ಮುಂಬೈ ಇಂಡಿಯನ್ಸ್ ತಂಡಕ್ಕೆ ಆಘಾತ: ಬುಮ್ರಾ ಐಪಿಎಲ್‌ನಲ್ಲಿ ಆಡೋದೆ ಅನುಮಾನ, ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೂ ಅಲಭ್ಯ?

ಭಾರತ ತಂಡ ಮತ್ತು ಮುಂಬೈ ಇಂಡಿಯನ್ಸ್ ತಂಡಕ್ಕೆ ಆಘಾತಕಾರಿ ಸುದ್ದಿ ಸಿಕ್ಕಿದೆ. ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಫಿಟ್ ಆಗಲು ಇನ್ನೂ ಹೆಚ್ಚಿನ ಸಮಯ ಬೇಕಿದ್ದು, ಈ ಬಾರಿ ಐಪಿಎಲ್‌ನಲ್ಲಿ ಆಡುವುದೇ ಅನುಮಾನ ಎಂದು ಹೇಳಲಾಗಿದೆ.

ಮೂಲಗಳ ಪ್ರಕಾರ ಜೂನ್‌ನಲ್ಲಿ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್ ವೇಳೆಗೂ ಬುಮ್ರಾ ಫಿಟ್ ಆಗುವುದು ಅನುಮಾನ ಎನ್ನಲಾಗಿದೆ.

ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದ ಬುಮ್ರಾ ಫಿಟ್ ಆಗದ ಕಾರಣ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಮತ್ತು ಏಕದಿನ ಸರಣಿಯಿಂದ ಹೊರಗುಳಿದಿದ್ದರು.

2022ರ ಸೆಪ್ಟಂಬರ್ ತಿಂಗಳಿನಲ್ಲಿ ಬುಮ್ರಾ ಭಾರತದ ಪರವಾಗಿ ಕೊನೆಯ ಟಿ20 ಪಂದ್ಯವನ್ನು ಆಡಿದ್ದರು. ಅದಾದ ಬಳಿಕ ಬೆನ್ನು ಮೂಳೆ ಒತ್ತಡ ಕಾಣಿಸಿಕೊಂಡಿದ್ದರಿಂದ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಿಂದ ಹೊರಗುಳಿದಿದ್ದರು.

ಅಂದಿನಿಂದಲೂ ವಿಶ್ರಾಂತಿ ಪಡೆದ ಬುಮ್ರಾ 2023ರ ಜನವರಿಯಿಂದ ಭಾರತ ತಂಡಕ್ಕೆ ಮರಳಲು ಶತಪ್ರಯತ್ನ ಮಾಡುತ್ತಿದ್ದಾರೆ. ಎನ್‌ಸಿಎನಲ್ಲಿ ಸಾಕಷ್ಟು ಬೆವರು ಹರಿಸಿದ ನಂತರ ಅವರನ್ನು ಶ್ರೀಲಂಕಾ ವಿರುದ್ಧದ ಸರಣಿಗೆ ಆಯ್ಕೆ ಮಾಡಿದ್ದರಾದರು, ವೈದ್ಯರ ಸಲಹೆ ಮೇರೆಗೆ ಮತ್ತೆ ತಂಡದಿಂದ ಕೈಬಿಡಲಾಗಿತ್ತು.

ನಂತರ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿ ಮತ್ತು ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ಆಡುವ ನಿರೀಕ್ಷೆ ಇತ್ತಾದರೂ ಸಂಪೂರ್ಣವಾಗಿ ಚೇತರಿಸಿಕೊಳ್ಳದ ಕಾರಣ ಅವರನ್ನು ತಂಡಕ್ಕೆ ಆಯ್ಕೆ ಮಾಡಲಿಲ್ಲ.

