ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 589ಕ್ಕೆ ಏರಿಕೆ

ರಾಜ್ಯದಲ್ಲಿ ಇಂದು 24 ಜನರಿಗೆ ಹೊಸದಾಗಿ ಕೊರೋನಾ ವೈರಸ್ ಸೋಂಕು ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 589 ಕ್ಕೇರಿಕೆಯಾಗಿದೆ ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ನಿಂದ್ ತಿಳಿದು ಬಂದಿದೆ. ಹೊಸದಾಗಿ ಸೋಂಕಿತರ  ಪೈಕಿ ಮಂಡ್ಯ ಜಿಲ್ಲೆಯಲ್ಲಿ ಎಂಟು ಜನರಿಗೆ, ಬೆಳಗಾವಿಯ ರಾಯಭಾಗದ ಮೂವರಿಗೆ, ವಿಜಯಪುರದಲ್ಲಿ ಒಬ್ಬರಿಗೆ, ದಕ್ಷಿಣ ಕನ್ನಡದಲ್ಲಿ ಇಬ್ಬರಿಗೆ, ದಾವಣಗೆರೆಯ ಆರು ಜನರಿಗೆ, ಚಿಕ್ಕಬಳ್ಳಾಪುರದಲ್ಲಿ ಒಬ್ಬರಿಗೆ, ಕಲಬುರ್ಗಿಯಲ್ಲಿ ಇಬ್ಬರಿಗೆ ಹಾಗೂ ಹುಬ್ಬಳ್ಳಿ-ಧಾರವಾಡದಲ್ಲಿ ಒಬ್ಬರಿಗೆ ಕೊರೋನಾ ವೈರಸ್ ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 589ಕ್ಕೆ ಏರಿಕೆಯಾಗಿದೆ. ಕೊರೋನಾ ಸೋಂಕಿನಿಂದಾಗಿ ರಾಜ್ಯದಲ್ಲಿ 22 ಜನರು ಸಾವನ್ನಪ್ಪಿದ್ದಾರೇ, ಕೊರೋನಾ ಪೀಡಿತರಾಗಿದ್ದಂತ 251 ಜನರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

2 ವಾರಗಳ ಕಾಲ ಲಾಕ್ ಡೌನ್ ವಿಸ್ತರಣೆ ಮಾಡಿ ಕೇಂದ್ರ ಗೃಹ ಸಚಿವಾಲಯ ಆದೇಶ…!

Fri May 1 , 2020
ಲಾಕ್ ಡೌನ್ ಇನ್ನು ಎರಡು ವಾರಗಳ ಕಾಲ ಮುಂದೂಡಿ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದೆ. ದೇಶದೆಲ್ಲೆಡೆ ಕೊರೊನಾ ಭೀತಿ ಹೆಚ್ಚಾಗುತ್ತಿರುವ ಹಿನ್ನೆಲೆ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ. ಕರೊನಾ ವೈರಸ್ ಸೋಂಕಿತರ ಸಂಖ್ಯೆ ಭಾರತದಲ್ಲಿ 35,365ಕ್ಕೆ ಏರಿದ್ದು, ಸಾವಿನ ಸಂಖ್ಯೆ 1,152ಕ್ಕೇರಿದೆ. ಕಳೆದ 24 ಗಂಟೆಯಲ್ಲಿ 1993 ಹೊಸ ಪ್ರಕರಣಗಳು ಪತ್ತೆಯಾಗಿವೆ. ದೇಶಾದ್ಯಂತ ಮೂರು ವಲಯಗಳನ್ನಾಗಿ ವಿಂಗಡಿಸಲಾಗಿದೆ. ಇನ್ನು ರೆಡ್ ಜೋನ್ ಗಳಲ್ಲಿ ಯಾವುದೇ ರೀತಿಯ ಸಡಿಲಿಕೆ ಇರುವುದಿಲ್ಲ […]

Advertisement

Wordpress Social Share Plugin powered by Ultimatelysocial