ಮಾ. 31 ರಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ, ಪೋಷಕರಿಗೆ ಮುಖ್ಯ ಮಾಹಿತಿ; ಸಹಾಯವಾಣಿ ಆರಂಭ

 

ಬೆಂಗಳೂರು: ಮಾರ್ಚ್ 31 ರಿಂದ ಏಪ್ರಿಲ್ 15 ರವರೆಗೆ ಎಸ್.ಎಸ್.ಎಲ್.ಸಿ. ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಸಹಾಯವಾಣಿ ಆರಂಭಿಸಲಾಗಿದೆ.

ಪರೀಕ್ಷೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು, ಪೋಷಕರಲ್ಲಿ ಯಾವುದೇ ಸಂದೇಹ, ಗೊಂದಲ, ಆತಂಕ ಪರಿಹರಿಸಲು ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಸಹಾಯವಾಣಿ ಆರಂಭಿಸಲಾಗಿದೆ.

ಮಾರ್ಚ್ 20 ರಿಂದ 28 ರವರೆಗೆ ರಜಾ ದಿನಗಳನ್ನು ಹೊರತುಪಡಿಸಿ ಉಳಿದ ದಿನಗಳಲ್ಲಿ ಮಧ್ಯಾಹ್ನ 3 ಗಂಟೆಯಿಂದ ಸಂಜೆ 7:30ರ ವರೆಗೆ ಹಾಗೂ ಮಾರ್ಚ್ 26ರಂದು ಬೆಳಗ್ಗೆ 11 ಗಂಟೆಯಿಂದ 6 ಗಂಟೆಯವರೆಗೆ ಸಹಾಯವಾಣಿ ಕಾರ್ಯನಿರ್ವಹಿಸಲಿದೆ.

ಎಸ್.ಎಸ್.ಎಲ್.ಸಿ. ಪರೀಕ್ಷೆ ಕುರಿತಾದ ಯಾವುದೇ ಗೊಂದಲ ಮಾಹಿತಿಗೆ 080 -23310075/76 ಸಂಪರ್ಕಿಸಬಹುದಾಗಿದೆ ಎಂದು ಹೇಳಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮತ್ತೊಮ್ಮೆ ರಾಜ್ಯಕ್ಕೆ ಬರಲಿರುವ ಪ್ರಧಾನಿ ಮೋದಿ; 25ರಂದು 'ಮೆಟ್ರೊ ಶೋ'

Fri Mar 17 , 2023
  ಬೆಂಗಳೂರು: ಇದೇ 25ರಂದು ಮತ್ತೊಮ್ಮೆ ರಾಜ್ಯಕ್ಕೆ ಬರಲಿರುವ ಪ್ರಧಾನಿ ನರೇಂದ್ರ ಮೋದಿ,‌ ದಾವಣಗೆರೆ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯ ಸಮಾರೋಪ ದಾವಣಗೆರೆಯಲ್ಲಿ ನಡೆಯಲಿದ್ದು, ಅದರಲ್ಲಿ ಭಾಗವಹಿಸಲಿರುವ ಪ್ರಧಾನಿ, ಚಿಕ್ಕಬಳ್ಳಾಪುರ ತಾಲ್ಲೂಕಿನ ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮದಲ್ಲಿ ಶ್ರೀಮಧುಸೂದನ್‌ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯನ್ನು ಉದ್ಘಾಟಿಸಲಿದ್ದಾರೆ. ಅದೇ ದಿನ ಬೆಂಗಳೂರಿನಲ್ಲಿ ಕೆ.ಆರ್. ಪುರ- ವೈಟ್‌ಫೀಲ್ಡ್‌ ಮೆಟ್ರೊ ಮಾರ್ಗ ಲೋಕಾರ್ಪಣೆ ಮಾಡಲಿರುವ ಅವರು […]

Advertisement

Wordpress Social Share Plugin powered by Ultimatelysocial