ಮುಂದಿನ ಮೂರು ತಿಂಗಳೊಳಗೆ ನೋಂದಾಯಿತ ಎಲ್ಲರಿಗೂ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಕಾರ್ಡ್

ಬೆಂಗಳೂರು: ಮುಂದಿನ ಮೂರು ತಿಂಗಳೊಳಗೆ ನೋಂದಾಯಿತ ಎಲ್ಲರಿಗೂ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಕಾರ್ಡ್ ವಿತರಿಸುವುದಾಗಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.

ವಿಧಾನ ಪರಿಷತ್ ನಲ್ಲಿ ಕೆ. ಹರೀಶ್ ಕುಮಾರ್, ಯು.ಬಿ.

ವೆಂಕಟೇಶ್ ಅವರು ಪ್ರತ್ಯೇಕವಾಗಿ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಕಳೆದ ಮೂರು ವರ್ಷಗಳಲ್ಲಿ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯಡಿ 39.48 ಕೋಟಿ ಜನರಿಗೆ ಚಿಕಿತ್ಸೆ ನೀಡಲಾಗಿದೆ. 3000 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ತುರ್ತು ಸಂದರ್ಭದಲ್ಲಿ ರಾಜ್ಯದ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಯಾವುದೇ ದಾಖಲೆ ಇಲ್ಲದೆ ಇದ್ದರೂ ಚಿಕಿತ್ಸೆ ನೀಡಬೇಕು. ಈ ಸಂಬಂಧ ವೈದ್ಯರು, ಅರೆ ವೈದ್ಯಕೀಯ ಸಿಬ್ಬಂದಿ ಮತ್ತು ಇತರೆ ಸಿಬ್ಬಂದಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸೂಚನೆಯಲ್ಲಿ ತಿಳಿಸಲಾಗಿದೆ. ವೈದ್ಯರ ಶಿಫಾರಸು ಪತ್ರದೊಂದಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುತ್ತಿದ್ದು, ಈ ವ್ಯವಸ್ಥೆ ರದ್ದು ಮಾಡಲು ಸಾಧ್ಯವಿಲ್ಲ. ಶಿಫಾರಸು ಪತ್ರ ಇಲ್ಲದೆ ಚಿಕಿತ್ಸೆ ನೀಡಲು ಮುಂದಾದರೆ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಯಾರೂ ಬರಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ವೃಶ್ಚಿಕ ರಾಶಿ ಭವಿಷ್ಯ.

Tue Feb 21 , 2023
ದೈಹಿಕ ಲಾಭಕ್ಕಾಗಿ ವಿಶೇಷವಾಗಿ ಮಾನಸಿಕ ದೃಢತೆಗಾಗಿ ಧ್ಯಾನ ಮತ್ತು ಯೋಗ ಪ್ರಾರಂಭಿಸಿ. ಇಂದು ಮನೆಯಿಂದ ಹೊರಗೆ ಹಿರಿಯರ ಆಶೀರ್ವಾದವನ್ನು ತೆಗೆದುಕೊಂಡು ಹೋಗಿ, ಇದರಿಂದ ನೀವು ಹಣದ ಲಾಭವನ್ನು ಪಡೆಯಬಹುದು. ನೀವು ಹೆಚ್ಚೇನೂ ಮಾಡದೇ ಇತರರ ಗಮನ ಸೆಳೆಯಲು ಇದೊಂದು ಪರಿಪೂರ್ಣ ದಿನ. ಇಂದು ನೀವು ನಿಮ್ಮ ಸಂಗಾತಿಯ ಹೃದಯ ಬಡಿತಗಳ ಜೊತೆಗಿರುತ್ತೀರಿ. ಹೌದು, ಇದು ನೀವು ಪ್ರೀತಿಯಲ್ಲಿದ್ದೀರಿ ಎನ್ನುವ ಸಂಕೇತವಾಗಿದೆ! ಹೆಚ್ಚಿನ ಕೆಲಸದ ಹೊರೆತಾಗಿಯೂ ಇಂದು ಕೆಲಸದ ಸ್ಥಳದಲ್ಲಿ ನಿಮ್ಮಲ್ಲಿ […]

Advertisement

Wordpress Social Share Plugin powered by Ultimatelysocial