ಸರ್ಕಾರದ ನಡುವೆ ಕೊಂಡಿಯಾಗಿ ಕೆಲಸ ಮಾಡುವೆ

ಸರ್ಕಾರದ ನಡುವೆ ಕೊಂಡಿಯಾಗಿ ಕೆಲಸ ಮಾಡುವೆ. ಕೇಂದ್ರದಿAದ ಹೆಚ್ಚಿನ ಅನುದಾನ ತರಲು ಹಾಗೂ ಆ ಅನುದಾನದ ಸದ್ಬಳಕೆಗೆ ಪ್ರಯತ್ನಿಸುವೆ. ನನ್ನ ನಿರೀಕ್ಷೆಗೂ ಮೀರಿ ಪಕ್ಷ ಅವಕಾಶ ನೀಡಿದೆ’ ಎಂದು ರಾಜ್ಯಸಭೆ ಸದಸ್ಯ ಈರಣ್ಣಾ ಕಡಾಡಿ ಹೇಳಿದ್ದಾರೆ.ಬೆಳಗಾವಿಯಲ್ಲಿ ಮಾತನಾಡಿದ ಅವರು, ನಮ್ಮಲ್ಲಿ ಬಣ ರಾಜಕೀಯ ಎನ್ನುವುದು ಇಲ್ಲ. ಚುನಾವಣೆ ಸಂದರ್ಭದಲ್ಲಿ ಬಹಳಷ್ಟು ಜನ ಆಕಾಂಕ್ಷಿಗಳು ಟಿಕೆಟ್ ಕೇಳುವುದು ಸಹಜ. ಅಂತಿಮ ತೀರ್ಮಾನ ವರಿಷ್ಠರಿಗೆ ಬಿಟ್ಟಿದ್ದು. ವರಿಷ್ಠರು ಆಯ್ಕೆ ಮಾಡಿದ ನಂತರ ಎಲ್ಲರೂ ಒಗ್ಗೂಡಿ ಕೆಲಸ ಮಾಡುತ್ತೇವೆ. ರಾಜ್ಯಸಭೆಗೆ ಆಕಾಂಕ್ಷಿಗಳಾಗಿದ್ದ ಪ್ರಭಾಕರ ಕೋರೆ ಹಾಗೂ ರಮೇಶ ಕತ್ತಿ ಅವರು ಕೂಡ ನನ್ನನ್ನು ಆಯ್ಕೆ ಮಾಡಿದ್ದನ್ನು ಒಪ್ಪಿಕೊಂಡಿದ್ದಾರೆ. ನನ್ನಂತಹ ಸಾಮಾನ್ಯ ಕಾರ್ಯಕರ್ತನನ್ನು ಆಯ್ಕೆ ಮಾಡುವ ಮೂಲಕ ಬಿಜೆಪಿಯು ಕಾರ್ಯಕರ್ತರ ಪಕ್ಷವೆನ್ನುವುದು ಮತ್ತೊಮ್ಮೆ ಸಾಬೀತಾಗಿದೆ. ರಾಜ್ಯ ಹಾಗೂ ರಾಷ್ಟ್ರ ಮಟ್ಟದ ನಾಯಕರ ನಿರೀಕ್ಷೆಯಂತೆ ಕೆಲಸ ಮಾಡುವೆ. ಹಿಂದೆ ಜಿಲ್ಲಾ ಪಂಚಾಯ್ತಿ ಸದಸ್ಯನಾಗಿ, ಅಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ಈ ಅನುಭವದ ಮೇರೆಗೆ ಮುಂದೆಯೂ ಕೆಲಸ ಮಾಡುವೆ ಎಂದು ಹೇಳಿದರು.

Please follow and like us:

Leave a Reply

Your email address will not be published. Required fields are marked *

Next Post

 ಹುಬ್ಬಳ್ಳಿಯ ಚನ್ನಮ್ಮ ವೃತ್ತದ ಬಳಿ ಜಾಗಟೆ ಭಾರಿಸಿ ಪ್ರತಿಭಟನೆ

Sat Jun 13 , 2020
ಎಸ್‌ಎಸ್‌ಎಲ್‌ಸಿ ಪರೀಕ್ಷೆ ಹಾಗೂ ಆನ್‌ಲೈನ್ ಶಿಕ್ಷಣ ರದ್ದುಗೊಳಿಸುವಂತೆ ವಾಟಾಳ್ ನಾಗರಾಜ್  ಹುಬ್ಬಳ್ಳಿಯ ಚನ್ನಮ್ಮ ವೃತ್ತದ ಬಳಿ ಜಾಗಟೆ ಭಾರಿಸಿ ವಿನೂತನವಾಗಿ ಪ್ರತಿಭಟನೆ ನಡೆಸಿದ್ದಾರೆ. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಎಸ್ ಸುರೇಶ್ ಕುಮಾರ್ ಹಠಕ್ಕೆ ಬಿದ್ದು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾಡಲು ಹೊರಟಿದ್ದಾರೆ. ಕೊರೊನಾ ಪ್ರಕರಣ ಕಡಿಮೆ ಇದ್ದ ವೇಳೆ ಲಾಕ್‌ಡೌನ್ ಮಾಡಿದ್ರು. ಕೊರೊನಾ ಅಟ್ಟಹಾಸ ಮೆರೆಯುವ ವೇಳೆ ಓಪನ್ ಮಾಡಿದ್ದಾರೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಂತರ ಮೌಲ್ಯಮಾಪನ ಮಾಡುವ ಶಿಕ್ಷಕರ […]

Advertisement

Wordpress Social Share Plugin powered by Ultimatelysocial