ಸೂರ್ಯನ ಅಧ್ಯಯನಕ್ಕೆ ಮಹಾಯಾನದ ಮೊದಲ ಹಂತ ಸಕ್ಸಸ್..!

ಸೆಪ್ಟೆಂಬರ್ 5ರ ಮಧ್ಯಾಹ್ನ 3 ಗಂಟೆಗೆ ಮತ್ತೊಂದು ಕಕ್ಷೆಗೆ ಶಿಫ್ಟ್..!

ಚಂದ್ರಯಾನದ ಬಳಿಕ ಸೂರ್ಯನ ಶಿಕಾರಿಗಿಳಿದಿರೋ ಇಸ್ರೋ ಆದಿತ್ಯ-L1 ಮಿಷನ್ ಮೊದಲ ಹಂತವನ್ನು ಯಶಸ್ವಿಯಾಗಿ ಮುಗಿಸಿದೆ. ಆದಿತ್ಯ-L1 ನೌಕೆಯನ್ನು ಕಕ್ಷೆಗೆ ಏರಿಸುವ ಮೊದಲ ಹಂತದ ಪ್ರಕ್ರಿಯೆ ಯಶಸ್ವಿಯಾಗಿದೆ ಎಂದು ಇಸ್ರೋ ಮಾಹಿತಿ ನೀಡಿದೆ. ಈ ಮೂಲಕ ಸೂರ್ಯನ ಅಧ್ಯಯನಕ್ಕೆ ಮಹಾಯಾನ ಕೈಗೊಂಡಿರುವ ಇಸ್ರೋ ಮತ್ತೊಂದು ಹೆಜ್ಜೆ ಮುಂದೆ ಹೋಗಿದೆ.

ಆದಿತ್ಯ-L1 ಬಾಹ್ಯಾಕಾಶ ನೌಕೆಯು ಭೂಮಿಯ ಮೊದಲ ಹಂತದ ಕಕ್ಷೆಯನ್ನು ಯಶಸ್ವಿಯಾಗಿ ತಲುಪಿರೋ ಫೋಟೋವನ್ನು ಇಸ್ರೋ ಹಂಚಿಕೊಂಡಿದೆ. ಸದ್ಯ ಆದಿತ್ಯ-L1 ಮೊದಲ ಕಕ್ಷೆಯನ್ನು ತಲುಪಿದ್ದು, 245 ಕಿಮೀ x 22459 ಕಿ.ಮೀ ದೂರವನ್ನು ತಲುಪಿದೆ. ಇನ್ನು 2ನೇ ಹಂತದ ಕಕ್ಷೆ ತಲುಪುವ ಪ್ರಕ್ರಿಯೆ ಸೆಪ್ಟೆಂಬರ್ 5ರ ಮಧ್ಯಾಹ್ನ 3 ಗಂಟೆಗೆ ನಿಗದಿಪಡಿಸಲಾಗಿದೆ. ಈ ಮೂಲಕ ಆದಿತ್ಯ L-1 ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಇಸ್ರೋ ಮಾಹಿತಿ ಹಂಚಿಕೊಂಡಿದೆ.

ಆದಿತ್ಯ-L1 ಮಿಷನ್ ಅನ್ನು ಬೆಂಗಳೂರಿನ ISTRAC ಅಂದ್ರೆ ಟೆಲಿಮೆಟ್ರಿ, ಟ್ರಾಂಕಿಂಗ್ ಮತ್ತು ಕಮಾಂಡ್ ನೆಟ್‌ವರ್ಕ್ ಕೇಂದ್ರದಿಂದ ಯಶಸ್ವಿಯಾಗಿ ನಿರ್ವಹಿಸಲಾಗಿದೆ. ಆದಿತ್ಯ-ಎಲ್1 ಬಾಹ್ಯಾಕಾಶ ನೌಕೆಯು ಸುಸ್ಥಿತಿಯಲ್ಲಿದ್ದು, ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಇಸ್ರೋ ತಿಳಿಸಿದೆ. ಆದಿತ್ಯ-L1 ಮಿಷನ್ 125 ದಿನ ಭೂಮಿಯಿಂದ 15 ಲಕ್ಷ ಕಿ.ಮೀ ದೂರದಲ್ಲಿರುವ ಲಗ್ರಾಂಜಿಯನ್ ಪಾಯಿಂಟ್ ಅನ್ನು ತಲುಪಲಿದೆ.

Please follow and like us:

tmadmin

Leave a Reply

Your email address will not be published. Required fields are marked *

Next Post

ಸನಾತನ ಧರ್ಮ ಡೆಂಗ್ಯೂ, ಮಲೇರಿಯಾ ಇದ್ದಂತೆ ಎಂಬ ವಿವಾದಾತ್ಮಕ ಹೇಳಿಕೆ ವಿಚಾರ..!

Sun Sep 3 , 2023
ಉದಯನಿಧಿ ಸ್ಟಾಲಿನ್‌  ವಿವಾದಾತ್ಮಕ ಹೇಳಿಕೆಗೆ ಬಿಜೆಪಿ ಕಿಡಿ..! ಸನಾತನ ಧರ್ಮ ಡೆಂಗ್ಯೂ, ಮಲೇರಿಯಾ ಇದ್ದಂತೆ, ಎಂಬ ವಿವಾದಾತ್ಮಕ ಹೇಳಿಕೆಯನ್ನು ನೀಡಿದ ತಮಿಳುನಾಡು ಸಿಎಂ ಸ್ಟಾಲಿನ್‌  ಪುತ್ರ ಉದಯನಿಧಿ ಸ್ಟಾಲಿನ್‌  ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿ ಬಿಜೆಪಿಗರ ಕೆಂಗಣ್ಣಿಗೆ ಗುರಿಯಾದರು. ಹೌದು… ಸನಾತನ ಧರ್ಮವನ್ನು ಮಲೇರಿಯಾ, ಡೆಂಗ್ಯೂ ಜೊತೆ ಹೋಲಿಸಿ ಹೇಳಿಕೆ ನೀಡಿರುವ ಉದಯನಿಧಿ ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದು, ಈ ಹೇಳಿಕೆ ಹಿಂದುತ್ವವಾದಿಗಳ ಕಣ್ಣು ಕೆಂಪಾಗುವಂತೆ ಮಾಡಿದೆ. ಉದಯನಿಧಿ ಸ್ಟಾಲಿನ್‌ರವರ ವಿವಾದಾತ್ಮಕ ಹೇಳಿಕೆಯನ್ನು […]

Advertisement

Wordpress Social Share Plugin powered by Ultimatelysocial