ಸೋಂಕು ಹೆಚ್ಚಳ: ಕರ್ನಾಟಕ, ಕೇರಳ ಸೇರಿ 6 ರಾಜ್ಯಗಳಿಗೆ ಕೇಂದ್ರ ಪತ್ರ

 

ವದೆಹಲಿ: ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ದೇಶದ 6 ರಾಜ್ಯಗಳಲ್ಲಿ ಕೊರೊನಾ ಪ್ರಕರಣಗಳ ದಿಢೀರ್‌ ಏರಿಕೆ ದಾಖಲಾಗುತ್ತಿದ್ದು, ಈ ಬಗ್ಗೆ ನಿಗಾವಹಿಸಿ, ಸೋಂಕು ತಡೆಗಟ್ಟುವ ಕ್ರಮವನ್ನು ಹೆಚ್ಚಿಸಲು ರಾಜ್ಯಗಳಿಗೆ ಕೇಂದ್ರಸರ್ಕಾರ ಪತ್ರಬರೆದಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ಮಹಾರಾಷ್ಟ್ರ, ಗುಜರಾತ್‌, ತೆಲಂಗಾಣ, ತಮಿಳುನಾಡು, ಕೇರಳ ಹಾಗೂ ಕರ್ನಾಟಕ ರಾಜ್ಯಗಳಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ಸೋಂಕು ಪರೀಕ್ಷೆ, ಚಿಕಿತ್ಸೆ, ಮೇಲ್ವಿಚಾರಣೆ ಹಾಗೂ ಲಸಿಕೆ ನೀಡಿಕೆಯನ್ನು ಹೆಚ್ಚಿಸಿ, ಖಚಿತಪಡಿಸಿಕೊಳ್ಳುವಂತೆ ಕೇಳಲಾಗಿದೆ.

ಅಲ್ಲದೇ, ಪ್ರಕರಣಗಳ ದಿಢೀರ್‌ ಏರಿಕೆ ಈವರೆಗಿನ ಎಲ್ಲ ಹೋರಾಟವನ್ನು ವಿಫ‌ಲಗೊಳಿಸುವ ಮುನ್ನ ಎಚ್ಚೆತ್ತುಕೊಳ್ಳುವಂತೆಯೂ ನಿರ್ದೇಶಿಸಿದೆ. 4 ತಿಂಗಳ ಬಳಿಕ ಗುರುವಾರ ಒಂದೇ ದಿನದಲ್ಲಿ 700 ಅಧಿಕ ಮಂದಿಗೆ ಸೋಂಕು ದೃಢಪಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಮಾ. 31 ರಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ, ಪೋಷಕರಿಗೆ ಮುಖ್ಯ ಮಾಹಿತಿ; ಸಹಾಯವಾಣಿ ಆರಂಭ

Fri Mar 17 , 2023
  ಬೆಂಗಳೂರು: ಮಾರ್ಚ್ 31 ರಿಂದ ಏಪ್ರಿಲ್ 15 ರವರೆಗೆ ಎಸ್.ಎಸ್.ಎಲ್.ಸಿ. ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಸಹಾಯವಾಣಿ ಆರಂಭಿಸಲಾಗಿದೆ. ಪರೀಕ್ಷೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು, ಪೋಷಕರಲ್ಲಿ ಯಾವುದೇ ಸಂದೇಹ, ಗೊಂದಲ, ಆತಂಕ ಪರಿಹರಿಸಲು ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಸಹಾಯವಾಣಿ ಆರಂಭಿಸಲಾಗಿದೆ. ಮಾರ್ಚ್ 20 ರಿಂದ 28 ರವರೆಗೆ ರಜಾ ದಿನಗಳನ್ನು ಹೊರತುಪಡಿಸಿ ಉಳಿದ ದಿನಗಳಲ್ಲಿ ಮಧ್ಯಾಹ್ನ 3 ಗಂಟೆಯಿಂದ ಸಂಜೆ 7:30ರ ವರೆಗೆ ಹಾಗೂ ಮಾರ್ಚ್ 26ರಂದು […]

Advertisement

Wordpress Social Share Plugin powered by Ultimatelysocial