ಸೋಂಕಿತರ ಅಂತ್ಯಕ್ರಿಯೆಗೆ ೩೫ ಎಕರೆ ಜಮೀನು

ಕೋವಿಡ್-19 ಸೋಂಕಿತರ ಅಂತ್ಯಕ್ರಿಯೆಗೆ ಬೆಂಗಳೂರು ನಗರ ಜಿಲ್ಲಾಡಳಿತದಿಂದ ಸರ್ಕಾರದ ಸ್ವತ್ತಿನ 35 ಎಕರೆ 18 ಗುಂಟೆ ಸ್ಥಳವನ್ನು ಗುರುತಿಸಲಾಗಿದೆ. ಹಾಗೂ ಬಿಬಿಎಂಪಿ ವ್ಯಾಪ್ತಿಯಲ್ಲಿ ವಿದ್ಯುತ್ ಚಿತಾಗಾರಗಳನ್ನು ಬಳಕೆ ಮಾಡಲಾಗುತ್ತಿದೆ. ಸೋಂಕಿನಿಂದ ಸಾವನ್ನಪ್ಪಿದವರನ್ನು ಸಾಮಾನ್ಯ ಸ್ಮಶಾನ ಗಳಲ್ಲಿ ಅಂತ್ಯಕ್ರಿಯೆ ಮಾಡಲು ಸಾರ್ವ ಜನಿಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮಕ್ಕೆ ಮುಂದಾಗಿದ್ದು, ಸರ್ಕಾರದ ಗೋಮಾಳ ಜಮೀನುಗಳಲ್ಲಿ ಮೃತರ ಅಂತ್ಯಕ್ರಿಯೆಗೆ ಅವಕಾಶ ನೀಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ಈ ಹಿಂದೆ ತಿಳಿಸಿದ್ದರು. ಈ ಕುರಿತು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಎನ್. ಶಿವಮೂರ್ತಿ ನಾಲ್ಕು ತಾಲೂಕುಗಳಲ್ಲಿ 35 ಎಕರೆ 18 ಗುಂಟೆ ಜಮೀನನ್ನು ಗುರುತಿಸಿದ್ದಾರೆ.

 

Please follow and like us:

Leave a Reply

Your email address will not be published. Required fields are marked *

Next Post

ತಂತ್ರಜ್ಞಾನದಿAದ ವೈದ್ಯರಿಗೆ ಸಹಾಯ

Fri Jul 3 , 2020
ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ತಂತ್ರಜ್ಞಾನ ವೈದ್ಯರಿಗೆ ಸಹಾಯ ಮಾಡಲಿದೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರು ಹೇಳಿದ್ದಾರೆ.  ಬಾಲಬ್ರೂಯಿಯಲ್ಲಿ ಐಸಿಯು  ಟೆಲಿಕಾರ್ಟ್ ಗೆ ರಿಮೋಟ್ ಮೂಲಕ ಆರೋಗ್ಯ ಸಚಿವರು ಚಾಲನೆ ನೀಡಿದರು. ನಂತರ ಮಾತನಾಡಿರುವ ಅವರು, ಕೊರೋನಾ ಸೋಂಕು ಪೀಡಿತರಿಗೆ ಚಿಕಿತ್ಸೆ ನೀಡುವ ವೈದ್ಯರಿಗೆ ಸೋಂಕು ತಗುಲದಂತೆ ನೋಡಿಕೊಳ್ಳಲು ತಂತ್ರಜ್ಞಾನ ಸಹಾಯ ಮಾಡಲಿದೆ. ತಂತ್ರಜ್ಞಾನ ಬಳಕೆಯಿಂದ ದೂರದಿಂದಲೇ ವೈದ್ಯರು ಸೋಂಕಿತರನ್ನು ಆರೈಕೆ ಮಾಡಬಹುದಾಗಿದೆ ಎಂದು ಹೇಳಿದ್ದಾರೆ.   Please […]

Advertisement

Wordpress Social Share Plugin powered by Ultimatelysocial