ಸರ್ಕಾರ ಈಗ ಇಂಗು ತಿಂದ ಮಂಗ

ಸರ್ಕಾರ ಈಗ ಇಂಗು ತಿಂದ ಮಂಗನಂತಾಗಿದ್ದು, ಸೋಂಕಿತರ ಸಂಖ್ಯೆಯ ಗಣನೀಯ ಏರಿಕೆಯನ್ನು ತಡೆಯಲು ಪರದಾಡುತ್ತಿದೆ. ಆರಂಭಿಕ ಹಂತದಲ್ಲೇ ಕೋವಿಡ್-19 ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಕೊರೋನಾ ಸೋಂಕು ಪೀಡಿತರು ಬೆಡ್ ಗಳಿಲ್ಲದೆ, ಚಿಕಿತ್ಸೆ ಇಲ್ಲದೆ ಮನೆಯಲ್ಲೇ ನರಳಿ ಸಾಯುತ್ತಿದ್ದಾರೆ. ಕಳೆದ ಮೂರು ತಿಂಗಳಿಂದ ಮುಖ್ಯಮಂತ್ರಿ ಸೇರಿದಂತೆ ಸಚಿವರು ಮಾತಿನ ಮಂಟಪ ಕಟ್ಟುವುದರಲ್ಲಿ ಕಾಲ ಕಳೆಯುತ್ತಿದ್ದಾರೆ ಎಂದು ಟೀಕೆ ಮಾಡಿದ್ದಾರೆ. ಹಾಗೆಯೇ ನೆರೆಯ ಕೇರಳ ಸರ್ಕಾರ ಕೊರೋನ ತಡೆಗೆ ಕೈಗೊಂಡ ಕ್ರಮಗಳ ‘ಸಿದ್ದ’ ಮಾದರಿ ಕಣ್ಣೆದುರಿಗಿದೆ. ರಾಜ್ಯದ ಸಚಿವರಲ್ಲಿ ಸಮನ್ವಯವಿಲ್ಲ, ಒಬ್ಬೊಬ್ಬರದು ಒಂದೊಂದು ನಿಲುವು. ಇವರ ತಿಕ್ಕಾಟದಲ್ಲಿ ರಾಜ್ಯದ ಜನತೆ ಹೈರಾಣಾಗಿದ್ದಾರೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಡಿ.ಕೆ.ಶಿವಕುಮಾರ್ ನನ್ನ ಮಿತ್ರ ಅಲ್ಲ ಪಕ್ಷದ ಅಧ್ಯಕ್ಷ ಅಷ್ಟೇ

Thu Jul 2 , 2020
ಡಿ.ಕೆ.ಶಿವಕುಮಾರ್ ನನ್ನ ಮಿತ್ರ ಅಲ್ಲ. ಒಂದು ಪಕ್ಷದ ಅಧ್ಯಕ್ಷ ಅಷ್ಟೇ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಅಫಜಲಪುರ ತಾಲೂಕಿನ ಸೊನ್ನ ಬ್ಯಾರೇಜ್ ವೀಕ್ಷಣೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷ ಬೇರೆ, ಅವರ ಪಕ್ಷ ಬೇರೆ. ಬರೀ ಟಿವಿಯಲ್ಲಿ ‘ಪ್ರತಿಜ್ಞಾ’ ಅಂತಾ ಅಧಿಕಾರ ಸ್ವೀಕರಿಸುತ್ತಿದ್ದಾರೆ. ಡಿಕೆಶಿ ಕಾರ್ಯಕ್ರಮಕ್ಕೆ ಮಹತ್ವ ಕೊಡಬೇಕಿಲ್ಲ ಎಂದರು. ಒಂದು ಮದುವೆ ಮಾಡಿಸಬೇಕಾದರೆ ಊಟ ಹಾಕಿಸುತ್ತೇವೆ. ನಮ್ಮವರು ಅಂತಾ ಎಲ್ಲರೂ ಊಟಕ್ಕೆ ಬರ್ತಾರಾ?. […]

Advertisement

Wordpress Social Share Plugin powered by Ultimatelysocial