ರೈತರ ಮೇಲೆ ಇಷ್ಟೊಂದು ದ್ವೇಷ ಯಾಕೆ..? ಪ್ರಧಾನಿಗೆ ಅರವಿಂದ ಕೇಜ್ರಿವಾಲ್ ಪ್ರಶ್ನೆ.!

ರೈತರ ಮೇಲೆ ನಿಮಗೆ ಅಷ್ಟೊಂದು ದ್ವೇಷವೇಕೆ ಎಂದು ಪ್ರಧಾನಿ ನರೇಂದ್ರ ಮೋದಿಯವರನ್ನು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಪ್ರಶ್ನಿಸಿದ್ದಾರೆ. ಉತ್ತರ ಪ್ರದೇಶದ ಲಖಿಂಪುರಖೇರಿ ಘಟನೆ ಉಲ್ಲೇಖಿಸಿ ಅವರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರೋಪಿಗಳನ್ನು ಬಂಧಿಸಬೇಕು. ಕೇಂದ್ರ ಗೃಹ ಇಲಾಖೆಯ ರಾಜ್ಯ ಖಾತೆ ಸಚಿವ ಅಜಯ್ ಮಿಶ್ರಾ ಮಗ ಆರೋಪಿಯಾಗಿರುವುದರಿಂದ ಸಚಿವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ವರ್ಚುವಲ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಜ್ರಿವಾಲ್, ರೈತರ ಕೊಲೆ ಮಾಡಿದವರನ್ನು ರಕ್ಷಿಸಲು ಇಡೀ ವ್ಯವಸ್ಥೆಯೇ ಪ್ರಯತ್ನಿಸುತ್ತಿದೆ. ಘಟನೆಗೆ ಸಂಬಂಧಿಸಿ ಈವರೆಗೆ ಯಾರನ್ನೂ ಯಾಕೆ ಬಂಧಿಸಿಲ್ಲ ಎಂದು ಪ್ರಧಾನಿಯವರನ್ನು ಉದ್ದೇಶಿಸಿ ಪ್ರಶ್ನಿಸಿದ್ದಾರೆ. ಕಳೆದ ಒಂದು ವರ್ಷದಿಂದ ರೈತರು ಧರಣಿ ನಡೆಸುತ್ತಿದ್ದಾರೆ. ಈವರೆಗೆ 600 ರೈತರು ಮೃತಪಟ್ಟಿದ್ದಾರೆ. ರೈತರ ವೇಲೆ ವಾಹನ ಚಲಾಯಿಸಿ ಅವರನ್ನು ಹತ್ಯೆ ಮಾಡಲಾಗಿದೆ. ರೈತರ ಮೇಲೆ ಇಷ್ಟೊಂದು ದ್ವೇಷ ಯಾಕೆ? ಮಿಶ್ರಾ ಅವರನ್ನು ಈವರೆಗೂ ಯಾಕೆ ಸಂಪುಟದಿಂದ ವಜಾಗೊಳಿಸಿಲ್ಲ ಎಂದು ಅವರು ಪ್ರಶ್ನಿಸಿದ್ದಾರೆ.ದೇಶದ ಪ್ರತಿಯೊಬ್ಬ ನಾಗರಿಕನೂ ಇಂದು ರೈತರಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸುತ್ತಿದ್ದಾನೆ. ನಿರ್ಧಾರ ನಿಮ್ಮ ಕೈಯಲ್ಲಿದೆಎಂದು ಪ್ರಧಾನಿಯವರನ್ನು ಉದ್ದೇಶಿಸಿ ಕೇಜ್ರಿವಾಲ್ ಹೇಳಿದ್ದಾರೆ

Please follow and like us:

Leave a Reply

Your email address will not be published. Required fields are marked *

Next Post

ದಸರಾ ಉದ್ಘಾಟನೆಗಾಗಿ ಮೈಸೂರಿಗೆ ಆಗಮಿಸಿದ ಎಸ್.ಎಂ. ಕೃಷ್ಣರಿಗೆ ಅದ್ಧೂರಿ ಸ್ವಾಗತ 

Wed Oct 6 , 2021
ಮೈಸೂರು, ಅಕ್ಟೋಬರ್ 6: ನಾಡಹಬ್ಬ ದಸರಾ ಹಿನ್ನಲೆ ಹಾಗೂ ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗಾಗಿ ಆಗಮಿಸಿದ ಮಾಜಿ ಸಿಎಂ ಎಸ್.ಎಂ. ಕೃಷ್ಣರನ್ನು ಜಿಲ್ಲಾಡಳಿತದಿಂದ ಅದ್ಧೂರಿ ಸ್ವಾಗತ ನೀಡಲಾಯಿತು. ನಗರದ ಮೈಸೂರು- ಬೆಂಗಳೂರು ಮುಖ್ಯರಸ್ತೆಯ ಕೊಲಂಬಿಯಾ ಏಷ್ಯಾ ಜಂಕ್ಷನ್ ಬಳಿ ಎಸ್.ಎಂ. ಕೃಷ್ಣ ಆಗಮಿಸಿದಾಗ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಹಾಗೂ ಇತರ ಗಣ್ಯರು ಹೂಗುಚ್ಛ ನೀಡಿ, ಆತ್ಮೀಯವಾಗಿ ಸ್ವಾಗತಿಸಿದರು.  ಉತ್ತರ ಪ್ರದೇಶ ಪಾಕಿಸ್ತಾನದಲ್ಲಿದೆಯೇ: ಶಿವಸೇನೆ ಆಕ್ರೋಶ ಈ ಬಾರಿಯ […]

Advertisement

Wordpress Social Share Plugin powered by Ultimatelysocial