ಶಿವಮೊಗ್ಗ: ಬೆಳ್ಳಂಬೆಳಗ್ಗೆ ಭೀಕರ ಅಪಘಾತ

ಶಿವಮೊಗ್ಗ: ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಮಾಚೇನಹಳ್ಳಿ ಡೈರಿ ಬಳಿ ನಡೆದಿದೆ.
ಭದ್ರಾವತಿ ನಗರದ ಪೇಪರ್ ಟೌನ್ ನಿವಾಸಿಗಳಾಗಿರುವ ಷಣ್ಮುಖ ಹಾಗೂ ರಾಮಚಂದ್ರ ಮೃತ ದುರ್ದೈವಿಗಳು.
ಷಣ್ಮುಖ ಹಾಗೂ ರಾಮಚಂದ್ರ ಕೆಲಸದ ನಿಮಿತ್ತ ತೀರ್ಥಹಳ್ಳಿಗೆ ಹೋಗುತ್ತಿದ್ದರು. ಈ ವೇಳೆ ಶಿವಮೊಗ್ಗದಿಂದ ಭದ್ರಾವತಿ ಕಡೆಗೆ ಸಾಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಲಾರಿಯ ಸ್ಟೇರಿಂಗ್ ಕಟ್ ಆಗಿ ಅಪಘಾತ ನಡೆದಿರುವ ಶಂಕೆ ವ್ಯಕ್ತವಾಗಿದೆ. ಘಟನೆ ಸಂಬಂಧ ಭದ್ರಾವತಿಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಶಿಖರ್‌ ಧವನ್‌ ಟೀ ಚೆಲ್ಲಿದ್ದಕ್ಕೆ ಕಪಾಳಕ್ಕೆ ಹೊಡೆದವರು ಯಾರು ಗೊತ್ತ ?

Thu Jan 27 , 2022
    Shikhar Dhawan: ಶಿಖರ್ ಧವನ್​ಗೆ ಕಪಾಳಮೋಕ್ಷ ಮಾಡಿದ್ದು ಬೇರೆ ಯಾರೂ ಅಲ್ಲ, ಸ್ವತಃ ಅವರ ತಂದೆ. ವಾಸ್ತವವಾಗಿ ಧವನ್ ಇನ್‌ಸ್ಟಾಗ್ರಾಮ್‌ನಲ್ಲಿ ರೀಲ್‌ಗಳನ್ನು ಮಾಡಲು ಇಷ್ಟಪಡುತ್ತಾರೆ. ಈ ಬಾರಿ ಅವರು ತಮ್ಮ ತಂದೆಯೊಂದಿಗೆ ರೀಲ್ ಮಾಡಿದ್ದಾರೆ. ಭಾರತದ ಆರಂಭಿಕ ಆಟಗಾರ ಶಿಖರ್ ಧವನ್ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಟೀಕಾಕಾರರ ಬಾಯಿ ಮುಚ್ಚಿಸಿದ್ದಾರೆ.ಶಿಖರ್ ಧವನ್​ಗೆ ಕಪಾಳಮೋಕ್ಷ ಮಾಡಿದ್ದು ಬೇರೆ ಯಾರೂ ಅಲ್ಲ, ಸ್ವತಃ ಅವರ […]

Advertisement

Wordpress Social Share Plugin powered by Ultimatelysocial