ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಅಪರಧ ಪ್ರಕರಣಗಳು ಹೆಚ್ಚಾಗುತ್ತಿದ್ದು; ಬೆಂಗಳೂರಿಗೆ ಹೆಚ್ಚುವರಿ 2000 ಪೋಲಿಸರನ್ನ ನಿಯೋಜಿಸಿದ ರಾಜ್ಯ ಸರ್ಕಾರ

 

ಬೆಂಗಳೂರು,ಫೆಬ್ರವರಿ20: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಅಪರಧ ಪ್ರಕರಣಗಳು ಹೆಚ್ಚಾಗುತ್ತಿದ್ದು, ಬೆಂಗಳೂರಿನ ಪೊಲೀಸ್ ಇಲಾಖೆಯನ್ನ ಬಲ ಪಡಿಸುವ ನಿಟ್ಟಿನಲ್ಲಿ 2000 ಪೋಲಿಸರನ್ನು ಬೆಂಗಳೂರು ನಗರಕ್ಕೆ ನಿಯೋಜಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬೆಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆಯನ್ನ ಕಾಪಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಈ ನಿರ್ಣಯವನ್ನ ಕೈಗೊಂಡಿದ್ದು, ಸರ್ಕಾರದ ಈ ನಿರ್ಣಯಕ್ಕೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಟ್ವೀಟರ್ ಮೂಲಕ ಧನ್ಯವಾದ ಹೇಳಿದ್ದಾರೆ.

2000 ಪೊಲೀಸ್ ರ ನಿಯೋಜನೆಯಿಂದಾಗಿ ಹೆಚ್ಚಿನ ಅನುಕೂಲವಾಗಲಿದ್ದು, ಹೆಚ್ಚಿನ ಕಾರ್ಯಕ್ಷಮತೆಯಿಂದಾಗಿ ಬೆಂಗಳೂರಿನ ನಗರದಲ್ಲಿ ಇಲಾಖೆ ಕಾರ್ಯ ನಿರ್ವಹಿಸುತ್ತದೆ ಎಂದು ಟ್ವೀಟರ್ ಮೂಲಕ ಹೇಳಿದ್ದಾರೆ.

ಬೆಂಗಳೂರು ನಗರಕ್ಕೆ 2000 ಪೊಲೀಸರನ್ನು ನಿಯೋಜನೆ ಮಾಡುವುದರಿಂದ ಬೆಂಗಳೂರು ಪೊಲೀಸ್ ಇಲಾಖೆಯಲ್ಲಿ ಶೇ 11% ಪ್ರತಿಶತದಷ್ಟು ಪೊಲೀಸ್ ಸಿಬ್ಬಂದಿ ಸಂಖ್ಯೆ ಏರಿಕೆಯಾಗುತ್ತದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಅವರು ಟ್ವೀಟರ್ ಮೂಲಕ ತಿಳಿಸಿದ್ದಾರೆ. ಇನ್ನೂ ಬೆಂಗಳೂರು ನಗರದಲ್ಲಿ ಅಪರಾಧ ಪ್ರಕರಣಗಳನ್ನು ತಡೆಗಟ್ಟಲು ರಾಜ್ಯ ಸರ್ಕಾರರ ಬಜೆಟ್ ನಲ್ಲಿ 20 ಪೊಲೀಸ್ ಠಾಣೆಗಳನ್ನ ತೆರೆಯಲು ಹಣ ಮೀಸಲಿಡಲಾಗಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಐಪಿಎಸ್ ರೂಪಾಗೆ ಮಾನಸಿಕ ಕಾಯಿಲೆ ಚಿಕಿತ್ಸೆ ಅಗತ್ಯ ಐಎಎಸ್ ರೋಹಿಣಿ ಚಾಟಿ.

Mon Feb 20 , 2023
ಮಾನಸಿಕ ಕಾಯಿಲೆ ಬಹುದೊಡ್ಡ ಸಮಸ್ಯೆಯಾಗಿದ್ದು,ಇದಕ್ಕೆ ಔಷಧಿ ಹಾಗೂ ಕೌನ್ಸಿಲಿಂಗ್ ಅವಶ್ಯಕತೆಯಿದೆ. ಜವಾಬ್ದಾರಿ ಸ್ಥಾನದಲ್ಲಿರುವವರಿಗೆ ಈ ರೀತಿಯ ಸಮಸ್ಯೆ ಬಂದರೇ ತುಂಬಾ ಅಪಾಯ ಎಂದು ಐಜಿಪಿ ಆಗಿರುವ ಐಪಿಎಸ್ ರೂಪಾ ಆರೋಪಗಳಿಗೆ ಹೇಳಿಕೆಗೆ ಐಎಎಸ್ ರೋಹಿಣಿ ಸಿಂಧೂರಿ ತಿರುಗೇಟು ನೀಡಿದಾರೆ.ರೂಪಾ ಆರೋಪಗಳ ಪಟ್ಟಿ ಸಂಬಂಧ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ ಅವರು, ಐಪಿಎಸ್  ರೂಪಾ  ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ನನ್ನ ಮೇಲೆ ಹಬ್ಬಿಸುತ್ತಿರುವ ಸುಳ್ಳು ಆಪಾದನೆಗಳೆಲ್ಲ ವ್ಯವಸ್ಥಿತ ಪಿತೂರಿಯಾಗಿದೆ.ಎಲ್ಲಾ ಕಡೆಯೂ ಹೀಗೆ […]

Advertisement

Wordpress Social Share Plugin powered by Ultimatelysocial