ಮುಂಬೈನಲ್ಲಿ ಆರು ಅಂತಸ್ತಿನ ಕಟ್ಟಡ ಕುಸಿತ

ಮುಂಬೈನಲ್ಲಿ ಆರು ಅಂತಸ್ತಿನ ಕಟ್ಟಡ ಕುಸಿದು ಆರು ಮಂದಿ ಸಾವನ್ನಪ್ಪಿರುತ್ತಾರೆ, ಹಾಗೂ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಇಂದು ಮುಂಜಾನೆ ನಡೆದಿದೆ. ಮುಂಬೈ ನಗರದ ಫೋರ್ಟ್ ಪ್ರದೇಶದಲ್ಲಿರುವ ಭಾನುಶಾಹಿ ಕಟ್ಟಡ ಕುಸಿದಿದ್ದರಿಂದ ಮನೆಯಲ್ಲಿ ಮಲಗಿದ್ದ ಕೆಲವರು ಜೀವಂತ ಸಮಾಧಿಯಾಗಿದ್ದಾರೆ. ಕುಸಿತದ ವೇಳೆ ಭಾರೀ ಶಬ್ದ ಕೇಳಿ ಹೊರಗಡೆ ಓಡಿ ಬಂದ ಅಕ್ಕಪಕ್ಕದ ಜನರು ಅಗ್ನಿಶಾಮಕ ಹಾಗೂ ತುರ್ತು ಸೇವೆ ಸಿಬ್ಬಂಧಿಗೆ ಕರೆ ಮಾಡಿದ್ದು, ಸ್ಥಳಕ್ಕೆ ಧಾವಿಸಿದ ಪರಿಹಾರ ಪಡೆ ತ್ವರಿತ ಕಾರ್ಯಾಚರಣೆ ನಡೆಸಿ ಹಲವರನ್ನು ರಕ್ಷಿಸಿದ್ದಾರೆ. ಆದರೂ ಘಟನೆಯಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದ್ದು, ಗಾಯಾಳುಗಳನ್ನು ಸರ್ಕಾರಿ ಜೆಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಮೂವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

Please follow and like us:

Leave a Reply

Your email address will not be published. Required fields are marked *

Next Post

ರಾಜ್ಯದಲ್ಲಿ ಕೊರೊನಾ ಅಟ್ಟಹಾಸ

Fri Jul 17 , 2020
ರಾಜ್ಯದಲ್ಲಿ ಒಂದೇ ದಿನ 4,169 ಮಂದಿಯಲ್ಲಿ ಕೊರೊನಾ ಸೋಂಕು ತಗುಲಿದೆ. ರಾಜಧಾನಿ ಬೆಂಗಳೂರಿನಲ್ಲೇ 2,344 ಮಂದಿಗೆ ಸೋಂಕು ಪತ್ತೆಯಾಗಿದೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 51,422 ಕ್ಕೆ ಏರಿಕೆಯಾಗಿದೆ.ಒಂದೇ ದಿನದಲ್ಲಿ 104 ಮಂದಿ ಕೊರೊನಾಗೆ ಬಲಿಯಾಗಿದ್ದು, ಒಟ್ಟು ರಾಜ್ಯದಲ್ಲಿ ಮಹಾಮಾರಿ ಕೊರೊನಾಗೆ ಬಲಿಯಾದವರ ಸಂಖ್ಯೆ 1032 ಕ್ಕೆ ಏರಿಕೆಯಾಗಿದೆ. 1263 ಮಂದಿ ಕೊರೊನಾದಿಂದ ಚಿಕಿತ್ಸೆ ಪಡೆದು ಬಿಡುಗಡೆಯಾಗಿದ್ದಾರೆ, ಇದುವರೆಗೂ 19729 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.  ಇನ್ನೂ ಉಳಿದ 30,655 ಮಂದಿ ಕೊರೊನಾದಿಂದ […]

Advertisement

Wordpress Social Share Plugin powered by Ultimatelysocial