ, ಹನುಮಾನ್ ಚಾಲೀಸಾ ಪಠಿಸುವಂತೆ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಕರೆ ನೀಡಿದ್ದಾರೆ. ರಾಜ್ಯದ ಸುಮಾರು ನೂರು ದೇವಸ್ಥಾನ ಹಾಗೂ ಮಠಗಳಲ್ಲಿ ಮೇ 9ರಂದು ಬೆಳಗ್ಗೆ […]

Advertisement

Wordpress Social Share Plugin powered by Ultimatelysocial