ಸರ್ಕಾರ ನೇಮಿಸಿದ ಸಮಿತಿಯಿಂದಲೇ ಯುಜಿಸಿಗೆ ಶಿಫಾರಸು

ನವದೆಹಲಿ: ಲಾಕ್‌ಡೌನ್ ಹಿನ್ನೆಲೆಯಲ್ಲಿ ಮಾ.೧೬ರಿಂದಲೇ ದೇಶಾದ್ಯಂತ ಶಾಲಾ-ಕಾಲೇಜುಗಳನ್ನು ಮುಚ್ಚಲಾಗಿದೆ. ಇದು ೨೦೨೦-೨೧ನೇ ಸಾಲಿನ ಶೈಕ್ಷಣಿಕ ವರ್ಷಾರಂಭದ ಮೇಲೆ ಗಂಭಿರ ಪರಿಣಾಮ ಬೀರಲಿದೆ. ಹೀಗಾಗಿ ಕಾಲೇಜುಗಳಲ್ಲಿ ನೂತನ ಶೈಕ್ಷಣಿಕ ವರ್ಷಾರಂಭವನ್ನು ಜುಲೈ ಮಧ್ಯಾವಧಿಯಲ್ಲಿ ಆರಂಭದ ಬದಲು, ಸೆಪ್ಟಂಬರ್‌ನಲ್ಲಿ ಆರಂಭಿಸಲಿದೆ. ಸರ್ಕಾರ ನೇಮಿಸಿದ ಸಮಿತಿಯೊಂದು ವಿಶ್ವವಿದ್ಯಾಲಯ ಧನ ಸಹಾಯ ಆಯೋಗಕ್ಕೆ (ಯುಜಿಸಿ) ಶಿಫಾರಸು ಮಾಡಿದೆ. ಕಾಲೇಜುಗಳನ್ನು ಮುಚ್ಚಿದ್ದರಿಂದ ವಾರ್ಷಿಕ ಹಾಗೂ ಸೆಮಿಸ್ಟರ್ ಪರೀಕ್ಷೆಗಳನ್ನು ನಡೆಸಲಾಗಿಲ್ಲ. ಆ ಪರೀಕ್ಷೆಗಳನ್ನು ಜುಲೈನಲ್ಲಿ ನಡೆಸುವಂತೆ ಸಮಿತಿ ಸಲಹೆ ನೀಡಿದೆ. ಲಾಕ್‌ಡೌನ್ ಕಾರಣದಿಂದ ಪರೀಕ್ಷೆ ಹಾಗೂ ಶೈಕ್ಷಣಿಕ ವರ್ಷಾರಂಭ ಹಾಗೂ ಇತರ ಚಟುವಟಿಕೆಗಳಿಗೆ  ಸಂಬಂಧಿಸಿದ ವಿಚಾರಗಳ ಬಗ್ಗೆ ನಿರ್ಧಾರ ಕೈಗೊಳ್ಳಲು ಹರಿಯಾಣ ಕೇಂದ್ರೀಯ ವಿವಿ ಕುಲಪತಿ ಆರ್.ಸಿ. ಕುಹಾಡ್ ಅಧ್ಯಕ್ಷತೆಯಲ್ಲಿ ಏಳು ಸದಸ್ಯರ ಸಮಿತಿಯೊಂದನ್ನು ಯುಜಿಸಿ ರಚಿಸಿತ್ತು.

Please follow and like us:

Leave a Reply

Your email address will not be published. Required fields are marked *

Next Post

ಮೇ ೩ರಿಂದ ವಿಮಾನ ಹಾರಾಟ

Sat Apr 25 , 2020
ನವದೆಹಲಿ: ಲಾಕ್‌ಡೌನ್ ಹಿನ್ನೆಲೆಯಲ್ಲಿ ಕಳೆದ ಒಂದು ತಿಂಗಳಿನಿಂದ ಸ್ಥಗಿತಗೊಂಡಿದ್ದ ನವದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪುನಾರಂಭಕ್ಕೆ ಸಿದ್ಧತೆಗಳನ್ನು ನಡೆಸಲಾಗಿದೆ. ಲಾಕ್ಡೌನ್ ನಿರ್ಬಂಧವನ್ನು ಸಡಿಲಗೊಳಿಸಲಾಗಿದ್ದು, ಹಲವು ವಾಣಿಜ್ಯ ಚಟುವಟಿಕೆಗಳಿಗೆ ಅನುಮತಿ ನೀಡಲಾಗಿದೆ. ಮೇ ಮೂರರವರೆಗೂ ಲಾಕ್ಡೌನ್ ಜಾರಿಯಲ್ಲಿರಲಿದ್ದು, ಮೇ ೩ರ ಬಳಿಕ ವಿಮಾನ ಸಂಚಾರಕ್ಕೆ ಅವಕಾಶ ನೀಡುವ ಸಾಧ್ಯತೆ ಇದೆ. ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ ಈ ಹಿಂದೆ ಆರಂಭಿಸಲಾಗಿದ್ದ ಟಿಕೆಟ್ ಬುಕ್ಕಿಂಗ್ ಗೆ ಅನುಮತಿ ನೀಡಿಲ್ಲ ಎಂದು ತಿಳಿಸಿತ್ತು. […]

Advertisement

Wordpress Social Share Plugin powered by Ultimatelysocial