ಹಾಸನ: ಜಿಲ್ಲೆಯಲ್ಲಿ ಇಂದು ಭೀಕರ ರಸ್ತೆ ಅಪಘಾತ ಬೈಕ್, ಟ್ರ್ಯಾಕ್ಟರ್ ಗೆ ಡಿಕ್ಕಿ ಒಂದೇ ಕುಟುಂಬದ ನಾಲ್ವರು ಸಾವು

ಹಾಸನ: ಜಿಲ್ಲೆಯಲ್ಲಿ ಇಂದು ಭೀಕರ ರಸ್ತೆ ಅಪಘಾತವೊಂದು ನಡೆದಿದೆ. ಬೈಕ್, ಟ್ರ್ಯಾಕ್ಟರ್ ಗೆ ಡಿಕ್ಕಿಯಾದ ಪರಿಣಾಮ, ಬೈಕ್ ನಲ್ಲಿ ತೆರಳುತ್ತಿದ್ದಂತ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿರೋ ಘಟನೆ ಚನ್ನರಾಯಪಟ್ಟಣ ತಾಲೂಕು ಕಾರೆಹಳ್ಳಿ ಬಳಿ ನಡೆದಿದೆ.

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕಾರೆಹಳ್ಳಿ ಬಳಿಯಲ್ಲಿ ರಸ್ತೆ ಬದಿಯಲ್ಲಿ ನಿಂತಿದ್ದಂತ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಲೋಕೇಶ್ ಆಚಾರಿ ಹಾಗೂ ಅವರ ಪತ್ನಿ ಲಕ್ಷ್ಮೀ ಮತ್ತು ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ.

ರಸ್ತೆ ಬದಿಯಲ್ಲಿ ಟ್ರ್ಯಾಕ್ಟರ್ ನಿಂತಿರೋದನ್ನು ಗಮನಿಸದಂತ ಲೋಕೇಶ್ ಆಚಾರಿ, ಅದಕ್ಕೆ ಹಿಂಬದಿಯಾಗಿ ಡಿಕ್ಕಿ ಹೊಡೆದಿದ್ದಾರೆ. ಈ ಪರಿಣಾಮವಾಗಿ ಬೈಕ್ ನಲ್ಲಿ ತೆರಳುತ್ತಿದ್ದಂತ ಒಂದೇ ಕುಟುಂಬದ ಲೋಕೇಶ್ ಮತ್ತು ಲಕ್ಷ್ಮೀ ದಂಪತಿ ಹಾಗೂ ಅವರ ಇಬ್ಬರು ಮಕ್ಕಳು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ಚನ್ನರಾಯಪಟ್ಟಣ ಪೊಲೀಸರು ಆಗಮಿಸಿದ್ದು, ಪರಿಶೀಲನ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಈ ಸಂಬಂಧ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬೆಂಗಳೂರಿನಲ್ಲಿ ʻವಂದೇ ಭಾರತ್ ಎಕ್ಸ್‌ಪ್ರೆಸ್‌ʼ ಮೇಲೆ ಕಲ್ಲು ತೂರಾಟ, ಕಿಟಕಿ ಗಾಜಿಗೆ ಹಾನಿ

Sun Feb 26 , 2023
ಬೆಂಗಳೂರು: ಬೆಂಗಳೂರಿನಲ್ಲಿ ಹೈಸ್ಪೀಡ್ ರೈಲಿಗೆ ಕೆಲವರು ಕಲ್ಲು ತೂರಾಟ ನಡೆಸಿದ ಪರಿಣಾಮ ವಂದೇ ಭಾರತ್ ಎಕ್ಸ್‌ಪ್ರೆಸ್‌(Vande Bharat Express)ನ ಗಾಜುಗಳಿಗೆ ಹಾನಿಯಾಗಿದೆ ಎಂದು ನೈಋತ್ಯ ರೈಲ್ವೆ ಇಂದು ಪ್ರಕಟಣೆಯಲ್ಲಿ ತಿಳಿಸಿದೆ. ರೈಲು ಮೈಸೂರಿನಿಂದ ತಮಿಳುನಾಡಿನ ರಾಜಧಾನಿ ಚೆನ್ನೈಗೆ ತೆರಳುತ್ತಿದ್ದ ವೇಳೆ ಕಲ್ಲು ಎಸೆಯಲಾಗಿದೆ.ಘಟನೆಯಿಂದ ಯಾರಿಗೂ ಗಾಯಗಳಾಗಿಲ್ಲ. ಈ ಬಗ್ಗೆ ಪ್ರಕರಣ ದಾಖಲಿಸಲಾಗಿದೆ ಎಂದು ರೈಲ್ವೆ ತಿಳಿಸಿದೆ. ‘ರೈಲು ಸಂಖ್ಯೆ 20608 ಮೈಸೂರು-ಚೆನ್ನೈ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಕೆಲವು ಕಿಡಿಗೇಡಿಗಳು […]

Advertisement

Wordpress Social Share Plugin powered by Ultimatelysocial