ರಾಜ್ ಬಿ ಶೆಟ್ಟಿಗೆ ಉಡುಗೊರೆ

ರಕ್ಷಿತ್ ಶೆಟ್ಟಿ ಅಭಿನಯದ ಬಹು ನಿರೀಕ್ಷಿತ  “೭೭೭ ಚಾರ್ಲಿ’ ಸಾಹಸ ಪ್ರಧಾನ ಕಾಮಿಡಿ ಚಿತ್ರವನ್ನು ಕಿರಣ್ ರಾಜ್ ನಿರ್ದೇಶಿಸುತ್ತಿದ್ದು, ಸಿನಿಮಾದಲ್ಲಿ “ಒಂದು ಮೊಟ್ಟೆಯ ಕಥೆ’ ರಾಜ್​ ಬಿ ಶೆಟ್ಟಿ ಕೂಡ ವಿಶೇಷ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಹೌದು! ಭಾನುವಾರ ರಾಜ್ ಬಿ ಶೆಟ್ಟಿ ಹುಟ್ಟುಹಬ್ಬದ ಪ್ರಯುಕ್ತ “೭೭೭ ಚಾರ್ಲಿ’ ಚಿತ್ರತಂಡ ಯ್ಯೂಟೂಬ್​ನಲ್ಲಿ ವಿಶೇಷವಾದ ವಿಡಿಯೊವೊಂದನ್ನು ಬಿಡುಗಡೆ ಮಾಡುವ ಮೂಲಕ ಗಿಫ್ಟ್ ನೀಡಿದೆ. ಅಲ್ಲದೇ ಚಿತ್ರದಲ್ಲಿ ರಾಜ್ ಬಿ ಶೆಟ್ಟಿ, ಡಾ ಅಶ್ವಿನ್​ ಕುಮಾರ್​ ಪಾತ್ರದಲ್ಲಿ ನಟಿಸುತ್ತಿದ್ದು, ವೆಟರ್ನರಿ ಡಾಕ್ಟರ್​ ಆಗಿ ಕಾಣಿಸಿಕೊಂಡಿದ್ದಾರೆ. ಇನ್ನು ಕೆಲವು ದಿನಗಳ ಹಿಂದೆ ಟಿವಿ ಆಂಕರ್ ಹಾಗೂ ಕಾಮಿಡಿಯನ್ ಆಗಿರುವ ದಾನೀಶ್ ಸೇಠ್ ಹುಟ್ಟುಹಬ್ಬದ ಪ್ರಯುಕ್ತ ಅವರ ಫೋಟೋವನ್ನು  “೭೭೭ ಚಾರ್ಲಿ’ ಚಿತ್ರತಂಡ ಹೊಸ ಪೋಸ್ಟರ್​ ಬಿಡುಗಡೆ ಮಾಡುವ ಮೂಲಕ ಶುಭಾಶಯ ಕೋರಿದ್ದರು. ಅಲ್ಲದೇ  ಚಿತ್ರದಲ್ಲಿ ಕರ್ಶನ್ ರಾಯ್ ಪಾತ್ರ ನಿಭಾಯಿಸುತ್ತಿರುವ ದಾನೀಶ್​ಗೆ ನಿರ್ಮಾಪಕ ಪುಷ್ಕರ್​ ಮಲ್ಲಿಕಾರ್ಜುನಯ್ಯ ವಿಭಿನ್ನವಾಗಿ ಸ್ವಾಗತಿಸಿದ್ದರು.

Please follow and like us:

Leave a Reply

Your email address will not be published. Required fields are marked *

Next Post

ಬೆಂಗಳೂರು ಜನತೆಗೆ ಧನ್ಯವಾದ

Mon Jul 6 , 2020
ರಾಜ್ಯದಲ್ಲಿ ಮಹಾಮಾರಿ ಕೋವಿಡ್ ೧೯ ಪ್ರಕರಣಗಳ ಸ್ಫೋಟ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಚ್ಚೆತ್ತಿಕೊಂಡು ಪ್ರತಿ ಭಾನುವಾರ ಲಾಕ್‌ಡೌನ್ ಘೋಷಣೆ ಮಾಡಿದ್ದು, ನಗರದಾದ್ಯಂತ ಲಾಕ್‌ಡೌನ್‌ಗೆ ಉತ್ತಮ ಬೆಂಬಲ ವ್ಯಕ್ತವಾಗಿತ್ತು. ಹಾಗಾಗಿ ಲಾಕ್‌ಡೌನ್‌ಗೆ ಉತ್ತಮ ಸ್ಪಂದನೆ ವ್ಯಕ್ತವಾದ ಹಿನ್ನೆಲೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್, ಬೆಂಗಳೂರು ಜನತೆಗೆ ಧನ್ಯವಾದ ಅರ್ಪಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ “ನೀವೆಲ್ಲಾ ೩೬ ಗಂಟೆಗಳ ಲಾಕ್‌ಡೌನ್‌ಗೆ ಉತ್ತಮ ಪ್ರತಿಕ್ರಿಯೆ ನೀಡಿದ್ದೀರ. ನಿಮಗೆಲ್ಲಾ ಹೃತ್ಪೂರ್ವಕ ಧನ್ಯವಾದಗಳು. […]

Advertisement

Wordpress Social Share Plugin powered by Ultimatelysocial