ವಿಜಯಪುರಕ್ಕೆ ವಿಮಾನ ನಿಲ್ದಾಣ

ವಿಜಯಪುರದ ಬುರನಾಪುರ,ಮಾಧುಭಾವಿ ಗ್ರಾಮಗಳ ಸಮೀಪ 220 ಕೋಟಿ ವೆಚ್ಚದಲ್ಲಿ ಗ್ರೀನ್‌ಫೀಲ್ಡ್‌ ವಿಮಾನ ನಿಲ್ದಾಣ ನಿರ್ಮಾಣಗೊಳ್ಳಲಿದ್ದು, ಮುಂದಿನ ವರ್ಷದೊಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ.ಕಾರಜೋಳ ಹೇಳಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಲೋಕೋಪಯೋಗಿ ಇಲಾಖೆಯ ಮೂಲಕ ಕಾಮಗಾರಿ ನಡೆಸಲಾಗುವುದು. ಮೊದಲ ಹಂತದಲ್ಲಿ  95 ಕೋಟಿ ವೆಚ್ಚದಲ್ಲಿ ರನ್‌ವೇ, ಟ್ಯಾಕ್ಸಿವೇ, ಅಪ್ರೊನ್‌, ಪಾರ್ಕಿಂಗ್ ಪ್ರದೇಶ, ಟರ್ಮಿನಲ್ ಕಟ್ಟಡ ಸಹಿತ ಅಗತ್ಯ ಕೆಲಸ ನಡೆಯಲಿದೆ ಎಂದು ತಿಳಿಸಿದ್ದಾರೆ.‌ ಎರಡನೇ ಹಂತದ ಬಾಕಿ ಉಳಿಯುವ ಕಾಮಗಾರಿಗಳಾದ ಎಟಿಸಿ ಮತ್ತು ಪೂರಕ ಕಟ್ಟಡಗಳು, ಇತರ ಕಾಮಗಾರಿಗಳನ್ನು ಮುಂದಿನ ಹಂತದಲ್ಲಿ ಕೈಗೆತ್ತಿಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

 

 

Please follow and like us:

Leave a Reply

Your email address will not be published. Required fields are marked *

Next Post

ಬಿಸಿಸಿಐ ಅಧ್ಯಕ್ಷ ಗಂಗೂಲಿ ಹೇಳಿಕೆ

Thu Jul 9 , 2020
ಪ್ರಸಕ್ತ ಋತುವಿನಲ್ಲಿ ಐಪಿಎಲ್ ನಡೆಸುವುದೇ ತಮ್ಮ ಪ್ರಮುಖ ಆದ್ಯತೆ ಆಗಿರುತ್ತದೆ, ಕೋವಿಡ್ ೧೯ ಕಂಟಕದ ಹೊರತಾಗಿಯೂ ಐಪಿಎಲ್ ಇಲ್ಲದೆ ೨೦೨೦ನೇ ಇಸವಿ ಮುಗಿಯದು ಎಂದು ಖಚಿತ ಧ್ವನಿಯಲ್ಲಿ ಹೇಳಿದ್ದಾರೆ . ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ. “ಐಪಿಎಲ್ ಇಲ್ಲದೇ ೨೦೨೦ರ ಋತುವನ್ನು ಮುಗಿಸಲು ನಮಗೆ ಇಷ್ಟವಿಲ್ಲ. ಆದರೆ ಟಿ೨೦ ವಿಶ್ವಕಪ್ ಬಗ್ಗೆ ಐಸಿಸಿ ಖಚಿತ ನಿರ್ಧಾರ ತೆಗೆದುಕೊಳ್ಳದ ಹೊರತು ಐಪಿಎಲ್ ಆಯೋಜನೆ ಕುರಿತು ಯಾವುದೇ ತೀರ್ಮಾನಕ್ಕೆ ಬರಲು ಸಾಧ್ಯವಿಲ್ಲ’ ಎಂದು […]

Advertisement

Wordpress Social Share Plugin powered by Ultimatelysocial