ಸರ್ ಎಂ ವಿಶ್ವೇಶ್ವರಯ್ಯ ಜನ್ಮದಿನ, ಎಂಜಿನಿಯರ್ ಗಳ ದಿನ: ಪ್ರಧಾನಿ ಮೋದಿ ಸೇರಿದಂತೆ ಗಣ್ಯರ ಶುಭಾಶಯ

ಇಂದು ಸೆಪ್ಟೆಂಬರ್ 15, ಎಂಜಿನಿಯರ್ ಗಳ ದಿನ. ಪ್ರತಿ ವರ್ಷ ಸೆಪ್ಟೆಂಬರ್ 15 ನ್ನು ಭಾರತದಲ್ಲಿ ಎಂಜಿನಿಯರ್ಸ್ ಡೇ ಎಂದು ಆಚರಣೆ ಮಾಡಲಾಗುತ್ತದೆ. ಭಾರತದ ಮಹಾನ್ ಎಂಜಿನಿಯರ್ ಮತ್ತು ಭಾರತ ರತ್ನ ಮೋಕ್ಷಗುಂಡಂ ವಿಶ್ವೇಶ್ವರಯ್ಯ ಅವರ ಜನ್ಮದಿನವನ್ನೇ ದೇಶದಲ್ಲಿ ಇಂಜಿನಿಯರ್ಸ್ ಡೇ ಎಂದು ಆಚರಿಸುತ್ತಾರೆ. ನವದೆಹಲಿ: ಇಂದು ಸೆಪ್ಟೆಂಬರ್ 15, ಎಂಜಿನಿಯರ್ ಗಳ ದಿನ. ಪ್ರತಿ ವರ್ಷ ಸೆಪ್ಟೆಂಬರ್ 15 ನ್ನು ಭಾರತದಲ್ಲಿ ಎಂಜಿನಿಯರ್ಸ್ ಡೇ ಎಂದು ಆಚರಣೆ ಮಾಡಲಾಗುತ್ತದೆ. ಭಾರತದ ಮಹಾನ್ ಎಂಜಿನಿಯರ್ ಮತ್ತು ಭಾರತ ರತ್ನ ಮೋಕ್ಷಗುಂಡಂ ವಿಶ್ವೇಶ್ವರಯ್ಯ ಅವರ ಜನ್ಮದಿನವನ್ನೇ ದೇಶದಲ್ಲಿ ಇಂಜಿನಿಯರ್ಸ್ ಡೇ ಎಂದು ಆಚರಿಸುತ್ತಾರೆ.
ಇಂಜಿನಿಯರಿಂಗ್ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಭಾರತ ರತ್ನ ಮೋಕ್ಷಗುಂಡಂ ವಿಶ್ವೇಶ್ವರಯ್ಯ ಅವರ ಕೊಡುಗೆ ಗಮನಾರ್ಹವಾದುದು. ಭಾರತದಲ್ಲಿ ಅಣೆಕಟ್ಟು, ಜಲಾಶಯ ಮತ್ತು ಜಲವಿದ್ಯುತ್ ಯೋಜನೆಗಳ ನಿರ್ಮಾಣದಲ್ಲಿ ವಿಶ್ವೇಶ್ವರಯ್ಯ ಅವರ ಕೊಡುಗೆ ಅಪಾರ. ಹಾಗಾಗಿ ವಿಶ್ವೇಶ್ವರಯ್ಯ ಅವರನ್ನು ಮಹಾನ್ ರಾಷ್ಟ್ರ ನಿರ್ಮಾಪಕರಲ್ಲಿ ಒಬ್ಬರೆಂದು ಭಾರತದ ಮಹಾನ್ ಇಂಜಿನಿಯರ್ಗಳಲ್ಲಿ ಒಬ್ಬರೆಂದು ಪರಿಗಣಿಸಲಾಗುತ್ತದೆ. 1968 ರಲ್ಲಿ ಭಾರತ ಸರ್ಕಾರವು ಸರ್ ಎಂ ವಿಶ್ವೇಶ್ವರಯ್ಯ ಅವರ ಜನ್ಮದಿನವನ್ನು ಇಂಜಿನಿಯರ್ಸ್ ದಿನ ಎಂದು ಆಚರಣೆ ಮಾಡುವಂತೆ ಘೋಷಣೆ ಮಾಡಿತು.

ಅಂದಿನಿಂದ ಪ್ರತಿ ವರ್ಷ ಸೆಪ್ಟೆಂಬರ್ 15 ರಂದು ಇಂಜಿನಿಯರ್ ದಿನ ಆಚರಣೆ ಮಾಡಲಾಗುತ್ತಿದೆ. ವಿಶ್ವೇಶ್ವರಯ್ಯನವರು ಕರ್ನಾಟಕ ಜಿಲ್ಲೆಯ ಮೈಸೂರಿನ ಕೋಲಾರ ಜಿಲ್ಲೆಯಲ್ಲಿ 15 ಸೆಪ್ಟೆಂಬರ್ 1860 ರಂದು ಜನಿಸಿದರು.

Please follow and like us:

tmadmin

Leave a Reply

Your email address will not be published. Required fields are marked *

Next Post

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ವಿಚಾರ: ಇಂದು ಹೈಕೋರ್ಟ್​ನಲ್ಲಿ ಅರ್ಜಿ ವಿಚಾರಣೆ

Fri Sep 15 , 2023
ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ವಿರೋಧಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆ ಇಂದು ಧಾರವಾಡ ಹೈಕೋರ್ಟ್​ ಪೀಠದಲ್ಲಿ ನಡೆಯಲಿದೆ. ಹುಬ್ಬಳ್ಳಿ : ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ವಿಚಾರಕ್ಕೆ ಸಂಬಂಧಿಸಿದಂತೆ ಹೋರಾಟ ಮುಂದುವರೆದಿದೆ. ಮಹಾನಗರ ಪಾಲಿಕೆಯ ಆವರಣದಲ್ಲಿ ಶಾಸಕ ಅರವಿಂದ ಬೆಲ್ಲದ ನೇತೃತ್ವದಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಸಿದ್ದು, ಎರಡನೇ ದಿನಕ್ಕೆ ಹೋರಾಟ ಕಾಲಿಟ್ಟಿದೆ. ಈ ವೇಳೆ ಶಾಸಕ ಮಹೇಶ್​ ಟೆಂಗಿನಕಾಯಿ ಕೂಡ ಆಗಮಿಸಿ ಪ್ರತಿಭಟನೆಗೆ ಬೆಂಬಲ ನೀಡಿದರು. ಗುರುವಾರ ರಾತ್ರಿ […]

Advertisement

Wordpress Social Share Plugin powered by Ultimatelysocial