ವಲಸೆ ಕಾರ್ಮಿಕರಿಗೆ  ಸಿಹಿ ಸುದ್ದಿ

ಬೆಂಗಳೂರು: ಲಾಕ್‌ಡೌನ್‌ನಿಂದ ದೇಶದ ಪ್ರಮುಖ ನಗರಗಳಲ್ಲಿ ಲಕ್ಷಾಂತರ ವಲಸೆ ಕಾರ್ಮಿಕರು ಸಿಲುಕಿಕೊಂಡಿದ್ದಾರೆ. ಕೈಯಲ್ಲಿ ದುಡ್ಡಿಲ್ಲದೆ ಅನೇಕ ಕಾರ್ಮಿಕರು ಸ್ವಂತ ಊರುಗಳಿಗೆ ಹೋಗಲಾಗದೇ ಪರದಾಡುತ್ತಿದ್ದಾರೆ. . ಇಂತಹ ಕಾರ್ಮಿಕರಿಗೆ ಕರ್ನಾಟಕ ಸರ್ಕಾರ ಸಂತಸದ ಸುದ್ದಿ ನೀಡಿದೆ.  ಶ್ರಮಿಕ್ ರೈಲುಗಳ ಮೂಲಕ ಸ್ವಗ್ರಾಮಗಳಿಗೆ ತೆರಳ ಬಯಸುವ ವಲಸೆ ಕಾರ್ಮಿಕರು ಹಾಗೂ ಲಾಕ್ ಡೌನ್‍ ನಲ್ಲಿ ಸಿಲುಕಿರುವವರ ಪ್ರಯಾಣ ವೆಚ್ಚವನ್ನು ಸರ್ಕಾರವೇ ಭರಿಸಲಿದೆ’ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ. ಈ ಕುರಿತು ಸಿಎಂ ಕಚೇರಿಯ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ನೀಡಿದ್ದು, ತಮ್ಮ ಸ್ವಗ್ರಾಮಗಳಿಗೆ ಹಿಂದಿರುಗಲು ಪ್ರಯಾಣದ ವೆಚ್ಚವನ್ನು ಭರಿಸಲು ಸಾಧ್ಯವಾಗುತ್ತಿಲ್ಲವೆಂಬ ವಲಸೆ ಕಾರ್ಮಿಕರ ಮನವಿಯನ್ನು ಸರ್ಕಾರವು ಪರಿಗಣಿಸಿದೆ. ನಮ್ಮ ದೇಶದ ದೂರದ ಭಾಗಗಳಿಂದ ಬಂದಿರುವ ವಲಸೆ ಕಾರ್ಮಿಕರನ್ನು ನಾವು ನಮ್ಮದೇ ರಾಜ್ಯದ ಜನರು ಎಂದು ಭಾವಿಸುತ್ತೇವೆ & ಅವರ ಕಷ್ಟಕ್ಕೆ ಸರ್ಕಾರವು ಸ್ಪಂದಿಸಬೇಕೆಂಬುದು ನನ್ನ ದೃಢ ನಿರ್ಧಾರ” ಎಂದು ಟ್ವೀಟ್ ಮಾಡಿದೆ. ಮೇ 31ರ ವರೆಗೆ ಶ್ರಮಿಕ್ ರೈಲುಗಳ ಮೂಲಕ ಸ್ವಗ್ರಾಮಗಳಿಗೆ ತೆರಳಬಯಸುವ ವಲಸೆ ಕಾರ್ಮಿಕರು ಹಾಗೂ ಲಾಕ್ ಡೌನ್‍ ನಲ್ಲಿ ಸಿಲುಕಿರುವವರ ಪ್ರಯಾಣ ವೆಚ್ಚವನ್ನು ಸರ್ಕಾರವೇ ಭರಿಸಲಿದೆ.

Please follow and like us:

Leave a Reply

Your email address will not be published. Required fields are marked *

Next Post

ವಿವಿ ವಿದ್ಯಾರ್ಥಿಗಳಿಗೆ ಆನ್‌ಲೈನ್ ಪಾಠ ಸಮಂಜಸವಲ್ಲ: ಎಚ್‌ಡಿಕೆ

Fri May 22 , 2020
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಆನ್ಲೆöÊನ್ ತರಗತಿ ಮೂಲಕ ಮೇ ೩ರೊಳಗೆ ಎಲ್ಲಾ ವಿಷಯವನ್ನು ಬೋಧಿಸಿ ಪರೀಕ್ಷೆ ನಡೆಸಲು ಮುಂದಾಗಿರುವುದು ಸರ್ಕಾರದ ಆತುರದ ಕ್ರಮವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.  ಈ ಕುರಿತು ಮಾಡಿದ ಎಚ್‌ಡಿಕೆ ಮುಂದಿನ ತಿಂಗಳು ಪರೀಕ್ಷಾ ವೇಳಾಪಟ್ಟಿಯನ್ನು ಘೋಷಿಸುವುದಾಗಿ ಸರ್ಕಾರ ನಿರ್ಧರಿಸಿರುವುದು ವಿಶೇಷವಾಗಿ ಗ್ರಾಮೀಣ ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾಗಲಿದೆ. ಸರ್ಕಾರ ಈ ಬಗ್ಗೆ ಮರು ಚಿಂತನೆ ನಡೆಸುವ ತುರ್ತು ಅಗತ್ಯವಿದೆ. ಗ್ರಾಮೀಣ ಭಾಗದ […]

Advertisement

Wordpress Social Share Plugin powered by Ultimatelysocial