ಸೋನಿಯಾ ಗಾಂಧಿ ಅವರಿಗೆ ಮತ್ತೆ ಅನಾರೋಗ್ಯ ಸಮಸ್ಯೆ..!

ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಜ್ವರದಿಂದ ಬಳಲುತ್ತಿರುವ ಅವರನ್ನು ಶುಕ್ರವಾರದಂದು ದಿಲ್ಲಿಯ ಶ್ರೀ ಗಂಗಾ ರಾಮ್‌ ಆಸ್ಪತ್ರೆಗೆ ದಾಖಲಿಸಿಲಾಗಿತ್ತು.

ಹೌದು..ಮಾಜಿ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಮತ್ತೆ ಅನಾರೋಗ್ಯಕ್ಕೆ ತುತ್ತಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರಿಗೆ ಜ್ವರದ ಸಮಸ್ಯೆ ಕಾಣಿಸಿಕೊಂಡಿದೆ. ಹೀಗಾಗಿ ಅವರಿಗೆ ದಿಲ್ಲಿಯ ಸರ್‌ ಗಂಗಾರಾಮ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸೊತ್ರೆಯ ಸಿಬ್ಬಂದಿ ಮಾಹಿತಿಯನ್ನು ನೀಡಿದ್ದಾರೆ.

ಸೋನಿಯಾ ಗಾಂಧಿ ಅವರನ್ನು ನಿಗಾವಣೆಯಲ್ಲಿ ಇರಿಸಲಾಗಿದ್ದು, ಅವರಿಗೆ ಅನೇಕ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. 76 ವರ್ಷದ ಸೋನಿಯಾ ಅವರ ಶ್ವಾಸಕೋಶಗಳ ಒಳಪದರಗಳಲ್ಲಿ ಉರಿತ (ಬ್ರಾಂಚಿಟಿಸ್) ಉಂಟಾಗಿದೆ ಎಂದು ಹೇಳಲಾಗಿದೆ.

Please follow and like us:

tmadmin

Leave a Reply

Your email address will not be published. Required fields are marked *

Next Post

‘ಬಿಗ್ ಬಾಸ್ ಕನ್ನಡ 10’ ಕಾರ್ಯಕ್ರಮದ ಮೊದಲ ಪ್ರೋಮೋ ಔಟ್‌ ಆಗಿದೆ..!

Sun Sep 3 , 2023
ಕಳೆದ ಕೆಲವು ದಿನಗಳಿಂದ ಕಿರುತೆರೆ ವೀಕ್ಷಕರಿಗೆ ಕಾಡುತ್ತಿದ್ದ ಪ್ರಶ್ನೆ ಒಂದೇ..! ಅದೇನಪ್ಪಾ ಅಂದ್ರೆ… ಯಾವಾಗಿನಿಂದ ‘ಬಿಗ್ ಬಾಸ್’ ಶುರು? ಅಂತ.. ಆ ಪ್ರಶ್ನೆಗೆ ಇನ್ನೂ ನಿಖರ ಉತ್ತರ ಸಿಕ್ಕಿಲ್ಲ. ಆದರೆ, ಅತೀ ಶೀಘ್ರದಲ್ಲೇ ‘ಬಿಗ್ ಬಾಸ್ ಕನ್ನಡ 10’ ಆರಂಭವಾಗಲಿದೆ. ‘ಬಿಗ್ ಬಾಸ್ ಕನ್ನಡ 10’ ಕಾರ್ಯಕ್ರಮದ ಮೊಟ್ಟ ಮೊದಲ ಪ್ರೋಮೋ ಇಂದು ಕಲರ್ಸ್ ಕನ್ನಡ ವಾಹಿನಿ ಬಿಡುಗಡೆ ಮಾಡಿದೆ. ಇಂದು ಕಿಚ್ಚ ಸುದೀಪ್‌ ಅವರ ಜನ್ಮದಿನ. ಅಭಿನಯ ಚಕ್ರವರ್ತಿ […]

Advertisement

Wordpress Social Share Plugin powered by Ultimatelysocial