ಸೋಮವಾರ ಮೇಘಾಲಯ ವಿಧಾನಸಭಾ ಚುನಾವಣೆ: ಸಿದ್ಧತೆ ಮಾಡಿಕೊಂಡ ಚುನಾವಣಾ ಆಯೋಗ

ಶಿಲ್ಲಾಂಗ್, ಫೆಬ್ರವರಿ. 26: ಸೋಮವಾರದ ಫೆಬ್ರವರಿ. 27 ರಂದು ವಿಧಾನಸಭಾ ಚುನಾವಣೆಗೆ ಮೇಘಾಲಯ ಸಿದ್ಧವಾಗಿದ್ದು, ರಾಜ್ಯದಾದ್ಯಂತ 900 ಮತಗಟ್ಟೆಗಳನ್ನು ದುರ್ಬಲ ಮತ್ತು ಗಂಭೀರ ಎಂದು ಗುರುತಿಸಲಾಗಿದೆ ಎಂದು ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ಹೇಳಿದ್ದಾರೆ.

ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಮೇಘಾಲಯದ ಸಿಇಒ ಎಫ್‌ಆರ್ ಖಾರ್ಕೊಂಗೊರ್, “ಈ 900 ಮತಗಟ್ಟೆಗಳಲ್ಲಿ ಈ ಹಿಂದೆ ಹಿಂಸಾಚಾರ ನಡೆದಿರುವ ದಾಖಲೆಗಳಿವೆ ಎಂದಿದ್ದಾರೆ.

ಗರೋ ಮತ್ತು ಖಾಸಿ ಹಿಲ್ಸ್ ಪ್ರದೇಶದಲ್ಲಿ ಈ ಹಿಂದೆ ಉಗ್ರಗಾಮಿ ಗುಂಪುಗಳು ಸಕ್ರಿಯವಾಗಿದ್ದವು. ಹಿಂದಿನ ಚುನಾವಣೆಗಳಲ್ಲಿ ಕೆಲವು ಅಹಿತಕರ ಘಟನೆಗಳು ವರದಿಯಾಗಿದ್ದವು. ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯನ್ನು ಸುಗಮವಾಗಿ ನಡೆಸಲು, ಕಾನೂನು ಮತ್ತು ಸುವ್ಯವಸ್ಥೆಯನ್ನು ಖಚಿತಪಡಿಸಿಕೊಳ್ಳಲು ಚುನಾವಣಾ ಆಯೋಗವು 119 ಕಂಪನಿಗಳ ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಗಳನ್ನು (ಸಿಎಪಿಎಫ್) ಮೇಘಾಲಯದಲ್ಲಿ ನಿಯೋಜಿಸಿದೆ ಎಂದು ಖಾರ್ಕೊಂಗೊರ್ ಮಾಹಿತಿ ನೀಡಿದ್ದಾರೆ.

“ಈ ಹಿಂದೆ ತ್ರಿಪುರಾ ವಿಧಾನಸಭಾ ಚುನಾವಣೆಯನ್ನು ಯಶಸ್ವಿಯಾಗಿ ನಿರ್ವಹಣೆ ಮಾಡಿದ್ದೇವೆ. ಇಲ್ಲಿಯವರೆಗೆ ಯಾವುದೇ ಕಾನೂನು ಸುವ್ಯವಸ್ಥೆಗೆ ದಕ್ಕೆ ಬರುವಂತಹ ಘಟನೆಗಳು ವರದಿಯಾಗಿಲ್ಲ. ಆದರೆ, ದುರದೃಷ್ಟವಶಾತ್, ಸೋಹಿಯಾಂಗ್ ಕ್ಷೇತ್ರದ ಅಭ್ಯರ್ಥಿಯೊಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಅಲ್ಲಿ ಚುನಾವಣೆಯನ್ನು ಮುಂದೂಡಿಲಾಗಿದೆ. ಆದ್ದರಿಂದ, 60 ವಿಧಾನಸಭಾ ಕ್ಷೇತ್ರಗಳ ಪೈಕಿ 59 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ” ಎಂದು ಮೇಘಾಲಯ ಸಿಇಒ ಮಾಹಿತಿ ನೀಡಿದ್ದಾರೆ.

“ಒಟ್ಟು 3,482 ಮತಗಟ್ಟೆಗಳನ್ನು ಸ್ಥಾಪಿಸಿದ್ದೇವೆ. ಎಲ್ಲಾ ಸಿದ್ಧತೆಗಳು ನಡೆಯುತ್ತಿವೆ. ಎಲ್ಲಾ 12 ಜಿಲ್ಲಾ ಚುನಾವಣಾ ತಂಡಗಳು ಚುನಾವಣೆಗೆ ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಂಡಿವೆ. ಗರೋ ಬೆಟ್ಟಗಳಲ್ಲಿ ನಮಗೆ ಕೆಲವು ಸಣ್ಣಪುಟ್ಟ ಸಮಸ್ಯೆಗಳಿವೆ. ಅಲ್ಲಿ ಸದಸ್ಯರ ನಡುವೆ ಘರ್ಷಣೆ ನಡೆದಿದ್ದು, ಈ ವಿಷಯಕ್ಕೆ ಸಂಬಂಧಿಸಿದಂತೆ 31 ಜನರನ್ನು ಬಂಧಿಸಿದ್ದೇವೆ. ಒಟ್ಟಾರೆಯಾಗಿ, ಚುನಾವಣಾ ಸಿದ್ಧತೆ ಸುಸೂತ್ರವಾಗಿ ನಡೆಯುತ್ತಿದೆ” ಎಂದು ಹೇಳಿದ್ದಾರೆ.

