ಸ್ಥಳದಲ್ಲೇ ಐದು ಮಂದಿ ಸಾವು

ಆಗ್ರಾ-ಲಖನೌ ಹೆದ್ದಾರಿಯ ಬಳಿ ಭೀಕರ ಅಪಘಾತ .ವೇಗವಾಗಿ ಬರುತ್ತಿದ್ದ ಖಾಸಗಿ ಬಸ್ ಒಂದು ರಸ್ತೆ  ಬದಿ ಸುಮ್ಮನೇ ನಿಂತಿದ್ದ ಕಾರಿಗೆ​ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಐದು ಮಂದಿ ಸಾವಿಗೀಡಾಗಿದ್ದು, 25 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇದರ ಬಗ್ಗೆ ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ಗೌರವ್​ ಶುಕ್ಲಾ ಎಂಬುವರು ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ. ಹಾಗು ಸ್ಥಳೀಯರು ಘಟನೆ ನಡೆದ ಪ್ರದೇಶಕ್ಕೆ ಆಗಮಿಸಿ ಬಸ್ಸಿನಲ್ಲಿ ಸಿಲುಕಿದ್ದ ಪ್ರಯಾಣಿಕರನ್ನು ರಕ್ಷಿಸಿದ್ದು, ಗಾಯಗೊಂಡಿದ್ದವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದರೆ. ಅಪಘಾತದಲ್ಲಿ ಮೃತಪಟ್ಟವರಿಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​ ಸಂತಾಪ ಸೂಚಿಸಿದ್ದು, ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

 

 

Please follow and like us:

Leave a Reply

Your email address will not be published. Required fields are marked *

Next Post

ರಾಮಮಂದಿರ ನಿರ್ಮಾಣದ ಕುರಿತಂತೆ ಮಹತ್ವದ ಸಭೆ

Sun Jul 19 , 2020
ಅಯೋಧ್ಯೆಯ ರಾಮಮಂದಿರ ನಿರ್ಮಾಣದ ಕುರಿತಂತೆ ನಡೆದ ವಿಡೀಯೊ ಸಂವಾದದಲ್ಲಿ ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭಾಗಿಯಾದರು.ಈ ಸಭೆಯಲ್ಲಿ ೩೦೦ ಕೋಟಿ ವೆಚ್ಚದ ರಾಮಂದಿರ ನಿರ್ಮಾಣದ ಸಾಧಕ ಬಾಧಕಗಳ ಕುರಿತು ಚರ್ಚೆ ನಡೆಯಿತು ಎಂದು ಹೇಳಲಾಗ್ತಾಯಿದೆ. ಈ ಕುರಿತಂತೆ ಪ್ರತಿಕ್ರಿಯಿಸಿರುವ ಶ್ರೀಗಳು ೨೦೦ ಅಡಿ ಆಳದಲ್ಲಿ ಭೂಮಿಯ ಸಾಮರ್ಥ್ಯವನ್ನ ಪರೀಕ್ಷಿಸಲಾಗುತ್ತಿದ್ದು ಅಲ್ಲಿ ತಾಮ್ರಪತ್ರವನ್ನಿಟ್ಟು ದೇವಸ್ಥಾನವನ್ನ ನಿರ್ಮಾಣ ಮಾಡಲಾಗುವುದು ಹಾಗು ತಾಮ್ರ ಪತ್ರದಲ್ಲಿ ಬರೆಯಬೇಕಾದ ವಿವರದ ಕುರಿತು ಚರ್ಚೆ ನಡೆಯಿತು […]

Advertisement

Wordpress Social Share Plugin powered by Ultimatelysocial