ಶೀಘ್ರದಲ್ಲೇ ಮುಜರಾಯಿ ಇಲಾಖೆ ದೇವಸ್ಥಾನಗಳಿಗೆ ಅನುಮತಿ

ರಾಜ್ಯದಲ್ಲಿ ಶೀಘ್ರದಲ್ಲೇ ಮುಜರಾಯಿ ಇಲಾಖೆ ಎಲ್ಲ ದೇವಾಲಯಗಳನ್ನು ತೆರೆಯಲಾಗುವುದು ಎಂದು ಸಚಿವ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಾದ್ಯಂತ ಮೂರನೇ ಹಂತದ ಲಾಕ್‌ಡೌನ್ ವಿಸ್ತರಣೆಯಾಗಿದ್ದರೂ ರಾಜ್ಯದಲ್ಲಿ ಕೆಲವು ವಲಯಗಳಲ್ಲಿ ಸಡಿಲಿಕೆ ಮಾಡಲಾಗಿದೆ. ಹಸಿರು ವಲಯದಲ್ಲಿರುವ ಜಿಲ್ಲೆಗಳಲ್ಲಿ ಮುಕ್ತ ಓಡಾಟ ಮತ್ತು ವಾಣಿಜ್ಯ ಚಟುವಟಿಕೆಗಳಿಗೆ ಅನುವು ಮಾಡಿಕೊಡಲಾಗಿದೆ. ಅಲ್ಲದೆ, ಮದ್ಯ ಮಾರಾಟಕ್ಕೂ ಅವಕಾಶ ನೀಡಲಾಗಿದೆ. ಅದರಂತೆ ರಾಜ್ಯದಲ್ಲಿ ಮುಜರಾಯಿ ಇಲಾಖೆ ದೇವಸ್ಥಾನಗಳನ್ನು ಸದ್ಯದಲ್ಲೇ ತೆರೆಯಲಾಗುವುದು. ಆದರೆ, ದೇವಾಲಯದ ಒಳಗೆ ನೂಕು ನುಗ್ಗಲಿಗೆ ಅವಕಾಶ ಇಲ್ಲ. ಭಕ್ತರು ಸರದಿ ಸಾಲಿನಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡೆ ದೇವರ ದರ್ಶನ ಪಡೆಯಬೇಕು. ಆರಂಭದಲ್ಲಿ ಮುಜುರಾಯಿ ಇಲಾಖೆಗೆ ಸೇರಿದ ಪ್ರಮುಖ ದೇವಸ್ಥಾನಗಳನ್ನು ತೆರೆಯಲಾಗುವುದು ನಂತರ ಇತರೆ ದೇವಾಲಯಗಳನ್ನು ತೆರೆಯಲು ಅವಕಾಶ ನೀಡಲಾಗುವುದು ಎಂದು ಹೇಳಿದರು.

Please follow and like us:

Leave a Reply

Your email address will not be published. Required fields are marked *

Next Post

ಹೊರ ಜಿಲ್ಲೆಗಳಿಗೆ ತೆರಳಲು ಒನ್ ವೇ ಪಾಸ್ :ಈಶ್ವರಪ್ಪ

Tue May 5 , 2020
ಜಿಲ್ಲೆಯಿಂದ ಹೊರ ಜಿಲ್ಲೆಗಳಿಗೆ ತೆರಳೋದಕ್ಕೆ, ಹೊರ ಜಿಲ್ಲೆಗಳಲ್ಲಿ ಸಿಲುಕಿರುವಂತವರನ್ನು ಕರೆದುಕೊಂಡು ಬರೋದಕ್ಕೆ ಒನಾ ವೈ ಪಾಸ್ ವಿತರಣೆ ಮಾಡಲಾಗುತ್ತದೆ ಎಂದು  ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಒನಾ ವೈ ಪಾಸ್ ವಿತರಣೆ ಮಾಡಲಾಗುತ್ತದೆ . ಆದ್ರೇ ಚಂಕಿಗ್ ಕಣ್ ತಪ್ಪಿಸಿ, ಪಾಸ್ ಇಲ್ಲದೇ ಜಿಲ್ಲೆ ಪ್ರವೇಶಿಸಿದ್ರೇ ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಜಿಲ್ಲೆಯಿಂದ ಹೊರ ಜಿಲ್ಲೆಗಳಿಗೆ ತೆರಳಲು ಒನ್ ವೇ ಪಾಸ್ ವಿತರಿಸಲಾಗುತ್ತದೆ. […]

Advertisement

Wordpress Social Share Plugin powered by Ultimatelysocial