ಮೊಳಕಾಲ್ಮೂರಿನಿಂದ ಸ್ಪರ್ಧಿಸಲಾರೆ: ಸಚಿವ ಶ್ರೀರಾಮುಲು ಹೇಳಿಕೆ

 

 

ಮೊಳಕಾಲ್ಮೂರು: ಸಾರಿಗೆ-ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶ್ರೀರಾಮುಲು ಈ ಬಾರಿ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಕ್ಷೇತ್ರದಲ್ಲಿ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಚುನಾವಣೆಯಲ್ಲಿ ಮೊಳಕಾಲ್ಮೂರು ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ.

ಕ್ಷೇತ್ರಕ್ಕೆ ಬರಲು ದೂರ ಮತ್ತು ಕಷ್ಟವಾಗುತ್ತಿದೆ. ಹಾಗಾಗಿ ಬಳ್ಳಾರಿ ಜಿಲ್ಲೆಯಲ್ಲಿ ಸ್ಪರ್ಧಿಸುತ್ತೇನೆ ಎಂದರು.

ಮೊಳಕಾಲ್ಮೂರು ಕ್ಷೇತ್ರದಿಂದಲೇ ಸ್ಪರ್ಧಿಸಬೇಕೆಂದು ಈ ಕ್ಷೇತ್ರದ ಅಭಿಮಾನಿಗಳು ಮತ್ತು ಬಿಜೆಪಿ ಕಾರ್ಯಕರ್ತರು ಆಗ್ರಹಿಸುತ್ತಿದ್ದಾರೆ. ಆದರೆ ಬಳ್ಳಾರಿ ಜಿಲ್ಲೆಯಲ್ಲೇ ಸ್ಪರ್ಧಿಸಲು ನಿರ್ಧರಿಸಿದ್ದು, ಕ್ಷೇತ್ರ ಅಖೈರುಗೊಳಿಸಿಲ್ಲ.

ಮೊಳಕಾಲ್ಮೂರು ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗಿದೆ. ಕ್ಷೇತ್ರದ ಬಹುತೇಕ ಹಳ್ಳಿಗಳಿಗೆ ಹೋಗಲು ಸಾಧ್ಯವಾಗದ್ದು ಹಾಗೂ ಸ್ಥಳೀಯರಿಗೆ ಅವಕಾಶ ಮಾಡಿಕೊಡುವ ದೃಷ್ಟಿಯಿಂದ ಇಲ್ಲಿಂದ ಸ್ಪರ್ಧಿಸದಿರಲು ನಿರ್ಧರಿಸಿರುವುದಾಗಿ ತಿಳಿಸಿದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

 

Please follow and like us:

Leave a Reply

Your email address will not be published. Required fields are marked *

Next Post

ರಾಜ್ಯಕ್ಕೆ ಚುನಾವಣ ಆಯೋಗದ ಹಿರಿಯ ಅಧಿಕಾರಿಗಳ ತಂಡ ಭೇಟಿ

Sun Feb 12 , 2023
  ಬೆಂಗಳೂರು: ವಿಧಾನ ಸಭೆ ಚುನಾವಣೆಗೆ ಕೇಂದ್ರ ಚುನಾವಣ ಆಯೋಗ ಎಲ್ಲ ರೀತಿಯ ಸಿದ್ಧತೆಗಳನ್ನು ಪ್ರಾರಂಭಿಸಿದ್ದು, ಜಿಲ್ಲಾ ಮಟ್ಟದಲ್ಲಿ ನಡೆಯುತ್ತಿರುವ ಪೂರ್ವತಯಾರಿಗಳ ಪರಿಶೀಲನೆ ಗಾಗಿ ಕೇಂದ್ರ ಚುನಾವಣ ಆಯೋಗದ 3 ತಂಡಗಳು ರಾಜ್ಯ ಪ್ರವಾಸ ಮಾಡಿ ಮಾಹಿತಿ ಸಂಗ್ರಹಿಸಿವೆ. ಜಿಲ್ಲಾ ಮಟ್ಟದಲ್ಲಿ ಕೈಗೊಂಡಿರುವ ಚುನಾವಣೆ ಸಿದ್ಧತೆ, ಮತದಾರರ ಪಟ್ಟಿ ಮತ್ತಿತರ ಪ್ರಕ್ರಿಯೆ ಕುರಿತು ಸ್ಥಳೀಯ ಅಧಿಕಾರಿಗಳೊಂದಿಗೆ ಸಭೆ ಮಾಡಿ ಸಮಾಲೋಚಿಸಿ ಇವಿಎಂ ಮತ್ತು ವಿವಿಪ್ಯಾಟ್‌ಗಳ ಪ್ರಾಥಮಿಕ ಹಂತದ ಪರಿಶೀಲನೆ ನಡೆಸಿದೆ. […]

Advertisement

Wordpress Social Share Plugin powered by Ultimatelysocial