ಸಿದ್ದರಾಮಯ್ಯನವರೇ, ಇದು ಲೆಕ್ಕ ಕೇಳುವ ಸಮಯವಲ್ಲ

ಸಿದ್ದರಾಮಯ್ಯ ಅವರಿಗೆ ಸಹಕಾರ ಕೇಳುವುದು ಮಾತ್ರ ಗೊತ್ತು. ಕೊಡುವುದು ಗೊತ್ತಿಲ್ಲ. ವಿರೋಧ ಪಕ್ಷವಾಗಿ ಆಡಳಿತ ಪಕ್ಷಕ್ಕೆ ಸಹಕಾರ ನೀಡಿ. ಹಾಸಿಗೆ ಇಲ್ಲ, ದಿಂಬಿಲ್ಲ ಎಂದು ದೂರುವುದನ್ನು ಬಿಟ್ಟು ಕಾಂಗ್ರೆಸ್ ಕೋವಿಡ್ ಆಸ್ಪತ್ರೆ ಆರಂಭಿಸಿ ರ‍್ಕಾರಕ್ಕೆ ಸಹಕಾರ ನೀಡಿ ಎಂದು ಮಾಜಿ ಸಚಿವ ಹೆಚ್.ವಿಶ್ವನಾಥ್ ವ್ಯಂಗ್ಯವಾಡಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರೇ, ಇದು ಲೆಕ್ಕ ಕೇಳುವ ಸಮಯವಲ್ಲ. ಲೆಕ್ಕ ಎಲ್ಲಿಯೂ ಹೋಗುವುದಿಲ್ಲ. ಈಗ ಜನರ ರಕ್ಷಣೆ ರ‍್ಕಾರದ ಆದ್ಯತೆ. ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷ ಎರಡೂ ಸೇರಿ ಈ ಪರಿಸ್ಥಿತಿಯನ್ನು ನಿಭಾಯಿಸಬೇಕು. ನೀವು ಜವಾಬ್ದಾರಿಯಿಂದ ರ‍್ತಿಸುವುದನ್ನು ಕಲಿಯಿರಿ. ಲೆಕ್ಕ ಕೇಳುವುದು ತಪ್ಪಲ್ಲ, ಆದರೆ ಈಗ ಅದಕ್ಕೆ ಸಮಯವಲ್ಲ. ಜೆಡಿಎಸ್ ಹಾಗೂ ಕಾಂಗ್ರೆಸ್ನಲ್ಲಿ ಇನ್ನೂ ರಾಜಪ್ರಭುತ್ವವಿದೆ. ಜೆಡಿಎಸ್ ನಲ್ಲಿ ಅಪ್ಪನೇ ರಾಷ್ಟ್ರಾಧ್ಯಕ್ಷ, ಮಗನೇ ರಾಜ್ಯಾಧ್ಯಕ್ಷ. ಎರಡೂ ಪಕ್ಷಗಳ ರಾಜಪ್ರಭುತ್ವದ ವಿರುದ್ಧ ನಾವು ಸಿಡಿದೆದ್ದೆವು. ಈಗ ನಮ್ಮ ನಡೆಯನ್ನು ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ ಅನುಸರಿಸಿದ್ದಾರೆ ಎಂದು ಹೇಳಿದರು.

Please follow and like us:

Leave a Reply

Your email address will not be published. Required fields are marked *

Next Post

ಬಿಎಂಟಿಸಿ ನೌಕರರಿಗೆ ಬಂಪರ್ ಗಿಫ್ಟ್

Fri Jul 17 , 2020
ಕೊರೊನಾ ಸಂಕಷ್ಟದ ನಡುವೆ ಕರ್ತವ್ಯಕ್ಕೆ ಹಾಜರಾದಂತಹ ೩,೩೯೭ ಬಿಎಂಟಿಸಿ ನೌಕರರಿಗೆ ಬಿಎಂಟಿಸಿ ಆಡಳಿತ ಮಂಡಳಿ ಭರ್ಜರಿ ಉಡುಗೊರೆಯನ್ನ ನೀಡಿದೆ. ಕೊರೋನಾ ಲಾಕ್ ಡೌನ್ ಸಮಯದಲ್ಲಿ ಕರ್ತವ್ಯಕ್ಕೆ ಹಾಜರಾದ ಸಿಬ್ಬಂದಿಗಳಿಗೆ ಆಡಳಿತ ಮಂಡಳಿ ಪ್ರತಿ ದಿನಕ್ಕೆ ಹೆಚ್ಚುವರಿಯಾಗಿ ೨೫೦ರೂ ಗಳನ್ನ ನೀಡಲು ನಿರ್ಧರಿಸಿದೆ. ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅನುಮತಿ ಪಡೆದು ಬಿಎಂಟಿಸಿ ಅಧ್ಯಕ್ಷ ಎನ್ ಎಸ್ ನಂದೀಶ್ ರೆಡ್ಡಿ, ಎಂ ಡಿ ಶಿಖಾ […]

Advertisement

Wordpress Social Share Plugin powered by Ultimatelysocial