ಜೋಹಾನ್ಸ್ ಬರ್ಗ: ದಕ್ಷಿಣ ಆಫ್ರಿಕಾದ ಜನರನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಅಧ್ಯಕ್ಷ ಸಿರಿಲ್ ರಾಮಫೋಸಾ ಮಾಸ್ಕ್ ಧರಿಸುವುದು ಹೇಗೆ ಎಂದು ತೋರಿಸಲು ಹೋಗಿ ಫುಲ್ ಟ್ರೋಲ್ ಆಗಿದ್ದಾರೆ.ಕೊರೊನಾ ಸೋಂಕು ತಡೆಯಲು ದಕ್ಷಿಣ ಆಫ್ರಿಕಾದಲ್ಲಿ ಲಾಕ್ಡೌನ್ ಘೋಷಣೆ ಮಾಡಲಾಗಿದೆ. ಮೇ ೧ರ ನಂತರ ದೇಶದಲ್ಲಿ ಲಾಕ್ಡೌನ್ ಅನ್ನು ಸ್ವಲ್ಪಮಟ್ಟಿಗೆ ಸಡಿಲಗೊಳಿಸಲಾಗುವುದು ಎಂದು ಘೋಷಿಸಿದ್ದು, ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ.ತಮ್ಮ ಭಾಷಣ ಮುಗಿಯುತ್ತಿದ್ದಂತೆ ಮಾಸ್ಕ್ ಧರಿಸಲು ಮುಂದಾಗಿದ್ದಾರೆ. ಸರಿಯಾಗಿ ಮಾಸ್ಕ್ ಧರಿಸಲಾಗದೆ ಕಷ್ಟಪಟ್ಟಿದ್ದಾರೆ. ಈ ಕುರಿತ ವಿಡಿಯೋ ಸಖತ್ ವೈರಲ್ ಆಗಿದ್ದು ಕ್ಷಣ ಕಾಲ ಸಂತೋಷ ನೀಡಿದ್ದಕ್ಕೆ ದಕ್ಷಿಣ ಆಫ್ರಿಕಾ ಜನರು ಅಧ್ಯಕ್ಷರಿಗೆ ಧನ್ಯವಾದ ತಿಳಿಸಿದ್ದಾರೆ.
ಮಾಸ್ಕ್ ಧರಿಸಲು ಕಷ್ಟಪಟ್ಟ ದಕ್ಷಿಣ ಆಫ್ರಿಕಾ ಅಧ್ಯಕ್ಷ
Please follow and like us: