ಮುಂದಿನ ಜಿ20 ಅಧ್ಯಕ್ಷತೆ ಬ್ರೆಜಿಲ್‌ಗೆ ಹಸ್ತಾಂತರಿಸಿದ ಪ್ರಧಾನಿ ಮೋದಿ

 

ವದೆಹಲಿ: ಜಿ20 ಶೃಂಗಸಭೆಯ ಅಧ್ಯಕ್ಷತೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ಅಧ್ಯಕ್ಷತೆ ವಹಿಸಿಕೊಳ್ಳಲಿರುವ ಬ್ರೆಜಿಲ್‌ ದೇಶಕ್ಕೆ ಹಸ್ತಾಂತರಿಸಿದ್ದಾರೆ.

ಸುತ್ತಿಗೆಯನ್ನು (gavel) ಬ್ರೆಜಿಲ್‌ ಅಧ್ಯಕ್ಷ ಲೂಯಿಸ್‌ ಇನಾಸಿಯೊ ಲುಲಾ ಡ ಸಿಲ್ವ ಅವರಿಗೆ ಕೊಡುವ ಮೂಲಕ ಜಿ20 ಅಧ್ಯಕ್ಷತೆಯ ಜವಾಬ್ದಾರಿಯನ್ನು ಹಸ್ತಾಂತರಿಸಿದ್ದಾರೆ.

 

ನವೆಂಬರ್‌20ರಂದು ಭಾರತದ ಅಧ್ಯಕ್ಷತೆಯ ಅವಧಿ ಮುಕ್ತಾಯವಾಗಲಿದ್ದು, ಡಿಸೆಂಬರ್‌ 1 ರಿಂದ ಬ್ರೆಜಿಲ್‌ ಅಧಿಕೃತವಾಗಿ ಅಧ್ಯಕ್ಷತೆಯನ್ನು ವಹಿಸಿಕೊಳ್ಳಲಿದೆ.

ಅಧ್ಯಕ್ಷತೆ ಹಸ್ತಾಂತರಿಸಿದ ಬಳಿಕ ಬ್ರೆಜಿಲ್‌ಗೆ ಪ್ರಧಾನಿ ಮೋದಿ ಶುಭಾಶಯ ಕೋರಿದ್ದಾರೆ.

ಬ್ರೆಜಿಲ್‌ ಅಧ್ಯಕ್ಷ ಲೂಯಿಸ್‌ ಮಾತನಾಡಿ, ಪ್ರಧಾನಿ ಮೋದಿ ಅವರಿಗೆ ಅಭಿನಂದಿಸಿದ್ದು, ಆರ್ಥಿಕತೆಯನ್ನು ಸದೃಢಗೊಳಿಸಲು ಹೊಸ ವಿಚಾರಗಳಿಗೆ ಧ್ವನಿಯಾಗಿದ್ದಕ್ಕೆ ಧನ್ಯವಾದ ತಿಳಿಸಿದ್ದಾರೆ.

ಇದೇ ವೇಳೆ ಅವರು ‘ಸಾಮಾಜಿಕ ಸೇರ್ಪಡೆ, ಹಸಿವಿನ ವಿರುದ್ಧದ ಹೋರಾಟ, ಶಕ್ತಿ ಪರಿವರ್ತನೆ ಮತ್ತು ಸುಸ್ಥಿರ ಅಭಿವೃದ್ಧಿ’ಯನ್ನು ಜಿ20ಯ ಆದ್ಯತೆಗಳಾಗಿ ಪಟ್ಟಿ ಮಾಡಿದ್ದಾರೆ. ಅಲ್ಲದೆ ವಿಶ್ವ ಬ್ಯಾಂಕ್ ಮತ್ತು ಅಂತರರಾಷ್ಟ್ರೀಯ ಹಣಕಾಸು ನಿಧಿಯು ಅಭಿವೃದ್ಧಿಶೀಲ ರಾಷ್ಟ್ರಗಳಿಗೆ ಹೆಚ್ಚಿನ ಪ್ರಾತಿನಿಧ್ಯವನ್ನು ನೀಡಬೇಕೆಂದು ನಾವು ಬಯಸುತ್ತೇವೆ ಎಂದಿದ್ದಾರೆ.

 

Please follow and like us:

tmadmin

Leave a Reply

Your email address will not be published. Required fields are marked *

Next Post

ದೆಹಲಿಯ ಅಕ್ಷರಧಾಮ ದೇವಸ್ಥಾನಕ್ಕೆ ಭೇಟಿ ಬಳಿಕ ಸಂತಸ ಹಂಚಿಕೊಂಡ ರಿಷಿ ಸುನಕ್‌

Sun Sep 10 , 2023
ಬೆಂಗಳೂರು: ಬ್ರಿಟನ್‌ ಪ್ರಧಾನಿ ರಿಷಿ ಸುನಕ್‌ ದಂಪತಿ ದೆಹಲಿಯ ಅಕ್ಷರಧಾಮ ದೇವಸ್ಥಾನಕ್ಕೆ ಇಂದು ಭೇಟಿ ನೀಡಿ, ಪೂಜೆ ಸಲ್ಲಿಸಿದ್ದಾರೆ. ದೇವಸ್ಥಾನಕ್ಕೆ ಭೇಟಿ ನೀಡಿರುವ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ಭಾರತದೊಂದಿಗಿನ ಸಂಬಂಧದ ಬಗ್ಗೆ ಹೆಮ್ಮೆ ಇದೆ. ಹೆಮ್ಮೆಯ ಹಿಂದೂವಾಗಿ ಭಾರತ ಮತ್ತು ಇಲ್ಲಿಯ ಜನರೊಂದಿಗೆ ಸದಾ ಸಂಪರ್ಕವನ್ನು ಇರಿಸಿಕೊಳ್ಳುತ್ತೇನೆ ಎಂದು ಬರೆದುಕೊಂಡಿದ್ದಾರೆ. ಜಿ- 20 ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂಗ್ಲೆಂಡ್‌ ಪ್ರಧಾನಿ […]

Advertisement

Wordpress Social Share Plugin powered by Ultimatelysocial