ಸೆಪ್ಟೆಂಬರ್ 5ರಿಂದ ಶಾಲೆಗಳು ಆರಂಭ

ಕೊರೊನಾ ವೈರಸ್ ಭೀತಿಯ ನಡುವೆಯೇ ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸಲು ಆಂಧ್ರ ಪ್ರದೇಶ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದ್ದು, ಸೆಪ್ಟೆಂಬರ್ 5 ರಿಂದ ಶಾಲೆಗಳನ್ನು ಆರಂಭಿಸಲು ತೀರ್ಮಾನಿಸಲಾಗಿದೆ ಎಂದು ಆಂಧ್ರಪ್ರದೇಶ ಶಿಕ್ಷಣ ಸಚಿವ ಆದಿಮುಲಾಪು ಸುರೇಶ್ ತಿಳಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದಲ್ಲಿ ಸೆಪ್ಟೆಂಬರ್ 5 ರಿಂದ ಶಾಲೆಗಳನ್ನು ಆರಂಭಿಸಲಾಗುವುದು, ಶಾಲೆಗಳು ಆರಂಭವಾಗುವ ತನಕ ಮಧ್ಯಾಹ್ನದ ಬಿಸಿಯೂಟ ಯೋಜನೆ ದಿನಸಿ ಪದಾರ್ಥಗಳನ್ನು ಮಕ್ಕಳ ಮನೆಗೆ ತಲುಪಿಸಬೇಕಾಗುತ್ತದೆ ಎಂದು ತಿಳಿಸಿದರು.ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದಲ್ಲಿ ಎಲ್ ಕೆಜಿ ಮತ್ತು ಯುಕೆಜಿಯನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಆರಂಭಿಸಲಾಗುತ್ತದೆ ಎಂದು ಹೇಳಿದರು.

Please follow and like us:

Leave a Reply

Your email address will not be published. Required fields are marked *

Next Post

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಲಾಕ್‌ಡೌನ್ ತೆರವು

Wed Jul 22 , 2020
ಬೆಂಗಳೂರು ,ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಲಾಕ್ ಡೌನ್ ತೆರವುಗೊಳಿಸಿದ ಕಾರಣ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಹಜ ರೀತಿಯಲ್ಲಿ ವಾಹನ ಸಂಚಾರ ಆರಂಭವಾಗಿದ್ದು,ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ ಯಥಾವತ್ತಾಗಿ ಟೋಲ್ ಸಂಗ್ರಹವಾಗುತ್ತಿದೆ. ಹಾಗು ಪ್ಲೈ ಒವರ್ ಗಳಲ್ಲಿ ಹಾಕಿದ್ದ ಬ್ಯಾರಿಕೇಡ್ ತೆರವುಗೊಳಿಸಿ ಮುಕ್ತ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದ್ದು ಎಂದಿನಂತೆ ಗೂಡ್ಸ್ ವಾಹನಗಳು ಸಹ ಸಂಚರಿಸುತ್ತಿವೆ. ನೆಲಮಂಗಲ ಹೆದ್ದಾರಿಗಳಲ್ಲಿ ಸಹಜವಾಗಿ ಟೋಲ್ ಸುಂಕ ಪಾವತಿಸಿ ವಾಹನಗಳು ಸಂಚರಿಸುತ್ತಿವೆ.ಆದರೆ ಬೆರಳೆಣಿಕೆಯಷ್ಟು ಜನರು ಮಾತ್ರ ಬೆಂಗಳೂರಿಗೆ […]

Advertisement

Wordpress Social Share Plugin powered by Ultimatelysocial