ಸರ್ಕಾರಕ್ಕೆ ಈಗ ಎಚ್ಚರವಾಗಿದೆ – ಹೆಚ್.ಕೆ.ಕುಮಾರಸ್ವಾಮಿ

ಊರು ಕೊಳ್ಳೆ ಹೊಡೆದ ಮೇಲೆ ಕೋಟೆ ಬಾಗಿಲು ಹಾಕಿದಂತೆ ರಾಜ್ಯದಲ್ಲಿ ಕೋವಿಡ್-೧೯ ಸೋಂಕು ವ್ಯಾಪಕವಾಗಿ ಹರಡಿದ ನಂತರ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಕೆ.ಕುಮಾರಸ್ವಾಮಿ ಟೀಕಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಎರಡು ತಿಂಗಳು ತಡವಾಗಿಯಾದರೂ ಎಚ್ಚೆತ್ತುಕೊಂಡಿದೆ. ರಾಜ್ಯ ಸರ್ಕಾರದ ಬೇಜವಾಬ್ದಾರಿತನದ ನೀತಿಯಿಂದ ರಾಜ್ಯದಲ್ಲಿ ಇಷ್ಟೊಂದು ಪ್ರಮಾಣದಲ್ಲಿ ಕೊರೊನಾ ಹೆಚ್ಚಳವಾಗಿದೆ. ಇದಕ್ಕೆ ರಾಜ್ಯ ಸರ್ಕಾರವೇ ಹೊಣೆಯೇ ಹೊರತು, ಜನಸಾಮಾನ್ಯರಲ್ಲ ಎಂದು ಆರೋಪಿಸಿದರು. ರಾಜ್ಯ ಸರ್ಕಾರ ತನ್ನ ಬೇಜಾಬ್ದಾರಿ ನೀತಿಯನ್ನು ಬಿಟ್ಟು ಜನಸಾಮಾನ್ಯರ ಆರೋಗ್ಯ ರಕ್ಷಣೆಗೆ ಮುಂದಾಗಬೇಕು ಎಂದು ಒತ್ತಾಯಿಸಿದರು. ಸರ್ಕಾರಿ ಕಚೇರಿಗಳಿಗೆ ಶನಿವಾರ ರಜೆ ಘೋಷಣೆ, ಭಾನುವಾರ ಲಾಕ್ ಡೌನ್ ಹಾಗೂ ರಾತ್ರಿ ಕರ್ಫ್ಯೂ ಜಾರಿ ಮಾಡಿರುವುದು ಸರಿಯಾಗಿದೆ. ಆದರೆ ಈ ಕಾರ್ಯವನ್ನ ಮುಂಚೆಯೇ ಮಾಡಬೇಕಿತ್ತು ಎಂದು ಹೇಳಿದರು

Please follow and like us:

Leave a Reply

Your email address will not be published. Required fields are marked *

Next Post

ಅರ್ಧಕ್ಕೆ ಕೆಟ್ಟು ನಿಂತ ಅಂಬುಲೆನ್ಸ್

Mon Jun 29 , 2020
ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ರೋಗಿಯನ್ನು ಕರೆದೊಯ್ಯಲು ಬಂದ ಅಂಬುಲೆನ್ಸ್ ಅರ್ಧದಲ್ಲೇ ಕೆಟ್ಟು ನಿಂತಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ದುಮ್ಮಿಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆದೊಯ್ಯಲು ದುಮ್ಮಿಕೊಪ್ಪಲು ಗ್ರಾಮಕ್ಕೆ ಬೆಳಗ್ಗೆ ೮ ಗಂಟೆಗೆ ಅಂಬುಲೆನ್ಸ್ ಬಂದಿದೆ. ಈ ವೇಳೆ ಅಂಬುಲೆನ್ಸ್ ಕೆಟ್ಟು ನಿಂತಿದ್ದು ಬದಲಿ ಅಂಬು¯ನ್ಸ್ಗೆ ಕರೆ ಮಾಡಿದ್ದಾರೆ. ಗಂಟೆಗಟ್ಟಲೆ ಕಾದರೂ ಕೂಡ ಬೇರೆ ಅಂಬುಲೆನ್ಸ್ ಬಂದಿಲ್ಲ. ಇದರಿಂದಾಗಿ ರೋಗಿ ಅಂಬು¯ನ್ಸ್ಗಾಗಿ ರಸ್ತೆ […]

Advertisement

Wordpress Social Share Plugin powered by Ultimatelysocial