ನವದೆಹಲಿ: ಸಂಸತ್ ಪಕ್ಷದ ಬೆಳವಣಿಗೆಗೆ ಕೆಲಸ ಮಾಡುವ ಸ್ಥಳವಲ್ಲ. ಅದು ದೇಶದ ಅಭಿವೃದ್ಧಿಗೆ ಇರುವ ಜಾಗ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಸದನದ ಕಲಾಪ ಹಳೆಯ ಸಂಸತ್ ಭವನದಿಂದ ಹೊಸ ಸಂಸತ್ ಕಟ್ಟಡಕ್ಕೆ ಇಂದು ಸ್ಥಳಾಂತರಗೊಂಡಿದೆ.
ಹಿಂದಿನ ಎಲ್ಲ ಕಹಿಗಳನ್ನು ಮರೆತು ಹೊಸ ಅಧ್ಯಾಯ ಪ್ರಾರಂಭಿಸಬೇಕು ಎಂದು ಹೊಸ ಸಂಸತ್ ಭವನದಲ್ಲಿ ತಮ್ಮ ಚೊಚ್ಚಲ ಭಾಷಣದಲ್ಲಿ ಸಂಸದರಿಗೆ ಪ್ರಧಾನಿ ಮೋದಿ ಕಿವಿಮಾತು ಹೇಳಿದ್ದಾರೆ.
ಹೊಸ ಸಂಸತ್ ಭವನದಲ್ಲಿ ಏನೇ ಮಾಡಲು ಹೊರಟರೂ ಅದು ದೇಶದ ಪ್ರತಿಯೊಬ್ಬ ನಾಗರಿಕರಿಗೂ ಸ್ಪೂರ್ತಿಯಾಗಬೇಕು ಎಂದು ಹೇಳಿದ್ದಾರೆ.
ಹೊಸ ಸಂಸತ್ ಭವನ 140 ಕೋಟಿ ಭಾರತೀಯರ ಆಕಾಂಕ್ಷೆಗಳನ್ನು ಪ್ರತಿಬಿಂಬಿಸುತ್ತದೆ ಎಂದು ಅವರು ತಿಳಿಸಿದ್ದಾರೆ.