ರಾಜ್ಯದಲ್ಲಿ ಕೊರೊನಾ ಮಹಾಮಾರಿ ಅಟ್ಟಹಾಸ

ಕರ್ನಾಟಕದಲ್ಲಿ ಮಹಾಮಾರಿ ಕೊರೊನಾ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಸದ್ಯಕ್ಕೆ ಶಾಲೆಗಳು ಆರಂಭವಾಗುವ ಸಾಧ್ಯತೆ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಸ್ಪಷ್ಟಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಸಚಿವರು ಈ ವಿಷಯವನ್ನು ಸ್ಪಷ್ಟಪಡಿಸಿದ್ದಾರೆ.ಯಾವುದೇ ಕಾರಣಕ್ಕೂ ಸದ್ಯದ ಮಟ್ಟಿಗೆ ಶಾಲೆಗಳನ್ನು ಆರಂಭಿಸುವ ಮಾತೇ ಇಲ್ಲ ಎಂದು ವೈದ್ಯ ಶಿಕ್ಷಣ ಸಚಿವ ಸುಧಾಕರ್ ತಿಳಿಸಿದರು. ಕೇಂದ್ರ ಮತ್ತು ರಾಜ್ಯ ಸರಕಾರಗಳೆರಡೂ ಮಕ್ಕಳ ಆರೋಗ್ಯ ಕಾಪಾಡಲು ಬದ್ಧವಾಗಿವೆ. ಶಾಲೆಗಳನ್ನು ತೆರೆದರೆ ಸೋಂಕು ಹರಡುವ ಸಾಧ್ಯತೆ ಹೆಚ್ಚಿರುವುದರಿಂದ ಈಗಲೇ ಶಾಲೆ ಆರಂಭವಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

Please follow and like us:

Leave a Reply

Your email address will not be published. Required fields are marked *

Next Post

ಖಾಸಗಿ ಮೆಡಿಕಲ್ ಕಾಲೇಜು,ಆಸ್ಪತ್ರೆಗಳಿಗೆ ಸಿಎಂ ಎಚ್ಚರಿಕೆ

Sun Jul 19 , 2020
ಕೋವಿಡ್ 19ರ ರೋಗಿಗಳಿಗೆ ಹಾಸಿಗೆ ನಿರಾಕರಿಸಬಾರದು,ಖಾಸಗಿ ಆಸ್ಪತ್ರೆಗಳು ಒಂದು ವೇಳೆ ನಿರಾಕರಿಸಿದರೆ ಅಂತಹ ಆಸ್ಪತ್ರೆಗಳ ವಿರುದ್ದ ಕಾನೂನು ಕ್ರಮ ಕೈಗೊಳ್ಳುವುದಾಗಿ ಖಾಸಗಿ ಮೆಡಿಕಲ್ ಕಾಲೇಜು ಆಸ್ಪತ್ರೆಗಳಿಗೆ ಖಡಕ್ ಎಚ್ಚರಿಕೆ ನೀಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು. ಖಾಸಗಿ ಮೆಡಿಕಲ್ ಕಾಲೇಜು ಆಸ್ಪತ್ರೆಗಳ ಮುಖ್ಯಸ್ಥರ ಜೊತೆ ಮುಖ್ಯಮಂತ್ರಿ ಸಭೆ ಬಳಿಕ ಮಾತನಾಡಿದ ಅವರು, 50% ಹಾಸಿಗೆಯನ್ನು ಬಿಟ್ಟುಕೊಡಬೇಕು ಎಂದಿದ್ದಾರೆ. ಹಾಗೆಯೇ ಇನ್ನು ಮುಂದೆ ನಾನು ಯಾವ ಸಭೆಯನ್ನು ನಡೆಸುವುದಿಲ್ಲ. ಕಷ್ಟದ  […]

Advertisement

Wordpress Social Share Plugin powered by Ultimatelysocial