ರಾಜೀವ್  ಬಜಾಜ್  ರಾಹುಲ್ ಗಾಂಧಿ ವಿಡಿಯೋ ಕಾನ್ಫರೆನ್ಸ್

ನವದೆಹಲಿ: ಕೊರೊನಾ ವೈರಸ್ ವಿರುದ್ಧದ ಹೋರಾಟದ ಭಾಗವಾಗಿ ಹೇರಲಾಗಿರುವ ಸರಣಿ ಲಾಕ್‌ಡೌನ್ ವಿಫಲವಾಗಿದೆ ಎಂದು ಬಜಾಜ್ ಆಟೋ ವ್ಯವಸ್ಥಾಪಕ ನಿರ್ದೇಶಕ ರಾಜೀವ್ ಬಜಾಜ್ ಆರೋಪಿಸಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ ರಾಜೀವ್ ಬಜಾಜ್, ಲಾಕ್‌ಡೌನ್ ಹೇರಿಕೆ ಕೊರೊನಾ ವೈರಸ್‌ನ್ನು ನಿಯಂತ್ರಿಸುವ ಬದಲು ದೇಶದ ಅರ್ಥ ವ್ಯವಸ್ಥೆಯನ್ನು ಬಲಹೀನಗೊಳಿಸಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಲಾಕ್‌ಡೌನ್‌ನಿಂದ ಕೊರೊನಾ ವೈರಸ್ ನಿಯಂತ್ರಣಕ್ಕೆ ಬಂದಿಲ್ಲ. ಭಾರತದ ಉತ್ಪಾದನಾ ವಲಯದ ಬಲ ಕುಂದಿದ್ದು, ಇದು ಮತ್ತೆ ಚೇತರಿಸಿಕೊಳ್ಳಲು ಬಹಳ ಸಮಯ ಹಿಡಿಯಲಿದೆ ಎಂದು ರಾಜೀವ್ ಬಜಾಜ್ ಅಂದಾಜಿಸಿದ್ದಾರೆ.

ಕೊರೊನಾ ವೈರಸ್ ಹಾವಳಿಯ ಸಂದರ್ಭದಲ್ಲಿ ಜಪಾನ್ ಮತ್ತು ಸ್ವಿಡನ್ ದೇಶಗಳು ಲಾಕ್‌ಡೌನ್ ಹೇರಿರಲಿಲ್ಲ. ಆದರೆ ದೇಶದ ಆರ್ಥಿಕ ಚಟುವಟಿಕೆಗಳನ್ನು ಮುಂದುವರೆಸಿಕೊಂಡೇ ವೈರಸ್‌ನ್ನು ಪರಿಣಾಮಕಾರಿಯಾಗಿ ನಿಯಂತ್ರಣಕ್ಕೆ ತಂದವು ಎಂದು ರಾಜೀವ್ ಮಾಹಿತಿ ನೀಡಿದರು. ಇನ್ನು ರಾಜೀವ್ ಬಜಾಜ್ ಅಭಿಪ್ರಾಯವನ್ನು ಬೆಂಬಲಿಸಿ ಮಾತನಾಡಿದ ರಾಹುಲ್ ಗಾಂಧಿ, ಎರಡನೇ ವಿಶ್ವ ಯುದ್ಧದ ಸಂದರ್ಭದಲ್ಲೂ ಜಗತ್ತಿನ ಎಲ್ಲಾ ರಾಷ್ಟ್ರಗಳು ಸಂಪೂರ್ಣ ಲಾಕ್‌ಡೌನ್ ಹೇರಿರಲಿಲ್ಲ ಎಂದು ಹೇಳಿದ್ದಾರೆ.

ದೇಶದ ಉತ್ಪದನಾ ವಲಯ, ಕೃಷಿ ವಲಯ ಪಾತಾಳಕ್ಕೆ ಕುಸಿದಿದ್ದು, ಕೇವಲ ವಿಶೇಷ ಆರ್ಥಿಕ ಪ್ಯಾಕೇಜ್‌ನಿಂದ ಏನೂ ಸಾಧಿಸಲಾಗದು ಎಂದು ರಾಹುಲ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ. ಕೊರೊನಾ ವೈರಸ್ ನಿಯಂತ್ರಣದಲ್ಲಿದ್ದಾಗ ಲಾಕ್‌ಡೌನ್ ಹೇರಿ, ಕೊರೊನಾ ವೈರಸ್ ಆರ್ಭಟ ಜೋರಾಗಿರುವಾಗ ಲಾಕ್‌ಡೌನ್ ತೆರವುಗೊಳಿಸಿದ ವಿಶ್ವದ ಏಕೈಕ ದೇಶ ಭಾರತ ಎಂದೂ ರಾಹುಲ್ ಈ ವೇಳೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಮಕ್ಕಳಿಗೆ ಚೂರಿಯಿಂದ ಇರಿದ ಭದ್ರತಾ ಸಿಬ್ಬಂದಿ

Thu Jun 4 , 2020
ಬೀಜಿಂಗ್: ಪ್ರಾಥಮಿಕ ಶಾಲೆಯ ಭದ್ರತಾ ಸಿಬ್ಬಂದಿಯೊಬ್ಬ ಚೂರಿಯಿಂದ ದಾಳಿ ನಡೆಸಿದ ಪರಿಣಾಮ 40 ಮಂದಿ ಮಕ್ಕಳು ಹಾಗೂ ಶಾಲೆಯ ಸಿಬ್ಬಂದಿಗಳು ಗಾಯಗೊಂಡಿರುವ ಘಟನೆ ಚೀನಾದಲ್ಲಿ ನಡೆದಿದೆ.ಚೀನಾದ ದಕ್ಷಿಣ ಗುವಾಂಕ್ಸಿ ಪ್ರಾಂತ್ಯದ ಶಾಲೆಯೊಂದರಲ್ಲಿ ಈ ಘಟನೆ ನಡೆದಿರುವುದಾಗಿ ಚೀನಾ ಸರ್ಕಾರ ಪ್ರಾಯೋಜಕತ್ವದ ದೈನಿಕದ ವರದಿ ವಿವರಿಸಿದೆ. ಮೂವರು ಪುಟ್ಟ ಮಕ್ಕಳ ಸ್ಥಿತಿ ಗಂಭೀರವಾಗಿರುವುದಾಗಿ ಸಿಜಿಟಿಎನ್ ಟಿವಿ ವರದಿ ಮಾಡಿದೆ. ಚೂರಿಯಿಂದ ದಾಳಿ ನಡೆಸಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದು, ಗಾಯಗೊಂಡಿರುವ ಮಕ್ಕಳನ್ನು ಆಸ್ಪತ್ರೆಗೆ […]

Advertisement

Wordpress Social Share Plugin powered by Ultimatelysocial