ಇನ್ನು ಮುನ್ನೆಚ್ಚರಿಕೆ ಕ್ರಮವಾಗಿ ಬಾಂಗ್ಲಾದೇಶದೊಂದಿಗಿನ ಮೇಘಾಲಯದ ಅಂತರರಾಷ್ಟ್ರೀಯ ಗಡಿಯನ್ನು ಮಾರ್ಚ್ 2 ರವರೆಗೆ ಮುಚ್ಚಲು ಚುನಾವಣಾ ಆಯೋಗ ಆದೇಶಿಸಿದೆ. “ರಾಜ್ಯದಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಯನ್ನು ಖಚಿತಪಡಿಸಿಕೊಳ್ಳಲು ನಾವು ಎಲ್ಲಾ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಸಿಆರ್‌ಪಿಸಿಯ ಸೆಕ್ಷನ್ 144 ಅನ್ನು ಅಂತರರಾಷ್ಟ್ರೀಯ ಗಡಿಯಲ್ಲಿ ವಿಧಿಸಲಾಗಿದೆ” ಎಂದು ಖಾರ್ಕೊಂಗೊರ್ ತಿಳಿಸಿದ್ದಾರೆ.

ಫೆಬ್ರವರಿ 24 ರಿಂದ ಮಾರ್ಚ್ 2 ರ ನಡುವೆ ಪೂರ್ವ ಖಾಸಿ ಹಿಲ್ಸ್ ಜಿಲ್ಲೆಯ ಭಾರತ – ಬಾಂಗ್ಲಾದೇಶ ಗಡಿಯ ಒಂದು ಕಿಮೀ ವ್ಯಾಪ್ತಿಯೊಳಗೆ ಜನರ ಸಂಚಾರವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಪೂರ್ವ ಖಾಸಿ ಹಿಲ್ಸ್ ಜಿಲ್ಲೆಯ ಜಿಲ್ಲಾ ಮ್ಯಾಜಿಸ್ಟ್ರೇಟ್ ಆದೇಶ ಹೊರಡಿಸಿದ್ದಾರೆ. ಪೂರ್ವ ಖಾಸಿ ಹಿಲ್ಸ್ ಜಿಲ್ಲೆಯ ಜಿಲ್ಲಾಡಳಿತವು ಗಡಿ ಪ್ರದೇಶಗಳಲ್ಲಿ ಸಿಆರ್‌ಪಿಸಿಯ ಸೆಕ್ಷನ್ 144 ಅನ್ನು ವಿಧಿಸಿದೆ. ಮಾರ್ಚ್ 2 ರಂದು ತ್ರಿಪುರ ಮತ್ತು ನಾಗಾಲ್ಯಾಂಡ್ ಮತ ಎಣಿಕೆ ಜೊತೆಗೆ ಮೇಘಾಲಯ ವಿಧಾನಸಭಾ ಚುನಾವಣೆಯ ಮತ ಏಣಿಕೆ ನಡೆಯಲಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಕಾಶಿ ವಿಶ್ವನಾಥ ಶೆಟ್ಟಿ ಸಾಹಿತ್ಯ ಕ್ಷೇತ್ರದ ಸಾಧಕರು.

Sun Feb 26 , 2023
      ಕಾಶಿ ವಿಶ್ವನಾಥ ಶೆಟ್ಟಿ ಸಾಹಿತ್ಯ ಕ್ಷೇತ್ರದ ಸಾಧಕರು.ಕಾಶಿ ವಿಶ್ವನಾಥ ಶೆಟ್ಟಿಯವರು 1928ರ ಫೆಬ್ರವರಿ 24ರಂದು ತುಮಕೂರಿನಲ್ಲಿ ಜನಿಸಿದರು. ತಂದೆ ಕೃಷ್ಣ ಶೆಟ್ಟಿ, ತಾಯಿ ಸೀತಾಲಕ್ಷ್ಮಮ್ಮ. ಪ್ರಾರಂಭಿಕ ಶಿಕ್ಷಣ ತುಮಕೂರಿನಲ್ಲಿ ನಡೆಯಿತು. ಮೈಸೂರು ಮಹಾರಾಜಾ ಕಾಲೇಜಿನಿಂದ ಬಿ.ಎ. (ಆನರ್ಸ್) ಹಾಗೂ ಎಂ.ಎ. ಪದವಿ ಗಳಿಸಿದರು.ಕಾಶಿ ವಿಶ್ವನಾಥ ಶೆಟ್ಟಿಯವರು ಶಾಲೆಯಲ್ಲಿ ಓದುತ್ತಿದ್ದಾಗಲೇ ಸಾಹಿತ್ಯದ ಬಗ್ಗೆ ಒಲವು ಮೂಡಿ ಸಾಹಿತ್ಯ ಚಟುವಟಿಕೆಗಳಿಗಾಗಿ ‘ವಿಶ್ವ ಸಂಘ’ ಎಂಬ ಸಂಘವನ್ನು ಸ್ಥಾಪಿಸಿದರು. ಸಂಘವನ್ನು […]

Advertisement

Wordpress Social Share Plugin powered by Ultimatelysocial