ಸತತ ಮೂರನೇ ಬಾರಿ ಪೊಲೀಸ್ ಠಾಣೆ ಸೀಲ್‌ಡೌನ್

ಔರಾದ್ ಪಟ್ಟಣದಲ್ಲಿ 10 ರಿಂದ 15ರ ತನಕ ಪ್ರತಿ ನಿತ್ಯವೂ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಔರಾದ್ ಪಟ್ಟಣದ  ಪೊಲೀಸ್ ಠಾಣೆಯ ಸಿಬ್ಬಂದಿಗೆ ಕೊರೊನಾ ದೃಡಪಟ್ಟಿದೆ. ಈ ಹಿನ್ನಲೆ ಬುಧವಾರ ಪೊಲೀಸ್ ಠಾಣೆಯನ್ನು ಸೀಲ್‍ಡೌನ್ ಮಾಡಿ ರೋಗಾಣು ನಿವಾರಕ ಔಷಧಿ ಸಿಂಪಡಿಸಿ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ. ಇದರಿಂದಾಗಿ ಪೊಲೀಸ್ ಇಲಾಖೆಯ ಕಾರ್ಯ ವಿಳಂಬಆಗುವ ಸಾಧ್ಯತೆ ಇದೆ. ಪೊಲೀಸ್ ಠಾಣೆಯ ಪಿಎಸ್ಐ ಜಗದೀಶ್ ನಾಯ್ಕ್  ರವರು ಕಛೇರಿಯ ಎಲ್ಲಾ ಸಿಬ್ಬಂದಿಗಳಿಗೂ ಕೊರೊನಾ ಸೋಂಕು ಹರಡದಂತೆ ಸಾಮಾಜಿಕ ಅಂತರ ಕಾಪಾಡಿ, ಪ್ರತಿಯೊಬ್ಬರು ಮಾಸ್ಕ್ ಧರಿಸುವುದು. ಕಛೇರಿಗೆ ಬರುವ ಮುನ್ನವೇ ಸ್ಯಾನಿಟೈಸರ್ ಹಾಕಿಕೊಂಡು ಕರ್ತವ್ಯಕ್ಕೆ ಹಾಜರಾಗುವಂತೆ ಕಟ್ಟುನಿಟ್ಟಿನ ಆದೇಶ ನೀಡಿದ್ಧಾರೆ. ಠಾಣೆಯಲ್ಲಿ ಬರುವ ಸಾರ್ವಜನಿಕರು ಸಹ ಕೊರೊನಾ ಹರಡದಂತೆ ಸಾಮಾಜಿಕ ಅಂತರದಲ್ಲಿ ನಿಯಮವನ್ನು ಪಾಲಿಸಬೇಕೆಂದು ಮನವಿ ಮಾಡಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಸರ್ಕಾರ ದ್ವೇಷದ ರಾಜಕಾರಣ ಮಾಡಿದರೆ ಹೋರಾಟ ಅನಿವಾರ್ಯ

Thu Jul 23 , 2020
ನಗರದಲ್ಲಿ ಮಾತನಾಡಿದ ಮಾಜಿ ಸಚಿವ ರೇವಣ್ಣ ಸರ್ಕಾರ ದ್ವೇಷದ ರಾಜಕಾರಣ ಮಾಡಿದರೆ ಹೋರಾಟ ಅನಿವರ‍್ಯ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು ಜುಲೈ ತಿಂಗಳು ಕಳೆದರೂ ನಾಲೆಗಳಿಗೆ ನೀರು ಬಿಟ್ಟಿಲ್ಲ. ರ‍್ಕಾರ ಕೂಡಲೇ ನೀರಾವರಿ ಸಲಹಾ ಸಮಿತಿ ಸಭೆ ಕರೆಯಬೇಕು. ಹನ್ನೆರಡು ತಿಂಗಳಿಂದ ಯಾವುದೇ ಹೊಸ ನೀರಾವರಿ ಯೋಜನೆ ಆರಂಭಿಸಿಲ್ಲ. ಮತ್ತು ಹಾಸನ ಜಿಲ್ಲೆಯಲ್ಲಿ ಯಾವುದೇ ಅಭಿವೃದ್ಧಿ ಕರ‍್ಯಗಳು ನಡೆಯುತ್ತಿಲ್ಲ. ಕೊರೊನದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಾಸನ […]

Advertisement

Wordpress Social Share Plugin powered by Ultimatelysocial