ಐಪಿಎಲ್‌ನಿಂದಲೂ ಹೊರ ಬೀಳುವ ಸಾಧ್ಯತೆ

2023ರಲ್ಲಿ ಏಕದಿನ ವಿಶ್ವಕಪ್ ಇರುವ ಕಾರಣ ಬುಮ್ರಾ ಲಭ್ಯತೆ ಭಾರತಕ್ಕೆ ಪ್ರಮುಖವಾಗಲಿದೆ. ಬುಮ್ರಾ ವಿಚಾರದಲ್ಲಿ ಬಿಸಿಸಿಐ ಯಾವುದೇ ಅವಸರ ಮಾಡದೇ ಇರಲು ನಿರ್ಧರಿಸಿದೆ. ಅವರು ಐಪಿಎಲ್‌ನಲ್ಲಿ ಆಡುತ್ತಾರೆ ಎಂದು ಹೇಳಿತ್ತಾದರೂ, ಕೆಲಸದ ಒತ್ತಡ ನಿರ್ವಹಣೆ ಮಾಡಲು ತಿಳಿಸಿತ್ತು.

ಆದರೆ ಈಗ ಬಂದಿರುವ ಮಾಹಿತಿ ಪ್ರಕಾರ ಬುಮ್ರಾ ಐಪಿಎಲ್‌ನಿಂದ ಕೂಡ ದೂರವುಳಿಯಬೇಕಾಗಿದೆ. ಇದು ಮುಂಬೈ ಇಂಡಿಯನ್ಸ್ ತಂಡಕ್ಕೆ ಭಾರಿ ಹಿನ್ನಡೆಯಾಗಲಿದೆ. ಬುಮ್ರಾ ಚೇತರಿಸಿಕೊಳ್ಳಲು ನಿರೀಕ್ಷೆ ಮಾಡಿದ್ದಕ್ಕಿಂತ ಹೆಚ್ಚಿನ ಸಮಯ ತೆಗೆದುಕೊಳ್ಳುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿರುವುದಾಗಿ ವರದಿಯಾಗಿದೆ.

ಕ್ರಿಕ್‌ಬುಜ್ ವರದಿ ಮಾಡಿರುವ ಪ್ರಕಾರ, ಬುಮ್ರಾ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ ಅವರು ಸಂಪೂರ್ಣವಾಗಿ ಗುಣಮುಖರಾಗಲು ದೀರ್ಘಕಾಲದ ವಿಶ್ರಾಂತಿಯ ಅಗತ್ಯವಿದೆ. ಬಿಸಿಸಿಐನ ಕೆಲವು ಮೂಲಗಳ ಪ್ರಕಾರ ಬುಮ್ರಾರನ್ನು ಸೆಪ್ಟೆಂಬರ್ ನಲ್ಲಿ ನಡೆಯಲಿರುವ ಏಷ್ಯಾಕಪ್‌ ವೇಳೆಗೆ ಭಾರತ ತಂಡಕ್ಕೆ ಕರೆತರುವ ಸಾಧ್ಯತೆ ಇದೆ ಎನ್ನಲಾಗಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

14 ಕೋಟಿ ಅನುದಾನ, 148 ಶಾಲೆಗಳಲ್ಲಿ ನಿರ್ಮಾಣ!.

Mon Feb 27 , 2023
  ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವಿವೇಕ ಶಾಲಾ ಕೊಠಡಿಗಳ ನಿರ್ಮಾಣ ಯೋಜನೆ ಅಡಿಯಲ್ಲಿ ಮೈಸೂರು ಜಿಲ್ಲೆಯ 272 ಸರಕಾರಿ ಶಾಲೆಗಳಿಗೆ ಹೊಸ ಕೊಠಡಿ ಭಾಗ್ಯ ಲಭಿಸಿದ್ದು, 148 ಶಾಲೆಗಳಲ್ಲಿ ಕಾಮಗಾರಿ ಪ್ರಾರಂಭವಾಗಿದೆ.ಜಿಲ್ಲೆಯಲ್ಲಿ ಸಾಕಷ್ಟು ಶಾಲೆಗಳು ಕಟ್ಟಡ ಕೊರತೆ ಎದುರಿಸುತ್ತಿವೆ. ಇದರಿಂದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಡಕಾಗುತ್ತಿತ್ತು. ಇದೀಗ ವಿವೇಕ ಕೊಠಡಿ ಯೋಜನೆಯಡಿ ಜಿಲ್ಲೆಯ 272 ಸರಕಾರಿ ಶಾಲೆಗಳಿಗೆ ಹೊಸ ಕೊಠಡಿಗಳು ನಿರ್ಮಾಣವಾಗುತ್ತಿವೆ. ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹಾಗೂ […]

Advertisement

Wordpress Social Share Plugin powered by Ultimatelysocial