ಸ್ಟಿಂಗ್‌: ಹಿಂದೂ ಕಾರ್ಯಕರ್ತೆ ಚೈತ್ರ ಕುಂದಾಪುರ ಅರೆಸ್ಟ್‌ !

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನೀಡುವುದಾಗಿ ಭರವಸೆ ನೀಡಿ ಕೈಗಾರಿಕೋದ್ಯಮಿಗೆ  ಕೋಟಿ ರೂಪಾಯಿ ವಂಚಿಸಿದ ಆರೋಪದ ಮೇಲೆ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಬಂಧನವಾಗಿದೆ.

MLA ಟಿಕೆಟ್‌ ಕೊಡಿಸುವುದಾಗಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಕುಂದಾಪುರ ಸೇರಿದಂತೆ ಇಬ್ಬರನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಉಡುಪಿಯಲ್ಲಿ ವಶಕ್ಕೆ ಪಡೆದಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಚೈತ್ರಾ ಕುಂದಾಪುರ ತನ್ನ ಸಹಚರರ ಜತೆ ಸೇರಿ ಬೈಂದೂರಿನ ಉದ್ಯಮಿಯೊಬ್ಬರಿಗೆ 7 ಕೋಟಿ ಸುಲಿಗೆ ಮಾಡಿದ್ದರು. ಉದ್ಯಮಿ ಮೋಸ ಹೋಗಿರುವ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈ ಸಂಬಂಧ ಉದ್ಯಮಿ ಬೆಂಗಳೂರು ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಚೈತ್ರಾ ಅವರನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಉಡುಪಿ ಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ವಶಕ್ಕೆ ಪಡೆದಿದ್ದಾರೆ. ಚೈತ್ರಾ ಕುಂದಾಪುರ ಜೊತೆಗೆ ಶ್ರೀಕಾಂತ್ ನಾಯ್ಕ್ ಪೆಲತ್ತೂರು ಎಂಬಾತನನ್ನೂ ಪೊಲೀಸರು ವಶಕ್ಕೆ ಪಡೆದಿದ್ದು, ಇಬ್ಬರು ಆರೋಪಿಗಳನ್ನೂ ಅಜ್ಞಾತ ಸ್ಥಳಕ್ಕೆ ಕರೆದೊಯ್ದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.

ಸಾಮಾಜಿಕ ಕಾರ್ಯಕರ್ತ ಎಂದು ಗುರುತಿಸಿಕೊಂಡಿದ್ದ ಬಿಲ್ಲವ ಮುಖಂಡ ಹಾಗೂ ಉದ್ಯಮಿಯಾದ ಗೋವಿಂದ ಬಾಬು ಎಂಬಾತನಿಗೆ ಚೈತ್ರಾ ಕುಂದಾಪುರ ಮತ್ತು ಆಕೆಯ ಸಹಚರರು ವಂಚಿಸಿದ್ದಾರೆ ಎಂದು ಪ್ರಕರಣ ದಾಖಲಾಗಿತ್ತು. ಉದ್ಯಮಿಯಿಂದ ಚೈತ್ರ ಕುಂದಾಪುರ ತಂಡವು ಮೂರು ಹಂತಗಳಲ್ಲಿ ಸುಮಾರು 7 ಕೋಟಿ ರೂಪಾಯಿ ಪಡೆದಿತ್ತು ಎನ್ನಲಾಗಿದೆ.

ಪ್ರಚೋದನಕಾರಿ ಭಾಷಣ ಮಾಡುವ ಚೈತ್ರಾ ಕುಂದಾಪುರ ಬಂಧನ

ಸಿಸಿಬಿ ಪೋಲೀಸರ ವಶದಲ್ಲಿರುವ ಚೈತ್ರಾ ಕುಂದಾಪುರ

MLA ಟಿಕೆಟ್‌ ಕೊಡಿಸುವುದಾಗಿ ಚೈತ್ರ ಕುಂದಾಪುರ ವಂಚನೆ

ಬಿಜೆಪಿ ಟಿಕೆಟ್ ನೀಡುವುದಾಗಿ ಭರವಸೆ ನೀಡಿದ್ದ ಚೈತ್ರ ಕುಂದಾಪುರ

ಉಡುಪಿ ಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ವಶಕ್ಕೆ ಪಡೆದ ಸಿಸಿಬಿ ಪೊಲೀಸ್‌.

Please follow and like us:

tmadmin

Leave a Reply

Your email address will not be published. Required fields are marked *

Next Post

Ganesh Chaturthi 2023: 300 ವರ್ಷಗಳ ನಂತರ ಈ 3 ರಾಶಿಯವರಿಗೆ ಖುಲಾಯಿಸಲಿದೆ ಅದೃಷ್ಟ

Wed Sep 13 , 2023
ಕೆಎನ್‌ಎನ್‌ಡಿಜಿಟಲ್‌ಡೆಸ್ಕ್‌: ವಿನಾಯಕ ಚತುರ್ಥಿ ಎಂದೂ ಕರೆಯಲ್ಪಡುವ ಗಣೇಶ ಚತುರ್ಥಿಯು ಗಣೇಶನ ಜನ್ಮದಿನವನ್ನು ಆಚರಿಸುತ್ತದೆ. ಈ ವರ್ಷ ಇದನ್ನು ಸೆಪ್ಟೆಂಬರ್ 19 ರಿಂದ ಸೆಪ್ಟೆಂಬರ್ 28 ರವರೆಗೆ ಆಚರಿಸಲಾಗುತ್ತದೆ. ಇದು ಭಾರತದಲ್ಲಿ ವಿಶೇಷವಾಗಿ ಪಶ್ಚಿಮ ಮಹಾರಾಷ್ಟ್ರ ರಾಜ್ಯದಲ್ಲಿ ಅತ್ಯಂತ ವ್ಯಾಪಕವಾಗಿ ಆಚರಿಸಲಾಗುವ ಹಬ್ಬಗಳಲ್ಲಿ ಒಂದಾಗಿದೆ.   ಈ ವರ್ಷ ಗಣೇಶ ಚತುರ್ಥಿಯ ಮಂಗಳಕರ ಹಬ್ಬವು ಈ ಕೆಳಗಿನ ರಾಶಿಚಕ್ರ ಚಿಹ್ನೆಗಳನ್ನು ಹೊಂದಿರುವ ಜನರಿಗೆ ಅದೃಷ್ಟವನ್ನು ನೀಡುತ್ತದೆ. ಅಂದರೆ, ಮೇಷ, ಮಿಥುನ ಮತ್ತು […]

Advertisement

Wordpress Social Share Plugin powered by Ultimatelysocial