ಮೈಶುಗರ್ ಕಾರ್ಖಾನೆ ಖಾಸಗೀಕರಣ ಬೇಡ /ಮುಖ್ಯಮಂತ್ರಿಗೆ ಸಿದ್ದರಾಮಯ್ಯ ಮನವಿ

ಸಾವಿರಾರು ಕೋಟಿ ಮೌಲ್ಯದ ಮೈಶುಗರ್ ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಖಾಸಗಿ ವ್ಯಕ್ತಿಗಳಿಗೆ ಮಾರಾಟ ಮಾಡಬಾರದು. ಸರ್ಕಾರವೆ ಬಂಡವಾಳ ಹೂಡಿ ಆಧುನೀಕರಿಸಿ, ಬಲಪಡಿಸಬೇಕು ಎಂದು ಆಗ್ರಹಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.  ಮೈಶುಗರ್ ಕಾರ್ಖಾನೆಯಲ್ಲಿ ಸುಮಾರು ೧೪,೦೪೬ ರೈತರು ಷೇರುದಾರರಿದ್ದಾರೆ. ನಿತ್ಯ ೫ಸಾವಿರ ಟನ್ ಕಬ್ಬು ಅರೆಯುವ ಸಾಮರ್ಥ್ಯ ಈ ಕಾರ್ಖಾನೆಗಿದೆ. ಈ ಹಿಂದೆ ಸುಮಾರು ೨೨೯.೬೫ ಕೋಟಿ ರೂ. ನೀಡಿ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಲು ಪ್ರಯತ್ನಿಸಲಾಗಿತ್ತು. ಇದೀಗ ಈ ಕಾರ್ಖಾನೆಯನ್ನು ಖಾಸಗಿಯವರೆಗೆ ಮಾರಾಟ ಮಾಡಲು ರಾಜ್ಯ ಸರ್ಕಾರ ಮುಂದಾಗಿರುವುದು ದುರದೃಷ್ಟಕರ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಐಶಾರಾಮಿ ಕಾರಿಗೆ ಬೆಂಕಿ

Sat Jun 6 , 2020
ಬೆಂಗಳೂರಿನಲ್ಲಿ ಇಂದು ಬೆಳ್ಳಗೆ ಸುಮಾರು 5 ಗಂಟೆಗೆ ಐಶಾರಾಮಿ ಬೆಜ್ ಕಾರೊಂದು ಶಾಕ್ ಸರ್ಕ್ಯೂಟ್ ನಿಂದ ಉರಿದಿದೆ ಕಸ್ತೂರಬಾ ರಸ್ತೆಯಲ್ಲಿ ಈ ಘಟನೆ ನಡೆದಿದೆ ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರ್ ಮಾಲೀಕ ತಕ್ಷಣ ಅಗ್ನಿ ಶಾಮಕ ಠಾಣೆಗೆ ಸಂರ್ಪಕಿಸಿದ್ದಾನೆ ಸಳ್ಥಕ್ಕೆ ಬಂದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಕಬ್ಬನ್​ ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.             Please […]

Advertisement

Wordpress Social Share Plugin powered by Ultimatelysocial