ವಿಶ್ವದ ಶ್ರೀಮಂತ ದೇವಾಲಯ ತಿರುಪತಿ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಮಾರ್ಚ್ 1 ರಿಂದ ಫೇಶಿಯಲ್ ರೇಕಗ್ನಿಷನ್ ವ್ಯವಸ್ಥೆ ಜಾರಿ .

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ತಿರುಪತಿ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಮಾರ್ಚ್ 1 ರಿಂದ ಫೇಶಿಯಲ್ ರೇಕಗ್ನಿಷನ್ ವ್ಯವಸ್ಥೆ ಜಾರಿಗೆ ತರಲು ಟಿಟಿಡಿ ಕ್ರಮಕೈಗೊಂಡಿದೆ.

ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಲು ಟೋಕನ್ ವಿತರಣೆ, ಲಡ್ಡು ವಿತರಿಸುವ ಸ್ಥಳಗಳಲ್ಲಿ ಈ ವ್ಯವಸ್ಥೆ ಅಳವಡಿಸಲಾಗುವುದು.

ಪ್ರತಿದಿನ ಲಕ್ಷಾಂತರ ಭಕ್ತರು ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಬರುತ್ತಾರೆ. ದೇವಾಲಯದಲ್ಲಿ ಟೋಕನ್ ಇಲ್ಲದೆ ದರ್ಶನ ಪಡೆಯುವ ಸ್ಥಳ, ಹೆಚ್ಚಿನ ಟೋಕನ್ ವಿತರಿಸುವ ಸ್ಥಳ, ಲಡ್ಡು ವಿತರಣೆ ಸ್ಥಳ, ಕೊಠಡಿ ಹಂಚಿಕೆ, ಹಣ ಮರುಪಾವತಿ ಮೊದಲಾದ ಕಡೆಗಳಲ್ಲಿ ಫೇಸ್ ರೇಕಗ್ನಿಷನ್ ವ್ಯವಸ್ಥೆ ಅಳವಡಿಸಲು ನಿರ್ಧರಿಸಲಾಗಿದೆ.

ಕೆಲವರು ಪದೇ ಪದೇ ಟೋಕನ್, ಲಡ್ಡು ಪಡೆಯುವ ಮೂಲಕ ಭಕ್ತಾದಿಗಳಿಗೆ ತೊಂದರೆ ಕೊಡುತ್ತಾರೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಈ ವ್ಯವಸ್ಥೆ ಜಾರಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

 

 

Please follow and like us:

Leave a Reply

Your email address will not be published. Required fields are marked *

Next Post

ಪಂಜೆ ಮಂಗೇಶರಾವ್ ಭಾರತೀಯ-ಬರಹಗಾರ

Wed Feb 22 , 2023
ಪಂಜೆ ಮಂಗೇಶರಾಯರು ತಮ್ಮ ‘ಕಿರುಗತೆ-ಕಿರುಗವನಗಳು’ ಮೂಲಕ ಹೊಸಸಾಹಿತ್ಯದ ಹರಿಕಾರರಲ್ಲಿ ಒಬ್ಬರೆಂದು ಚಿರಸ್ಮರಣೀಯರು.ರಾಮಪ್ಪಯ್ಯ ಮತ್ತು ಶಾಂತಾದುರ್ಗಾ ದಂಪತಿಗಳ ಮಗನಾಗಿ ಮಂಗೇಶರಾಯರು 1874ರ ಫೆಬ್ರವರಿ 22ರಂದು ಬಂಟವಾಳದಲ್ಲಿ ಜನಿಸಿದರು. ಅವರ ಪೂರ್ವಿಕರು ಮೂಲತಃ ಪುತ್ತೂರಿಗೆ ಸಮೀಪದ ‘ಪಂಜ’ದವರಾಗಿದ್ದರು. ಅವರು ವಿವಾಹವಾಗಿದ್ದು ನಾಡಿನಲ್ಲಿ ಪ್ರಸಿದ್ಧರಾದ ಬೆನಗಲ್ ರಾಮರಾಯರ ತಂಗಿ ಗಿರಿಜಾಬಾಯಿ ಅವರನ್ನು. ಬಿ.ಎ ವಿದ್ಯಾಭ್ಯಾಸ ಮುಗಿಸಿ ಎಲ್.ಟಿ ತರಬೇತಿ ಪಡೆದ ಪಂಜೆಯವರು ಪ್ರಾರಂಭದಲ್ಲಿ ಶಿಕ್ಷಕರಾಗಿ, ಮಂಗಳೂರಿನ ಶಾಲಾ ಸಬ್ ಇನ್ಸ್ಪೆಕ್ಟರ್ ಆಗಿ, ಇನ್ಸ್ಪೆಕ್ಟರ್ ಆಗಿ […]

Advertisement

Wordpress Social Share Plugin powered by Ultimatelysocial