ರಾಜ್ಯದಲ್ಲಿ ಗೋಹತ್ಯೆ ನಿಷೇಧಕ್ಕೆ ಚಿಂತನೆ..?

ಗೋ ಹತ್ಯೆ ಮತ್ತು ರಕ್ಷಣೆ ಮಸೂದೆ ೨೦೧೨ರನ್ನು ರಾಜ್ಯ ಸರ್ಕಾರ ಮತ್ತೆ ಜಾರಿಗೆ ತರಲು ಮುಂದಾಗಿದೆ. ಈಗಾಗಲೇ ಗುಜರಾತ್ ಮತ್ತು ಉತ್ತರ ಪ್ರದೇಶ ರಾಜ್ಯಗಳಲ್ಲಿ ಈ ಮಸೂದೆ ಜಾರಿಯಲ್ಲಿದ್ದು ಅಧ್ಯಯನ ಮಾಡಿಕೊಂಡು ಬರಲು ರಾಜ್ಯದಿಂದ ಅಧಿಕಾರಿಗಳ ತಂಡವೊAದನ್ನು ಕಳುಹಿಸಿಕೊಡಲಾಗುತ್ತದೆ ಎಂದು ಪಶು ಸಂಗೋಪನಾ ಸಚಿವ ಪ್ರಭು ಚೌಹಾನ್ ತಿಳಿಸಿದ್ದಾರೆ.ಈ ಮಸೂದೆ ಒಂದು ಬಾರಿ ಕಾನೂನಾಗಿ ಜಾರಿಗೆ ಬಂದ ನಂತರ ಗೋವುಗಳನ್ನು ಕೊಲ್ಲಲು ಮಾರಾಟ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗುತ್ತದೆ. ಬೇರೆ ರಾಜ್ಯಗಳಿಗೆ ಹಸುಗಳನ್ನು ಸಾಗಾಟ ಮಾಡುವುದನ್ನು ಕೂಡ ತಡೆಯಲಾಗುತ್ತದೆ. ಕಾಮಧೇನುವಾದ ಗೋವುಗಳನ್ನು ಕಾಪಾಡುವುದು ನಮ್ಮ ಆದ್ಯ ಕರ್ತವ್ಯ. ಈ ನಿಟ್ಟಿನಲ್ಲಿ ರಾಜ್ಯದ ಅಲ್ಲಲ್ಲಿ ಗೋಶಾಲೆಗಳನ್ನು ಬಲವರ್ಧಿಸಲು ನಾವು ಆರಂಭಿಸಿದ್ದೇವೆ. ಸ್ಥಳೀಯ ತಳಿಗಳ ಹಸುಗಳನ್ನು ರಕ್ಷಿಸಲು ಗೋ ಸೇವಾ ಆಯೋಗವನ್ನು ಸ್ಥಾಪಿಸುವುದಾಗಿ ಕಳೆದ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಘೋಷಿಸಿತ್ತು ಎಂದು ಹೇಳಿದರು.

Please follow and like us:

Leave a Reply

Your email address will not be published. Required fields are marked *

Next Post

ಹತ್ಯೆಗೀಡಾದ ಉಗ್ರರ ಬಳಿ ಪಾಕ್ ನಿರ್ಮಿತ ಗ್ರೇನೆಡ್‌ಗಳು

Sat Jul 11 , 2020
ಭಾರತ- ಪಾಕ್ ನಡುವಿನ ಗಡಿ ನಿಯಂತ್ರಣ ರೇಖೆಯ ೧೦೦ ಮೀಟರ್ ದೂರದಲ್ಲಿ ಭಾರತೀಯ ಯೋಧರು ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ.ಜಮ್ಮು ಕಾಶ್ಮೀರದ ಕುಪ್ವಾರಾ ಜಿಲ್ಲೆಗೆ ಅಕ್ರಮವಾಗಿ ನುಸುಳಲು ಯತ್ನಿಸುತ್ತಿದ್ದ ಇಬ್ಬರನ್ನು ಸಿಖ್ ಲೈಟ್ ಇನ್ಫೆಂಟ್ರಿ ಯೋಧರು ಮಧ್ಯರಾತ್ರಿ ಹತ್ಯೆ ಮಾಡಲಾಗಿದೆ ಎಂದು ಸೇನಾಧಿಕಾರಿಗಳು ಶನಿವಾರ ಮಾಹಿತಿ ನೀಡಿದ್ದಾರೆ.ಇದೇ ವೇಳೆ, ಚೀನಾ ನಿರ್ಮಿತ ಡ್ರೋನ್ಗಳನ್ನು ಬಳಸಿ ಭಾರತಕ್ಕೆ ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡುಗಳನ್ನು ಪಾಕಿಸ್ತಾನ ಕಳ್ಳಸಾಗಣೆ ಮಾಡುವುದನ್ನು ತಡೆಯಲು ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಡ್ರೋನ್ […]

Advertisement

Wordpress Social Share Plugin powered by Ultimatelysocial