ರಿಯಲ್ ಲೈಫ್‌ ಹೀರೋ ಆಗಿ ಗುರುತಿಸಿಕೊಂಡಿರುವ ಸೋನು ಸೂದ್

ಕೋವಿಡ್ ಆರಂಭದ ಕಾಲದಿಂದಲೂ ರಿಯಲ್ ಲೈಫ್ ಹೀರೋ ಆಗಿ ಗುರುತಿಸಿಕೊಂಡಿರುವ ಸೋನು ಸೂದ್ ಇದೀಗ ಮತ್ತೊಮ್ಮೆ ಮುಂಬೈ ಪೊಲೀಸ್ ಸಿಬ್ಬಂದಿಗಳಿಗೆ 25,000 ಫೇಸ್ ಶೀಲ್ಡ್ ಗಳನ್ನು ವಿತರಣೆ ಮಾಡುವ ಮೂಲಕ ಸಹಾಯ ಹಸ್ತ ಚಾಚಿದ್ದಾರೆ. ಸೋನು ಸೂದ್ ಅವರ ಈ ಸಾಮಾಜಿಕ ಕಾರ್ಯದ ಕುರಿತು ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ ಮುಖ್ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, 25,000 ಫೇಸ್ ಶೀಲ್ಡ್ ಗಳನ್ನು ಪೊಲೀಸರಿಗೆ ನೀಡಿದ್ದಕ್ಕೆ ಧನ್ಯವಾದಗಳನ್ನು ತಿಳಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಸಿರುವ ಸೋನು ಸೂದ್ ಕೋವಿಡ್ ಸಮಯದಲ್ಲಿ ಕರ್ತವ್ಯನಿಷ್ಠೆ ಮೆರಯುತ್ತಿರುವ ಪೊಲೀಸ್ ಸಹೋದರ ಸಹೋದರಿಯರು ನಿಜವಾದ ಹೀರೋಗಳು, ಅವರು ತೋರುತ್ತಿರುವ ಸಾಮಾಜಿಕ ಕಳಕಳಿಗೆ ನಾನು ನೀಡಬಹುದಾದ ಅಲ್ಪ ಸೇವೆ ಅಷ್ಟೆ ಇದು ಎಂದು  ಎಂದಿದ್ದಾರೆ.

 

Please follow and like us:

Leave a Reply

Your email address will not be published. Required fields are marked *

Next Post

೧೦ ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ

Fri Jul 17 , 2020
ಭಾರತದಲ್ಲಿ ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದು, 24ಗಂಟೆಯಲ್ಲಿ ದಾಖಲೆ ಎಂಬಂತೆ 34,956 ಕೋವಿಡ್ ಪ್ರಕರಣ ಪತ್ತೆಯಾಗಿದ್ದು, ಒಂದೇ ದಿನದಲ್ಲಿ 687 ಮಂದಿ ಮೃತಪಟ್ಟಿದ್ದಾರೆ. ದೇಶದಲ್ಲಿ 10 ಲಕ್ಷ ಗಡಿದಾಟುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ10,03,832ಕ್ಕೆ ಏರಿಕೆಯಾಗಿದೆ. ಇಲ್ಲಿಯವರೆಗೆ 25,602 ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ. 10,03,83 ಸೋಂಕಿತರ ಪೈಕಿ 6,35,757 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಇನ್ನೂ 3,42,473 ಸಕ್ರಿಯ ಪ್ರಕರಣಗಳಿವೆ. ಎಂದು ಕೇಂದ್ರ ಆರೋಗ್ಯ ಮತ್ತು […]

Advertisement

Wordpress Social Share Plugin powered by Ultimatelysocial