ಸಂಕಷ್ಟದಲ್ಲಿರುವ ಖಾಸಗಿ ಶಾಲಾ ಶಿಕ್ಷಕರಿಗೆ ಸಿಹಿಸುದ್ದಿ

ರಾಜ್ಯದಲ್ಲಿ ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಕೊರೊನಾ ಲಾಕ್ ಡೌನ್ ನಿಂದ ಸಂಕಷ್ಟದಲ್ಲಿರುವ ಖಾಸಗಿ ಶಾಲಾ ಶಿಕ್ಷಕರಿಗೆ ನೆರವು ನೀಡುವ ಕುರಿತು ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾತನಾಡಿದ್ದಾರೆ.  ಸಾರ್ವಜನಿಕ ಶಿಕ್ಷಣ ಇಲಾಖೆಯ ಖಾಸಗಿ ಅನುದಾನ ರಹಿತ ಶಾಲೆಗಳ ಶಿಕ್ಷಕರ ನೆರವಿಗೆ ಇಲಾಖೆಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಶಿಕ್ಷಕರಿಗೆ ಒಂದು ಅಥವಾ ಎರಡು ದಿನದ ವೇತನ ನೀಡುವಂತೆ ಧಾವಿಸಬೇಕೆಂದು. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಶ್ರೀ ಎಸ್. ಸುರೇಶ್ ಕುಮಾರ್ ಮನವಿ ಮಾಡಿದ್ದಾರೆ. ಸಂಕಷ್ಟದಲ್ಲಿರುವ ಖಾಸಗಿ ಶಾಲಾ ಶಿಕ್ಷಕರಿಗೆ ಇಲಾಖೆ ಯಾವ ರೀತಿಯಲ್ಲಿ ಆರ್ಥಿಕ ಸಹಾಯ ಮಾಡಬಹುದು ಎಂಬುದರ ಬಗ್ಗೆ ಯೋಚಿಸುತ್ತಿದೆ. ಖಾಸಗಿ ಶಾಲೆಯ ಶಿಕ್ಷಕರಿಗೆ ನೆರವಾಗಲು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಾರಾಯಣಸ್ವಾಮಿಯವರು ತಮ್ಮ ಒಂದು ತಿಂಗಳ ವೇತನ ನೀಡಲು ಮುಂದಾಗಿದ್ದಾರೆ. ನಾನೂ ಸಹ ನನ್ನ ಒಂದು ತಿಂಗಳ ವೇತನವನ್ನು ನೀಡುವೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಚಿಕ್ಕಮಗಳೂರಿನಲ್ಲಿ ಧಾರಾಕಾರ ಮಳೆ ಜನಜೀವನ ಅಸ್ತವ್ಯಸ್ತ

Tue Jul 7 , 2020
ಕೊರೊನಾ ಅತಂಕದ ನಡುವೆಯು ಕಾಫಿ ನಾಡಿಗರಿಗೆ ಹೊರಜಿಲ್ಲೆ-ರಾಜ್ಯದಿಂದ ಬರುವ ಜೊತೆ ಮಳೆಯ ಅತಂಕ ಶುರುವಾಗಿದೆ. ಹೊರ ಜಿಲ್ಲೆಯವರು ಕೊರೊನಾ ಹರಡುವ ಭೀತಿಯ ಜೊತೆಗೆ ಮಳೆಯ ಅರ್ಭಟದಿಮದ ತಲೆ ನೋವು ಬಂದAತಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಅಲ್ಲಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ನಿನ್ನೆ ಸಂಜೆಯಿAದ ಮೂಡಿಗಿರೆ ತಾಲೂಕಿನ ಗೊಟ್ಟಿಗೆಹಾರೆ, ಬಣಕಲ್, ಬಾಲೂರು, ಚಾರ್ಮಡಿ ಘಾಟ್ ಸುತ್ತಮುತ್ತ ಭಾರಿ ಮಳೆ ಸುರಿದಿದೆ. ಕೊರೊನಾ ಅತಂಕದಿAದ ಬದುಕುತ್ತಿರೋ ಜನರಿಗೆ ವರುಣ […]

Advertisement

Wordpress Social Share Plugin powered by Ultimatelysocial