ಸಂಜೆ ೪ರಿಂದ ಬೆಳಗ್ಗೆ ೬ರವರೆಗೆ ೧೪೪ ಜಾರಿ

ಚಾಮರಾಜನಗರದಲ್ಲಿ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಜಿಲ್ಲೆಯಾದ್ಯಂತ ಪ್ರತಿದಿನ ಸಂಜೆ 4 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಹೌದು ಇನ್ನು ಮುಂದೆ ಸಂಜೆ 4 ಗಂಟೆ ನಂತರ ಅಗತ್ಯಸೇವೆಗಳನ್ನು ಹೊರತುಪಡಿಸಿ ಎಲ್ಲಾ ರೀತಿಯ ವ್ಯಾಪಾರ ವಹಿವಾಟನ್ನು ನಿರ್ಬಂಧಿಸಲಾಗಿದೆ. ವಾಹನ ಸಂಚಾರವನ್ನು ಸಹ ನಿಷೇಧಿಸಲಾಗಿದೆ. ಕೊರೊನಾ ಸೋಂಕು ಹರಡುವುದನ್ನು ನಿಯಂತ್ರಿಸಲು ಹಾಗೂ ಸಾರ್ವಜನಿಕರ ಆರೋಗ್ಯ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ಅಧ್ಯಕ್ಷತೆಯಲ್ಲಿ ನಿನ್ನೆ ಜನಪ್ರತಿನಿಧಿಗಳು ಹಾಗೂ ವಿವಿಧ ಸಂಘಟನೆಗಳ ಮುಖಂಡರ ಸಭೆ ನಡೆದಿದ್ದಾರೆ. ಸಭೆಯಲ್ಲಿ ವ್ಯಕ್ತವಾದ ಅಭಿಪ್ರಾಯದ ಮೇರಗೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಅತ್ಯವಶ್ಯಕ ವಸ್ತುಗಳಾದ ಔಷಧಿ, ಹಣ್ಣು ತರಕಾರಿ, ಹಾಲು, ಪೆಟ್ರೋಲ್ ಡೀಸೆಲ್ ಹೊರತುಪಡಿಸಿ ಈ ನಿಷೇಧಾಜ್ಞೆ ಜಾರಿಗೊಳಿಸಿರುವುದಾಗಿ ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ತಿಳಿಸಿದ್ದಾರೆ.

 

 

 

 

 

 

Please follow and like us:

Leave a Reply

Your email address will not be published. Required fields are marked *

Next Post

ವೈದ್ಯರನ್ನು ಕೊಂಡಾಡಿದ ಶ್ರೀರಾಮುಲು

Wed Jul 1 , 2020
ಪ್ರಾಣ ಲೆಕ್ಕಿಸದೇ ಕೊರೋನಾ ಸಂಕಷ್ಟ ಸಂದರ್ಭದಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯಕೀಯ ಸಮೂಹಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಶುಭ ಕೋರಿದ್ದಾರೆ. ರಾಷ್ಟ್ರೀಯ ವೈದ್ಯರ ದಿನಾಚರಣೆ ಅಂಗವಾಗಿ ಸಮಸ್ತ ವೈದ್ಯ ಸಮೂಹಕ್ಕೆ ಹಾಗೂ ಅವರಿಗೆ ಬೆಂಬಲ ನೀಡುತ್ತಿರುವ ಕುಟುಂಬ ಸದಸ್ಯರಿಗೆ ಶುಭಾಶಯಗಳು. ದೇಶವನ್ನು ಸೈನಿಕರು ಕಾಯುವಂತೆ ಜನರ ಆರೋಗ್ಯ ಕಾಪಾಡುವ, ಇನ್ನೊಬ್ಬರ ಪ್ರಾಣ ಉಳಿಸುವ ಮಹಾತ್ಕಾರ್ಯದಲ್ಲಿ ತೊಡಗಿರುವ ವೈದ್ಯರ ಶ್ರಮ ಅಮೂಲ್ಯವಾದದ್ದು. ಕರ್ನಾಟಕದ ಪ್ರತಿಯೊಂದು ಆರೋಗ್ಯ ಕೇಂದ್ರಗಳಲ್ಲಿ […]

Advertisement

Wordpress Social Share Plugin powered by Ultimatelysocial