ರಾಷ್ಟ್ರಪತಿ; ಬಜೆಟ್‌ ಅಧಿವೇಶನದಲ್ಲಿ ಭಾಷಣ ಪ್ರಾರಂಭ

ನವದೆಹಲಿ, ಜನವರಿ 31: ಕೇಂದ್ರ ಸರ್ಕಾರದ 2022ನೇ ವರ್ಷದ ಬಜೆಟ್‌ನ ಅಧಿವೇಶನವು ಜನವರಿ 31ರಿಂದ ಆರಂಭವಾಗಲಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರ್ಕಾರವು ಈ ಬಜೆಟ್‌ ಬಹಳ ದೊಡ್ಡ ಸವಾಲು ಕೂಡಾ ಹೌದು. ಮೋದಿ ಸರ್ಕಾರಕ್ಕೆ, ಉದ್ಯೋಗಗಳನ್ನು ಸೃಷ್ಟಿಸುವುದು ಈ ಸಮಯದ ದೊಡ್ಡ ಸವಾಲಾಗಿದೆ.ಈ ಬಜೆಟ್‌ನಲ್ಲಿ ಉದ್ಯೋಗ ಸೃಷ್ಟಿ ಪ್ರಮುಖ ಆದ್ಯತೆ ಆಗಿರುವ ಸಾಧ್ಯತೆ ಇದೆ. ಕೊರೊನಾ ಸೋಂಕು ಹೆಚ್ಚಳ ಆಗುತ್ತಿರುವುದು ಆರ್ಥಿಕತೆಗೆ ಮತ್ತೆ ಹೊಡೆತ ನೀಡಿದೆ.ಈಗ, ಭಾರತದ ಮಧ್ಯಮ ವರ್ಗವು ಸೀತಾರಾಮನ್‌ರ ನಾಲ್ಕನೇ ಬಜೆಟ್‌ನಲ್ಲಿ ಉದ್ಯೋಗಗಳು, ಆರೋಗ್ಯ ರಕ್ಷಣೆ ಮತ್ತು ಶಿಕ್ಷಣದ ಮೇಲಿನ ರಿಯಾಯಿತಿಗಳು, ತೆರಿಗೆ ವಿನಾಯಿತಿಗಳು ಮತ್ತು ಗಗನಕ್ಕೇರುತ್ತಿರುವ ಹಣದುಬ್ಬರವನ್ನು ನಿಭಾಯಿಸುವ ಕ್ರಮಗಳ ಭರವಸೆಯನ್ನು ಹೊಂದಿದ್ದಾರೆ. ಇನ್ನು ಜನವರಿ 31 ಮತ್ತು ಫೆಬ್ರವರಿ 1 ರಂದು ‘ಶೂನ್ಯ ವೇಳೆ’ ಇರುವುದಿಲ್ಲ. ಓಮಿಕ್ರಾನ್ ಆತಂಕದ ಹಿನ್ನೆಲೆ ಈ ಬಾರಿ ಹಲ್ವಾ ಸಮಾರಂಭವನ್ನು ಕೂಡಾ ನಡೆಸಿಲ್ಲ.ಅಧಿವೇಶನವು ಎರಡು ಭಾಗಗಳಲ್ಲಿ ನಡೆಯಲಿದೆ ಅಧಿವೇಶನದ ಮೊದಲ ಭಾಗವು ಫೆಬ್ರವರಿ 11, 2022 ರಂದು ಮುಕ್ತಾಯಗೊಳ್ಳುತ್ತದೆ. ಒಂದು ತಿಂಗಳ ಅವಧಿಯ ವಿರಾಮದ ನಂತರ, ಅಧಿವೇಶನದ ಭಾಗ ಎರಡು ಮಾರ್ಚ್ 14, 2022 ರಂದು ಪ್ರಾರಂಭವಾಗುತ್ತದೆ ಮತ್ತು ಏಪ್ರಿಲ್ 8, 2022 ರಂದು ಮುಕ್ತಾಯಗೊಳ್ಳುತ್ತದೆ.ಸೋಮವಾರ ರಾಷ್ಟ್ರಪತಿ ಕೋವಿಂದ್ ಉಭಯ ಸದನಗಳನ್ನು ಉದ್ದೇಶಿಸಿ ಭಾಷಣ ಮಾಡಿದ ಬಳಿಕ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆರ್ಥಿಕ ಸಮೀಕ್ಷೆ ಮಂಡಿಸಲಿದ್ದಾರೆ. ಆರ್ಥಿಕ ಸಮೀಕ್ಷೆಯನ್ನು ಪ್ರತಿ ಬಾರಿಯು ಕೇಂದ್ರ ಬಜೆಟ್‌ ಮಂಡನೆಯ ಒಂದು ದಿನಕ್ಕೂ ಮುನ್ನ ಮಂಡನೆ ಮಾಡಲಾಗುತ್ತದೆ. ಇದು ಕಳೆದ ಒಂದು ವರ್ಷದಲ್ಲಿ ಆರ್ಥಿಕತೆಯ ಸ್ಥಿತಿ, ಆರ್ಥಿಕತೆಗೆ ಇರುವ ಪ್ರಮುಖ ಸವಾಲುಗಳು ಮತ್ತು ಅವುಗಳ ಪರಿಹಾರದ ಬಗ್ಗೆ ವಿವರಣೆಯನ್ನು ಹೊಂದಿರುತ್ತದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕಣ್ಣುಕಾಣದ ಕುರುಡನೊಬ್ಬ ಶಿವಮೊಗ್ಗ ಸ್ಮಾರ್ಟ್ ಸಿಟಿ ಗುಂಡಿಯಾಲಿ ಬಿದ್ದು ಕಾಲು ಮುರಿದುಕೊಂಡಿದ್ದನೆ.

Mon Jan 31 , 2022
ಶಿವಮೊಗ್ಗ, ಜನವರಿ 30;ಶಿವಮೊಗ್ಗನಗರದಲ್ಲಿನ ಸ್ಮಾರ್ಟ್ ಸಿಟಿ ಕಾಮಗಾರಿಯ ಅವಾಂತರಗಳು ನಿಲ್ಲುವ ಹಾಗೆ ಕಾಣುತ್ತಿಲ್ಲ.ಅಧಿಕಾರಿಗಳು, ಜನಪ್ರತಿನಿಧಿಗಳಿಗೆ ಜನರು ಪ್ರತಿದಿನ ಹಿಡಿಶಾಪ ಹಾಕುವಂತಾಗಿದೆ. ಈಗ ಸ್ಮಾರ್ಟ್ ಸಿಟಿ ಗುತ್ತಿಗೆದಾರರ ನಿರ್ಲಕ್ಷ್ಯಕ್ಕೆ ಅಂಧನೊಬ್ಬ ಕಾಲು ಮುರಿದುಕೊಂಡು ಆಸ್ಪತ್ರೆ ಸೇರಿದ್ದಾರೆ. ನೋವಿನಿಂದ ಸಂಕಟ ಪಡುತ್ತಿದ್ದಾರೆ.ಇಮಾಮ್ ಸಾಬ್ ಇನಾಂದಾರ್ (38) ಎಂಬ ಅಂಧರೊಬ್ಬರು ಸ್ಮಾರ್ಟ್ ಸಿಟಿ ಗುಂಡಿಗೆ ಬಿದ್ದು ಕಾಲು ಮುರಿದುಕೊಂಡಿದ್ದಾರೆ. ಗುತ್ತಿಗೆದಾರರ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ಆರೋಪಿಸಲಾಗಿದೆ. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ […]

Advertisement

Wordpress Social Share Plugin powered by Ultimatelysocial