ಲೋಕಾಯುಕ್ತ ಭದ್ರತಾ ಸಿಬ್ಬಂದಿಗೆ ಕೊರೊನಾ

ಲೋಕಾಯುಕ್ತ ಸಂಸ್ಥೆಯ ಭದ್ರತೆಗೆ ನಿಯೋಜನೆಗೊಂಡಿದ್ದ ಕೆಎಸ್‌ಆರ್‌ಪಿಯ ಇಬ್ಬರು ಕಾನ್‌ಸ್ಟೆಬಲ್‌ಗಳಿಗೆ ಸೋಂಕು ದೃಢವಾಗಿದೆ. ಈ ಹಿನ್ನಲೆ ಲೋಕಾಯುಕ್ತ ಸಂಸ್ಥೆಯನ್ನು ೩ದಿನ ಸೀಲ್‌ಡೌನ್ ಮಾಡಲಾಗಿದೆ. ಪಶ್ಚಿಮ ವಿಭಾಗದ ಎಸಿಪಿ ಮತ್ತು ಇನ್‌ಸ್ಪೆಕ್ಟರ್‌ವೊಬ್ಬರಿಗೆ ಸೋಂಕು ಕಾಣಿಸಿಕೊಂಡಿದೆ. ಪೊಲೀಸ್ ಕಾನ್‌ಸ್ಟೆಬಲ್‌ಗೆ ಕೋವಿಡ್ ೧೯ ಕಾಣಿಸಿಕೊಂಡಿದ್ದು, ಈ ಕಾನ್‌ಸ್ಟೆಬಲ್ ಲೋಕಾಯುಕ್ತ ಸಂಸ್ಥೆಗೂ ಬಂದಿದ್ದರು.ಹೀಗಾಗಿ ಇಬ್ಬರಿಗೆ ಸೋಂಕು ತಗುಲಿದ್ದು, ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದ ೩೦ ಮಂದಿಯನ್ನು ಕ್ವಾರಂಟೈನ್‌ಗೆ ಒಳಪಡುವಂತೆ ಸೂಚಿಸಲಾಗಿದೆ. ಪಶ್ಚಿಮ ವಿಭಾಗದ ಎಸಿಪಿ ಹಾಗೂ ಇನ್‌ಸ್ಪೆಕ್ಟರ್ ಈಗಾಗಲೇ ಸೋಂಕಿಗೊಳಗಾಗಿದ್ದಾರೆ. ಎಸಿಪಿ ಕಚೇರಿ ಮತ್ತು ನಿಗದಿತ ಠಾಣೆಯನ್ನು ಸೀಲ್‌ಡೌನ್ ಮಾಡಲಾಗಿದೆ.

Please follow and like us:

Leave a Reply

Your email address will not be published. Required fields are marked *

Next Post

ನಾವೇ ಸ್ವಯಂ ಲಾಕ್‍ಡೌನ್ ಮಾಡಿಕೊಳ್ಳುತ್ತೇವೆ

Thu Jul 2 , 2020
ಕೊರೊನಾ ವೈರಸ್ ಗೆ ಬೆಂಗಳೂರು ನಲುಗಿ ಹೋಗಿದ್ದು ಸರ್ಕಾರ ಲಾಕ್‍ಡೌನ್ ಮಾಡಲಿಲ್ಲ ಅಂದರೂ ನಾವೇ ಸ್ವಯಂ ಲಾಕ್‍ಡೌನ್ ಮಾಡಿಕೊಳ್ಳುತ್ತೇವೆ ಎಂದು ಬೆಂಗಳೂರಿನ ಮಲ್ಲೇಶ್ವರಂ ಮಾರುಕಟ್ಟೆ ವ್ಯಾಪಾರಿಗಳು ನಿರ್ಧಾರಿಸಿದ್ದಾರೆ. ಬೆಂಗಳೂರಿನಲ್ಲಿ  ಲಾಕ್‍ಡೌನ್ ಸಡಿಲಿಕೆ ಬಳಿಕ ಕೊರೊನಾ ದಿನೇ ದಿನೇ ಏರಿಕೆಯಾಗುತ್ತಿದೆ. ಮಾರುಕಟ್ಟೆಯಲ್ಲಿ  ಸುಮಾರು 50 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 40 ಸಕ್ರಿಯ ಪ್ರಕರಣಗಳು ದಾಖಲಾಗಿದ್ದು, 12 ಮಂದಿ ಇದುವರೆಗೂ ಡಿಸ್ಚಾರ್ಜ್ ಆಗಿದ್ದಾರೆ. ಆದರಿಂದ್ದ ಮಲ್ಲೇಶ್ವರಂ ವ್ಯಾಪಾರಿಗಳು ಇಂದಿನಿಂದ ಜುಲೈ 7 ರವೆಗೆ […]

Advertisement

Wordpress Social Share Plugin powered by Ultimatelysocial