ವಿಶೇಷ ಸೌಲಭ್ಯ ನೀಡ್ತಿದೆ ಯೆಸ್ ಬ್ಯಾಂಕ್

ಕೊರೊನಾ ವೈರಸ್ ನಿಯಂತ್ರಣಕ್ಕೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಬಹಳ ಮುಖ್ಯ. ಇದಕ್ಕಾಗಿ ಖಾಸಗಿ ವಲಯದ ಯೆಸ್ ಬ್ಯಾಂಕ್ ಡಿಜಿಟಲ್ ಉಳಿತಾಯ ಖಾತೆಯನ್ನು ಪ್ರಾರಂಭಿಸಿದೆ. ಈ ಯೋಜನೆಯಲ್ಲಿ ಗ್ರಾಹಕರು ಬ್ಯಾಂಕ್ ಗೆ ಹೋಗಬೇಕಾಗಿಲ್ಲ. ಈ ಖಾತೆಯನ್ನು ಇ-ಕೆವೈಸಿ ಮತ್ತು ವಿಡಿಯೋ ಪರಿಶೀಲನೆಯ ಮೂಲಕ ತೆರೆಯಬಹುದು ಎಂದು ತಿಳಿಸಿದೆ. ಹಾಗೆಯೇ ಡಿಜಿಟಲ್ ಉಳಿತಾಯ ಖಾತೆಯು ವರ್ಚುವಲ್ ಡೆಬಿಟ್ ಕಾರ್ಡ್‌ನೊಂದಿಗೆ ಬರುತ್ತದೆ. ಇದರ ಸಹಾಯದಿಂದ ಗ್ರಾಹಕರಿಗೆ 100 ಕ್ಕೂ ಹೆಚ್ಚಿನ ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದು ಬ್ಯಾಂಕ್ ತಿಳಿಸಿದೆ. ಬ್ಯಾಂಕಿನ ಅಪ್ಲಿಕೇಶನ್ ಅಥವಾ ವೆಬ್‌ಸೈಟ್ ಮೂಲಕ ವಹಿವಾಟುಗಳು, ನಿಧಿ ವರ್ಗಾವಣೆ ಮತ್ತು ಆನ್‌ಲೈನ್ ಶಾಪಿಂಗ್ ಮಾಡಬಹುದು.

 

 

Please follow and like us:

Leave a Reply

Your email address will not be published. Required fields are marked *

Next Post

ದೇಶದಲ್ಲಿ ಕೊರೊನಾ ರಣಕೇಕೆ

Sun Jun 28 , 2020
ದೇಶದಲ್ಲಿ ಕೊರೊನಾ ವೈರಸ್ ತನ್ನ ಅಟ್ಟಹಾಸ ಮೆರೆಯುತ್ತಿದೆ. ಕಳೆದ ಒಂದೇ ದಿನದಲ್ಲಿ ಮೊದಲ ಬಾರಿಗೆ ಹೆಚ್ಚು ಸೋಂಕು ಪತ್ತೆಯಾಗಿದೆ. 19,906 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ. ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 5,28,859ಕ್ಕೆ ಏರಿಕೆಯಾಗಿದೆ. ಇನ್ನು ಒಂದೇ ದಿನ ಮಹಾಮಾರಿ ವೈರಸ್’ಗೆ 410 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ ಕೂಡ 16,095ಕ್ಕೆ ಏರಿಕೆಯಾಗಿದೆ, ಈ ಪೈಕಿ  3,09,713 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಇನ್ನೂ ದೇಶದಲ್ಲಿ 2,03,051 ಮಂದಿ ಸೋಂಕಿನಿಂದ […]

Advertisement

Wordpress Social Share Plugin powered by Ultimatelysocial