ಮಹಿಳಾ ಮೀಸಲಾತಿ ಮಸೂದೆ ನಮ್ಮದು ಎಂದ ಸೋನಿಯಾ ಗಾಂಧಿ

ವದೆಹಲಿ: ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ‘ಮಹಿಳಾ ಮೀಸಲಾತಿ ಮಸೂದೆ’ ಮಂಡನೆಯಾಗಬಹುದು ಎಂಬ ಊಹಾಪೋಹಗಳ ನಡುವೆಯೇ ಕಾಂಗ್ರೆಸ್ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ, ‘ಈ ಮಸೂದೆ ನಮ್ಮದು’ ಎಂದು ಹೇಳಿಕೊಂಡಿದ್ದಾರೆ.

ಐದು ದಿನಗಳವರೆಗೆ ನಡೆಯಲಿರುವ ಸಂಸತ್‌ನ ವಿಶೇಷ ಅಧಿವೇಶ ನಿನ್ನೆಯಿಂದ ಆರಂಭಗೊಂಡಿದೆ.

ಇಂದಿನಿಂದ ಕಲಾಪಗಳು ಹೊಸ ಸಂಸತ್‌ ಭವನದಲ್ಲಿ ನಡೆಯಲಿದೆ. ಹೊಸ ಸಂಸತ್‌ ಭವನದಲ್ಲಿ ಮಹಿಳಾ ಮೀಸಲಾತಿ ಮಸೂದೆ ಮಂಡಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

ಕಲಾಪದಲ್ಲಿ ಪಾಲ್ಗೊಳ್ಳಲು ಸಂಸತ್ತಿಗೆ ಪ್ರವೇಶಿಸುತ್ತಿರುವ ವೇಳೆ ‘ಮಹಿಳಾ ಮೀಸಲಾತಿ ಮಸೂದೆ’ ಕುರಿತಂತೆ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಸೋನಿಯಾ ಗಾಂಧಿ, ‘ಇದು ನಮ್ಮದು, ಅಪ್ನಾ ಹೈ’ ಎಂದಿದ್ದಾರೆ.

ಈ ಬಗ್ಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದುಕೊಂಡಿದ್ದು, ‘ಮಹಿಳಾ ಮೀಸಲಾತಿ ಮಸೂದೆಯನ್ನು ನಾವು ಸಂಪೂರ್ಣವಾಗಿ ಸ್ವಾಗತಿಸುತ್ತೇವೆ. ಮಸೂದೆಯ ವಿವರಗಳಿಗಾಗಿ ಕಾಯುತ್ತಿದ್ದೇವೆ’ ಎಂದು ಹೇಳಿದ್ದಾರೆ.

‘ಕಲಾಪದಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಸರ್ಕಾರ ಮಂಡಿಸಿದರೆ, ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳ ಹೋರಾಟಕ್ಕೆ ಜಯ ಸಿಕ್ಕಂತಾಗುತ್ತದೆ’ ಎಂದು ಕಾಂಗ್ರೆಸ್‌ ಹಿರಿಯ ಮುಖಂಡ ಪಿ.ಚಿದಂಬರಂ ಹೇಳಿದ್ದಾರೆ.

ಮಾರ್ಚ್ 9, 2010 ರಂದು ಅಂದಿನ ಯುಪಿಎ ಸರ್ಕಾರ ರಾಜ್ಯಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸಿತ್ತು. ಆದರೆ ಲೋಕಸಭೆಯಲ್ಲಿ ಈ ವಿಷಯ ಕೈಗೆತ್ತಿಕೊಳ್ಳುವಲ್ಲಿ ವಿಫಲವಾಗಿತ್ತು.

Please follow and like us:

tmadmin

Leave a Reply

Your email address will not be published. Required fields are marked *

Next Post

ದೇಶದ ಜನತೆಗೆ 'ಗಣೇಶ ಚತುರ್ಥಿಯ' ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು | Ganesh Chathurthi

Tue Sep 19 , 2023
ನವದೆಹಲಿ:ರಾಷ್ಟ್ರಪತಿ ದ್ರೌಪದಿ ಮುರ್ಮು ಸೋಮವಾರ ಗಣೇಶ ಚತುರ್ಥಿಯ ಮುನ್ನಾದಿನದಂದು ನಾಗರಿಕರಿಗೆ ಶುಭಾಶಯ ಕೋರಿದರು ಮತ್ತು ಈ ಹಬ್ಬವು ಜೀವನದಲ್ಲಿ ವಿನಮ್ರರಾಗಿರಲು ಮತ್ತು ಸಮಾಜದಲ್ಲಿ ಸಹೋದರತ್ವವನ್ನು ಉತ್ತೇಜಿಸಲು ಎಲ್ಲರಿಗೂ ಪ್ರೇರಣೆ ನೀಡುತ್ತದೆ ಎಂದು ಹೇಳಿದರು. “ಈ ಗಣೇಶ ಚತುರ್ಥಿಯ ಹಬ್ಬವನ್ನು ಭಗವಾನ್ ಶ್ರೀ ಗಣೇಶನ ಜನ್ಮ ವಾರ್ಷಿಕೋತ್ಸವವಾಗಿ ಆಚರಿಸಲಾಗುತ್ತದೆ – ಜ್ಞಾನ, ಬುದ್ಧಿವಂತಿಕೆ ಮತ್ತು ಸಮೃದ್ಧಿಯ ಸಾರಾಂಶ, ಇದು ಉತ್ಸಾಹ, ಸಡಗರ ಸಂತೋಷದ ಹಬ್ಬವಾಗಿದೆ” ಎಂದು ಅವರು ಹೇಳಿದರು. ಈ ಹಬ್ಬವು […]

Advertisement

Wordpress Social Share Plugin powered by Ultimatelysocial