ಸಿಆರ್‌ಪಿಎಫ್ ಮೇಲೆ ಐಇಡಿ ದಾಳಿ

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭಾನುವಾರ ಸ್ಫೋಟ ಸಂಭವಿಸಿದ್ದು, ಭದ್ರತಾ ಪಡೆಗಳು ಪುಲ್ವಾಮಾದ ಗಾಂಗೂ ಪ್ರದೇಶದಲ್ಲಿ ಸಾಗುತ್ತಿರುವಾಗ ಸಿ.ಆರ್.ಪಿ.ಎಫ್ ಯೋಧರನ್ನು ಗುರಿಯಾಗಿಸಿ ಉಗ್ರರು ಐಇಡಿ ಬಳಸಿ ದಾಳಿ ಮಾಡಿದ್ದಾರೆ. ಸ್ಫೋಟ ಸಂಭವಿಸಿದ ನಂತರ ಗುಂಡಿನ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ದುರ್ಘಟನೆಯಲ್ಲಿ ಓರ್ವ ಯೋಧ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇನ್ನು ಭಯೋತ್ಪಾದಕ ದಾಳಿ ಹಿನ್ನೆಲೆಯಲ್ಲಿ ಇಡೀ ಪ್ರದೇಶವನ್ನು ಸೇನೆ ಸುತ್ತುವರೆದಿದ್ದು, ಸ್ಥಳದಲ್ಲಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಕಳೆದ ನಾಲ್ಕು ದಿನಗಳಲ್ಲಿ ಸಿಆರ್‌ಪಿಎಫ್ ಮೇಲೆ ನಡೆದಿರುವ ಎರಡನೇ ದಾಳಿ ಇದಾಗಿದೆ.

 

 

Please follow and like us:

Leave a Reply

Your email address will not be published. Required fields are marked *

Next Post

ಜುಲೈ ೯ರವರೆಗೆ ಜಿಲ್ಲೆಗಳಲ್ಲಿ ಭಾರಿ ಮಳೆ

Sun Jul 5 , 2020
ರಾಜ್ಯದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಜುಲೈ 9ರವರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಎರಡು ದಿನಗಳಿಂದ ಮಳೆ ಹೆಚ್ಚಾಗಿದ್ದು, ನದಿಗಳ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ 5 ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. […]

Advertisement

Wordpress Social Share Plugin powered by Ultimatelysocial