ಸಿಮ್ ಕಾರ್ಡ್ ಹಾಳು ಮಾಡಿದ್ದಕ್ಕೆ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ,

ಮೊಬೈಲ್ ಸಿಮ್ ಕಾರ್ಡ್ ಹಾಳು ಮಾಡಿದನೆಂಬ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ತನ್ನ ಸಂಬಂಧಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ.

ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಕಾಳ ಮಂದರ್ಗಿ ಗ್ರಾಮದಲ್ಲಿ ಸೋಮವಾರ ರಾತ್ರಿ ಈ ಘಟನೆ ನಡೆದಿದ್ದು, ಭರತ ಸುಭಾಷ್ ಚಂದ್ರವಾಡಿ ಎಂಬವನನ್ನು ಕೊಲೆ ಮಾಡಲಾಗಿದೆ.

ಈತ ತನ್ನ ಸಂಬಂಧಿ ಮಲ್ಲಿಕಾರ್ಜುನನ ಮೊಬೈಲ್ ನಲ್ಲಿದ್ದ ಸಿಮ್ ಕಾರ್ಡ್ ತೆಗೆದು ಇದ್ದಕ್ಕಿದ್ದಂತೆ ನೆಲಕ್ಕೆ ತಿಕ್ಕಿ ಹಾಳು ಮಾಡಿದ್ದ ಎನ್ನಲಾಗಿದೆ. ಅದಾಗಲೇ ಕುಡಿದ ಮತ್ತಿನಲ್ಲಿದ್ದ ಮಲ್ಲಿಕಾರ್ಜುನ ಆಕ್ರೋಶದಲ್ಲಿ ಭರತನ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿ ಅಲ್ಲಿಂದ ಪರಾರಿಯಾಗಿದ್ದಾನೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಹಾಸ್ಟೆಲ್​ ಕಟ್ಟಡದಿಂದ ಜಿಗಿದು MBBS ವಿದ್ಯಾರ್ಥಿ ಶ್ರೀರಾಮ್ ಆತ್ಮಹತ್ಯೆ,

Wed Mar 1 , 2023
ಇನ್ನೇನು ಓದು ಮುಗಿದು ವೈದ್ಯನಾಗಬೇಕು ಎನ್ನುವಷ್ಟರಲ್ಲೇ ಎಂಬಿಬಿಎಸ್ ಅಂತಿಮ ವರ್ಷದ ವಿದ್ಯಾರ್ಥಿ ಸಾವಿನ ಮನೆ ಸೇರಿದ್ದಾನೆ.ಬೀದರ್: ಇನ್ನೇನು ಓದು ಮುಗಿದು ವೈದ್ಯನಾಗಬೇಕು ಎನ್ನುವಷ್ಟರಲ್ಲೇ ಎಂಬಿಬಿಎಸ್ ಅಂತಿಮ ವರ್ಷದ ವಿದ್ಯಾರ್ಥಿ ಸಾವಿನ ಮನೆ ಸೇರಿದ್ದಾನೆ.ಎಂಬಿಬಿಎಸ್ ಅಂತಿಮ ವರ್ಷದ ವಿದ್ಯಾರ್ಥಿ ಶ್ರೀರಾಮ್ ಹಾಸ್ಟೆಲ್​ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಘಟನೆ ಇಂದು (ಫೆಬ್ರುವರಿ 28) ಬೀದರ್​ನ(Bidar) ಬ್ರೀಮ್ಸ್ ಮೆಡಿಕಲ್ ಕಾಲೇಜಿನಲ್ಲಿ ನಡೆದಿದೆ. ಬೆಂಗಳೂರಿನಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಹತ್ಯೆಬೆಂಗಳೂರು: ನಗರದ ನಾಯಂಡಹಳ್ಳಿ […]

Advertisement

Wordpress Social Share Plugin powered by Ultimatelysocial