ಲಾಸ್ ಏಂಜಲೀಸ್‌ಗೆ ತೆರಳಿದ ದೀಪಿಕಾ ಪಡುಕೋಣೆ

 

ದೀಪಿಕಾ ಪಡುಕೋಣೆ ಆಸ್ಕರ್‌ 2023ರಲ್ಲಿ (Oscars 2023) ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.95ನೇ ಆಸ್ಕರ್ ಪ್ರಶಸ್ತಿ ಪ್ರದಾನವು ಮಾರ್ಚ್ 12, ಭಾನುವಾರ ಎಬಿಸಿಯಲ್ಲಿ ನೇರ ಪ್ರಸಾರವಾಗಲಿದೆ. ಲಾಸ್ ಏಂಜಲೀಸ್‌ಗೆ ನಟಿ ತೆರಳಿದ್ದಾರೆ. ಕಳೆದ ರಾತ್ರಿ ಮುಂಬೈ ವಿಮಾನ ನಿಲ್ದಾಣದಲ್ಲಿ ನಟಿ ಆಸ್ಕರ್ ಪ್ರಶಸ್ತಿಗಾಗಿ ತೆರಳುತ್ತಿದ್ದಂತೆ ಮಾಧ್ಯಮಗಳ ಮುಂದೆ ಕಾಣಿಸಿಕೊಂಡಿದ್ದಾರೆ. ಕಪ್ಪು ಬಣ್ಣದ ಟಾಪ್ ಮತ್ತು ನೀಲಿ ಡೆನಿಮ್ ಜೀನ್ಸ್‌ನೊಂದಿಗೆ ವಿನ್ಯಾಸಗೊಳಿಸಿದ ಕಂದು ಬಣ್ಣದ ಜಾಕೆಟ್‌ನಲ್ಲಿ ದೀಪಿಕಾ ಮಿಂಚಿದ್ದಾರೆ.ಕಾನ್ 2022ರಲ್ಲಿ ತೀರ್ಪುಗಾರರಾಗಿ ನಟಿ ದೀಪಿಕಾ ಪಡುಕೋಣೆ ಕಾಣಿಸಿಕೊಂಡಿದ್ದರು. ಇದೀಗ ಆಸ್ಕರ್‌ 2023ರಲ್ಲಿ ನಟಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಈ ಬಗ್ಗೆ ನಟಿ ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. 95ನೇ ಅಕಾಡೆಮಿ ಪ್ರಶಸ್ತಿಗಳ ಪ್ರದಾನ (Oscars 2023) ಮಾರ್ಚ್ 12ರಂದು ಲಾಸ್ ಏಂಜಲೀಸ್‌ನಲ್ಲಿ (ಭಾರತದಲ್ಲಿ ಮಾರ್ಚ್ 13) ನಡೆಯಲಿದೆ. ದೀಪಿಕಾ ಪಡುಕೋಣೆ ಸೋಷಿಯಲ್‌ ಮೀಡಿಯಾದಲ್ಲಿ ಪ್ರಶಸ್ತಿ ಪ್ರದಾನ ಮಾಡಲಿರುವ ಲಿಸ್ಟ್‌ ಹಂಚಿಕೊಂಡಿದ್ದಾರೆ. ಎಮಿಲಿ ಬ್ಲಂಟ್, ಸ್ಯಾಮ್ಯುಯೆಲ್ ಎಲ್ ಜಾಕ್ಸನ್, ಡ್ವೇನ್ ಜಾನ್ಸನ್, ಮೈಕೆಲ್ ಬಿ ಜೋರ್ಡಾನ್, ಜಾನೆಲ್ಲೆ ಮೋನೆ, ಜೊ ಸಲ್ಡಾನಾ, ಜೆನ್ನಿಫರ್ ಕೊನ್ನೆಲ್ಲಿ, ರಿಜ್ ಅಹ್ಮದ್ ಮತ್ತು ಮೆಲಿಸ್ಸಾ ಮೆಕಾರ್ಥಿ ಅವರಂತಹವರ ಜತೆಗೆ ಇವರ ಹೆಸರು ಸೇರಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮಹಿಳಾ IPLನಲ್ಲಿ ಭರ್ಜರಿ ಸ್ಟೆಪ್ಸ್!

Sun Mar 5 , 2023
  ಕಿಯಾರಾ ಅಡ್ವಾಣಿ ಮತ್ತು ಕೃತಿ ಸನೋನ್ ಪ್ರಸ್ತುತ ಬಾಲಿವುಡ್‌ನಲ್ಲಿ ಅತ್ಯಂತ ಯಶಸ್ವಿ ನಟಿಯರಾಗಿದ್ದಾರೆ.ಸಾಲು ಸಾಲು ಸಿನಿಮಾ ಅವಕಾಶಗಳನ್ನು ಪಡೆಯುತ್ತಿದ್ದಾರೆ.ಕಿಯಾರಾ ಮತ್ತು ಕೃತಿ ಇಬ್ಬರೂ ಸಿನಿಮಾಗಳಲ್ಲಿ ತಮ್ಮ ನಟನಾ ಕೌಶಲ್ಯವನ್ನು ಮತ್ತೆ ಮತ್ತೆ ಸಾಬೀತುಪಡಿಸಿದ್ದಾರೆ. ಅವರ ಮೂವಿಗಳು ಬೇಗನೆ ಹಿಟ್ ಆಗುತ್ತವೆ.ಇದೀಗ ಮೊದಲ ಮಹಿಳಾ ಪ್ರೀಮಿಯರ್ ಲೀಗ್ ಇಂದು ಉದ್ಘಾಟನೆಯಾಗಿದೆ. ಅದ್ಭುತವಾದ ಉದ್ಘಾಟನಾ ಸಮಾರಂಭದಲ್ಲಿ ಕಿಯಾರಾ ಅಡ್ವಾಣಿ, ಕೃತಿ ಸನೋನ್ ಮತ್ತು ಗಾಯಕ ಎಪಿ ಧಿಲ್ಲೋನ್ ವಿಶೇಷ ಪ್ರದರ್ಶನ ನೀಡಿದರು.ಕಿಯಾರಾ, […]

Advertisement

Wordpress Social Share Plugin powered by Ultimatelysocial