ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 701ಕ್ಕೆ ಏರಿಕೆ

ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ತಲ್ಲಣ ಸೃಷ್ಟಿಸಿದ್ದು, ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಲೇ ಇದೆ. ರಾಜ್ಯದಲ್ಲಿ ಇಂದು ಮತ್ತೆ 8 ಮಂದಿಯಲ್ಲಿ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕು ಪೀಡಿತರ ಸಂಖ್ಯೆ 701ಕ್ಕೆ ಏರಿಕೆಯಾಗಿದೆ. ಮಹಾಮಾರಿಗೆ ದಾವಣಗೆರೆಯಲ್ಲಿ ಮಹಿಳೆಯೊಬ್ಬರು ಬಲಿಯಾಗಿದ್ದು, ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 30ಕ್ಕೆ ಏರಿಕೆಯಾಗಿದೆ. ಇನ್ನು ಇಂದು ಪತ್ತೆಯಾಗಿರುವ ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳ ಪೈಕಿ ದಾವಣಗೆರೆಯಲ್ಲಿ 3, ಕಲಬುರಗಿಯಲ್ಲಿ 3, ಬೆಂಗಳೂರು ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ತಲಾ ಒಬ್ಬರಿಗೆ ಸೋಂಕು ದೃಢಪಟ್ಟಿದೆ.

Please follow and like us:

Leave a Reply

Your email address will not be published. Required fields are marked *

Next Post

ಮದ್ಯ ಡೆಲೆವರಿ ಮಾಡಲು ಝೊಮ್ಯಾಟೊ ನಿರ್ಧಾರ

Thu May 7 , 2020
ನವದೆಹಲಿ: ಆಹಾರ ಪದಾರ್ಥ ಡೆಲಿವರಿ ಮಾಡುತ್ತಿದ್ದ ಝೊಮ್ಯಾಟೊ ಕಂಪನಿ ಲಾಕ್‌ಡೌನ್ ಹಿನ್ನೆಲೆ ದಿನಸಿ ಪದಾರ್ಥಗಳನ್ನೂ ಡೆಲಿವರಿ ಮಾಡುತ್ತಿದೆ. ಇದೀಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿದ್ದು, ಮದ್ಯವನ್ನೂ ಡೆಲಿವರಿ ಮಾಡಲು ನಿರ್ಧರಿಸಿದೆ. ೪೦ ದಿನಗಳ ಲಾಕ್‌ಡೌನ್ ಬಳಿಕ ಇದೀಗ ಸಡಿಲಿಕೆ ನೀಡಲಾಗಿದ್ದು, ಬಾರ್‌ಗಳ ಮುಂದೆ ಮದ್ಯ ಪ್ರಿಯರು ಕ್ಯೂನಲ್ಲಿ ನಿಂತು ಮದ್ಯ ಖರೀದಿಸಬೇಕಿದೆ. ಅಲ್ಲದೆ ಈ ವೇಳೆ ಹೆಚ್ಚಿನ ಗಲಾಟೆಗಳು ನಡೆಯುತ್ತಿದ್ದು, ಸಾಮಾಜಿಕ ಅಂತರ ಕಾಪಾಡುವುದು ಸಾಹಸವಾಗಿದೆ. ಹೀಗಾಗಿ ಮದ್ಯಪ್ರಿಯರನ್ನು […]

Advertisement

Wordpress Social Share Plugin powered by Ultimatelysocial